ETV Bharat / state

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ದೂರು ದಾಖಲಿಸಿದ ಆರ್​ಡಿಪಿಆರ್​ ಇಲಾಖೆ - RDPR department has filed a complaint regarding the Santosh suicide case

ಇಲಾಖೆಯ ಲೆಟರ್​​​ಹೆಡ್‌ನಲ್ಲಿ ಅನುಮತಿ ನೀಡಲಾಗಿದೆ ಎನ್ನುವ ರೀತಿ ನಕಲು ಮಾಡಿದ್ದಾರೆ ಎಂದು ವಿಧಾನಸೌಧ ಠಾಣೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀ‌ನ ಕಾರ್ಯದರ್ಶಿ ರಮೇಶ್ ದೂರು ಸಲ್ಲಿಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ದೂರು ದಾಖಲಿಸಿದ ಆರ್​ಡಿಪಿಆರ್​ ಇಲಾಖೆ

author img

By

Published : Apr 21, 2022, 9:51 PM IST

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ವಿಷಯ ಬೆಳಕಿಗೆ ಬಂದಿದೆ. ಪಂಚಾಯತ್​ ರಾಜ್ ಇಲಾಖೆಯಿಂದ ನೀಡಿದ್ದಾರೆ ಎನ್ನಲಾದ ಅನುಮತಿ ಪತ್ರವೇ ನಕಲು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ತಿಳಿಸಿದ್ದು, ಈ ಸಂಬಂಧ ವಿಧಾನಸೌಧ ಠಾಣೆಗೆ ದೂರು ನೀಡಿದೆ. ಇಲಾಖೆಯ ಲೆಟರ್​​​ಹೆಡ್‌ನಲ್ಲಿ ಅನುಮತಿ ನೀಡಲಾಗಿದೆ ಎನ್ನುವ ರೀತಿ ನಕಲು ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀ‌ನ ಕಾರ್ಯದರ್ಶಿ ರಮೇಶ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ: ವಿದ್ಯುತ್​ ಶಾಕ್​ಗೆ ಇಬ್ಬರು ಸ್ನೇಹಿತರ ಸಾವು

ಬೆಳಗಾವಿ ಜಿಲ್ಲಾ ಪಂಚಾಯತ್​ ಮಾಜಿ ಅಧ್ಯಕ್ಷೆ ಆಶಾ ಐಹೊಳೆ ಕಾಮಾಗಾರಿ ಮಾಡಲು ಅನುಮತಿ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿತ್ತು. ಈ ಪತ್ರದ ಅಧಾರದಲ್ಲಿ ಸಂತೋಷ್ ಕಾಮಗಾರಿಗಳನ್ನು ಮಾಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದ್ರೆ, ಈಗ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಪತ್ರವನ್ನೇ ನಕಲು ಎಂದು ವಿಧಾನಸೌಧ ಠಾಣೆಗೆ ದೂರು ನೀಡಿದೆ. ಸದ್ಯ ದೂರಿನನ್ವಯ ಎಫ್​​ಐಆರ್ ದಾಖಲಾಗಿದ್ದು, ನಕಲು ಮಾಡಿದವರಿಗಾಗಿ ಪೊಲೀಸರ ಹುಡುಕಾಟ ನಡೆಸ್ತಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.