ಬೆಂಗಳೂರು: ಮಂಡ್ಯ ಜಿಲ್ಲೆಯ ಮೈಶುಗರ್ಸ್ ಹಾಗೂ ಪಿಎಸ್ಎಸ್ಕೆ ಕಾರ್ಖಾನೆಗಳನ್ನು ಪುನಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮಾಜಿ ಸಿಎಂ ಎಸ್ಎಂ ಕೃಷ್ಣ ಪತ್ರ ಬರೆದಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಪ್ರಮುಖ ಬೆಳೆಯಾಗಿದ್ದು, ಪ್ರತಿ ವರ್ಷ 40 ರಿಂದ 50 ಲಕ್ಷ ಟನ್ ಕಬ್ಬನ್ನು ಬೆಳೆಯುತ್ತಾನೆ. ಜಿಲ್ಲೆಯಲ್ಲಿ ಪ್ರಸ್ತುತ ಕೇವಲ ಮೂರು ಖಾಸಗಿ ಕಾರ್ಖಾನೆಗಳಿವೆ. ಈ ಮೂರು ಖಾಸಗಿ ಕಾರ್ಖಾನೆಗಳಿಗೆ ಮಂಡ್ಯದ ಎಲ್ಲ ಕಬ್ಬು ಅರೆಯುವ ಸಾಮರ್ಥ್ಯ ಇಲ್ಲ. ಹೀಗಾಗಿ ಸ್ಥಗಿತಗೊಂಡಿರುವ ಮೈ ಶುಗರ್ಸ್ ಹಾಗೂ ಪಿಎಸ್ಎಸ್ಕೆ ಕಾರ್ಖಾನೆಗಳನ್ನು ಪುನರಾರಂಭಿಸುವ ಮೂಲಕ ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರು, ರೈತರನ್ನು ರಕ್ಷಿಸಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.