ಬೆಂಗಳೂರು: ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿರುವ ನಗರದ ಪೊಲೀಸರು 33 ಜನರನ್ನು ಬಂಧಿಸಿದ್ದಾರೆ. ಇಲ್ಲಿನ ಒಟ್ಸ್ ಪಬ್ನಲ್ಲಿ ರೇವ್ ಪಾರ್ಟಿ ನಡೆಸುತ್ತಿರುವ ಖಚಿತ ಮಾಹಿತಿ ಅರಿತು ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಸುಮಾರು 51 ಜನರು ಮಧ್ಯರಾತ್ರಿ 12.30ರ ವೇಳೆಯಲ್ಲೂ ಡಿಜೆ ಹಾಕಿಕೊಂಡು ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಎಲ್ಲರನ್ನೂ ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ 31 ಜನರು ಡ್ರಗ್ಸ್ ಸೇವನೆ ಮಾಡಿರುವುದು ಗೊತ್ತಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
ಪಾರ್ಟಿ ಆಯೋಜಕ ಹರಿಕೃಷ್ಣ, ಡಿಜೆ ಸೆಂಥಿಲ್ ಕುಮಾರ್ ಸೇರಿ 33 ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಎಂಡಿಎಂಎ, ಚರಸ್, ಗಾಂಜಾ ಸೇರಿ ಮೂರು ಲಕ್ಷ ರೂ. ಮೌಲ್ಯದ ಡ್ರಗ್ಸ್ ಸಿಕ್ಕಿದೆ. ಬಂಧಿತರಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್ಗಳಾಗಿದ್ದಾರೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವೈಯಕ್ತಿಕ ದ್ವೇಷಕ್ಕಾಗಿ ಜೀವಂತ ಪಿಸ್ತೂಲ್, ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಆರೋಪಿಗಳು ಅರೆಸ್ಟ್