ETV Bharat / state

'ಬಂದ್‌'ಬಸ್ತ್​ಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಸತ್ತ ಇಲಿ!

ಕಾವೇರಿ ನೀರಿಗಾಗಿ ಇಂದು ಬೆಂಗಳೂರು ಬಂದ್‌ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾದ ತಿಂಡಿಯಲ್ಲಿ ಇಲಿ ಪತ್ತೆಯಾಗಿದೆ. ಈ ಕುರಿತು ಸಂಚಾರ ವಿಭಾಗದ ಜಂಟಿ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.

Rat was found in the food
ಬಂದೋಬಸ್​ಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಇಲಿ ಪತ್ತೆ..
author img

By ETV Bharat Karnataka Team

Published : Sep 26, 2023, 1:15 PM IST

Updated : Sep 26, 2023, 1:52 PM IST

ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಪ್ರತಿಕ್ರಿಯೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್​ ನಡೆಸುತ್ತಿವೆ. ಈ ಸಂದರ್ಭದಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ತಿಂಡಿಯಲ್ಲಿ ಇಲಿ ಪತ್ತೆಯಾಗಿದೆ. ಯಶವಂತಪುರ ಸಂಚಾರ ಠಾಣಾ ಸಿಬ್ಬಂದಿಯೊಬ್ಬರು ಪೊಲೀಸ್‌ ಇಲಾಖೆಯಿಂದ ಸರಬರಾಜು ಮಾಡಲಾಗಿದ್ದ ತಿಂಡಿಯ ಪೊಟ್ಟಣ ತೆರೆದಾಗ ಇಲಿ ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ವಿಷಯ ತಿಳಿಸಿದ್ದು, ಯಾರೂ ಸಹ ಆ ಆಹಾರ ಸೇವಿಸದಂತೆ ಸೂಚನೆ ನೀಡಿದ್ದಾರೆ.

ಸಂಚಾರ ವಿಭಾಗದ ಜಂಟಿ ಆಯುಕ್ತರ ಪ್ರತಿಕ್ರಿಯೆ: ನಗರ ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಈ ಕುರಿತು ಪ್ರತಿಕ್ರಿಯಿಸಿ, ''ಇಂದು ಬೆಳಿಗ್ಗೆ 7:30ರ ಸುಮಾರಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಸುಮಾರು 180 ಜನ ಸಿಬ್ಬಂದಿಗಾಗಿ ಯಶವಂತಪುರದ ಹೋಟೆಲ್ ಒಂದರಿಂದ ತಿಂಡಿ ತರಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ನೀಡಲಾಗಿದ್ದ ತಿಂಡಿಯಲ್ಲಿ ಸತ್ತ ಇಲಿ ಸಿಕ್ಕಿದೆ. ತಕ್ಷಣ ಅವರು ಇತರೆ ಸಿಬ್ಬಂದಿಯ ಗಮನಕ್ಕೆ ತಂದು ಯಾರೂ ತಿಂಡಿ ಸೇವಿಸದಂತೆ ತಿಳಿಸಿದ್ದಾರೆ. ತಿಂಡಿ ತರಿಸಲಾಗಿದ್ದ ಹೋಟೆಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಿದ್ದೇವೆ. ಸಂಚಾರ ಠಾಣೆಯ ಇನ್ಸ್‌ಪೆಕ್ಟರ್‌ ವಿರುದ್ಧ ಶಿಸ್ತು ಕ್ರಮ ಜರುಗಿಸಲಿದ್ದೇವೆ" ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ, ಬೆಂಗಳೂರು ಬಂದ್​ಗೆ ಮಿಶ್ರ ಪ್ರತಿಕ್ರಿಯೆ​

Last Updated : Sep 26, 2023, 1:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.