ಬೆಂಗಳೂರು: 17 ಶಾಸಕರನ್ನು ಪ್ರಸಕ್ತ ವಿಧಾನಸಭೆಯಿಂದ ಅನರ್ಹಗೊಳಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ನ್ಯಾಯಾಲಯ ಹಿನ್ನಡೆಯನ್ನುಂಟು ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಅನರ್ಹ ಶಾಸಕರ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ವಿಧಾನಸಭೆಯಿಂದ ಸ್ಪರ್ಧಿಸುವಂತೆ ಅನರ್ಹಗೊಳಿಸಿದ್ದ ಸ್ಪೀಕರ್ ಆದೇಶಕ್ಕೆ ಹಿನ್ನಡೆಯಾದಂತಾಗಿದೆ ಎಂದರು.
ಇಂದು 3 ಗಂಟೆಗೆ ಬಿಜೆಪಿ ಕೋರ್ ಕಮಿಟಿಸಭೆ ಇದೆ. ಅನರ್ಹ ಶಾಸಕರ ನಡೆ ನೋಡಿಕೊಂಡು ಯಾರು ಅಭ್ಯರ್ಥಿ ಏನು ಅನ್ನುವುದು ನಿರ್ಧಾರ ಆಗುತ್ತದೆ. ನಂತರ ಹೈಕಮಾಂಡ್ ಜೊತೆ ಮುಂದಿನ ದಿನಗಳ ಸಮನ್ವಯತೆ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ ಎಂದು ರವಿಕುಮಾರ್ ಮಾಹಿತಿ ನೀಡಿದ್ರು.