ETV Bharat / state

ಪಿಎಸ್ಐ ನೇಮಕಾತಿ ಮರುಪರೀಕ್ಷೆ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಕೆಎಟಿ - KAT on PSI recruitment Re examination

ಪಿಎಸ್ಐ ನೇಮಕಾತಿಗೆ ಮರುಪರೀಕ್ಷೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೆಎಟಿ ಸಮರ್ಥಿಸಿದೆ.

Re examination for PSI recruitment KAT justification for Govt order
ಪಿಎಸ್ಐ ನೇಮಕಾತಿಗೆ ಮರುಪರೀಕ್ಷೆ-ಸರ್ಕಾರದ ಆದೇಶಕ್ಕೆ ಕೆಎಟಿ ಸಮರ್ಥನೆ
author img

By

Published : Jul 20, 2022, 7:44 AM IST

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ನಡೆದಿರುವ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡಿದೆ. ನೇಮಕಾತಿಗೆ ಮರುಪರೀಕ್ಷೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಸಮರ್ಥಿಸಿದೆ. ಮರುಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬೆಂಗಳೂರಿನ ಪವಿತ್ರಾ ಎಲ್‌.ಎನ್‌ ಸೇರಿದಂತೆ 28 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಮಂಗಳವಾರ ಈ ಆದೇಶ ನೀಡಿದೆ.

ಅರ್ಜಿ ವಜಾ: ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಆದೇಶದ ಪ್ರಕಾರ ರಾಜ್ಯ ಸರ್ಕಾರಕ್ಕೆ ನೇಮಕಾತಿ ಮಾಡಲು ಆದೇಶಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಕೆಎಟಿ ಸದಸ್ಯರಾದ ಟಿ.ನಾರಾಯಣ ಸ್ವಾಮಿ ಮತ್ತು ಜಿ.ಲತಾ ಕೃಷ್ಣರಾವ್‌ ನೇತೃತ್ವದ ವಿಭಾಗೀಯ ಪೀಠವು ವಜಾ ಮಾಡಿದೆ.

ಅರ್ಜಿದಾರರ ಕೋರಿಕೆ: ಪೊಲೀಸ್‌ ಇಲಾಖೆಯ 545 ಸಬ್‌ ಇನ್ಸ್‌ಪೆಕ್ಟರ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆಗೆ ಮುಂದಾಗಿದೆ. ಆದರೆ ರಾಜ್ಯ ಸರ್ಕಾರದ ಈ ನಡೆಯಿಂದ ಯಾವುದೇ ಅಕ್ರಮವೆಸಗದೆ ಕಳಂಕ ರಹಿತವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಆದೇಶದ ಪ್ರಕಾರ ನೇಮಕಾತಿ ಆದೇಶ ನೀಡಲು ಆದೇಶಿಸಬೇಕು ಎನ್ನುವುದು ಅರ್ಜಿದಾರರ ಕೋರಿಕೆಯಾಗಿತ್ತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಡಿ.ಆರ್‌.ರವಿಶಂಕರ್ ಪಿಎಸ್‌ಐ ಪರೀಕ್ಷೆಗೆ ಸಂಬಂಧಿಸಿದಂತೆ ಒಂದು ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮದ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದೆ. ಸಿಐಡಿ ತನಿಖೆ ನಡೆಸುತ್ತಿದ್ದು, ಮಧ್ಯಂತರ ವರದಿ ಆಧರಿಸಿ ರಾಜ್ಯ ಸರ್ಕಾರವು ಮರುಪರೀಕ್ಷೆ ನಡೆಸುವುದಾಗಿ ಆದೇಶಿಸಿದೆ. ಸಿಐಡಿ ತನಿಖೆ ಪೂರ್ಣಗೊಳ್ಳದಿರುವಾಗ ಇಡೀ ನೇಮಕಾತಿ ರದ್ದುಪಡಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ವಾದಿಸಿದ್ದರು.

ಕಲಬುರಗಿಯ ಒಂದು ಪರೀಕ್ಷಾ ಕೇಂದ್ರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಿಐಡಿ ಮಧ್ಯಂತರ ವರದಿ ಸಲ್ಲಿಸಿದೆ. ಇದನ್ನಾಧರಿಸಿ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಲಾಗುವುದು ಎಂದು ಆದೇಶಿಸಿದೆ. ಪಿಎಸ್‌ಐ ಹುದ್ದೆಗೆ 1.2 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದು, ದೈಹಿಕ ಪರೀಕ್ಷೆ ಮುಗಿದು 54,104 ಮಂದಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಶೇ.1ರಷ್ಟು ಅಭ್ಯರ್ಥಿಗಳೂ ಆಯ್ಕೆಯಾಗಿಲ್ಲ. ಪ್ರತಿ ಆಟದಲ್ಲಿಯೂ ಸಚಿನ್‌ ತೆಂಡೂಲ್ಕರ್‌ ಶತಕ ಬಾರಿಸಲು ಸಾಧ್ಯವಿಲ್ಲ. ಪ್ರತಿ ಪರೀಕ್ಷೆಯಲ್ಲೂ ಅಭ್ಯರ್ಥಿಗಳು ಟಾಪರ್‌ ಆಗಿ ಹೊರಹೊಮ್ಮಲಾರರು. ಹಾಗಾಗಿ ಮರು ಪರೀಕ್ಷೆ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ: ಭೀಮಾತೀರದ ಹಂತಕರೆನ್ನುವ ಕಳಂಕ ತೊಡೆದು ಹಾಕಿ: ಎಡಿಜಿಪಿ ಅಲೋಕ್​ಕುಮಾರ್​ಗೆ ಮನವಿ

ರಾಜ್ಯ ಸರ್ಕಾರ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸುಬ್ರಹ್ಮಣ್ಯ, ಹಗರಣವು ವ್ಯಾಪಕವಾಗಿರುವುದರಿಂದ ಕಳಂಕಿತರು ಮತ್ತು ಕಳಂಕರಹಿತರನ್ನು ಪ್ರತ್ಯೇಕಿಸಲಾಗದು. ಪೊಲೀಸ್‌ ನೇಮಕಾತಿ ವಿಭಾಗದ ಪ್ರಮುಖ ಅಧಿಕಾರಿಗಳು ಈ ಪ್ರಕರಣದಲ್ಲಿ ಬಂಧಿತರಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಳ್ಳಲು ಇನ್ನೂ ಕಾಲಾವಕಾಶ ಬೇಕಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗದು ಎನ್ನುವುದನ್ನು ಕೆಎಟಿಗೆ ಮನವರಿಕೆ ಮಾಡಿಕೊಟ್ಟಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.