ETV Bharat / state

ಯಾವುದೇ ಖಾತೆ ನೀಡಿದರೂ ನಿಭಾಯಿಸಲು ಸಿದ್ಧ: ಬೈರತಿ ಬಸವರಾಜ್ - ಖಾತೆ ಹಂಚಿಕೆ ಬಗ್ಗೆ ಬೈರತಿ ಬಸವರಾಜ ಪ್ರತಿಕ್ರಿಯೆ

ಕಳೆದ ಒಂದು ವರ್ಷಗಳಿಂದ ನಗರಾಭಿವೃದ್ಧಿ ಸಚಿವನಾಗಿ‌ ಕೆಲಸ ಮಾಡಿದ್ದೇನೆ. ನನ್ನ ಮೇಲೆ ಕೆಲಸ ನೋಡಿ ಬೊಮ್ಮಾಯಿ ಅವರು ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದ್ಧಾರೆ.

ready-to-work-in-any-minister-post-byrathi-basavaraj
ಯಾವುದೇ ಖಾತೆ ನೀಡಿದರೂ ನಿಭಾಯಿಸಲು ಸಿದ್ಧ: ಬೈರತಿ ಬಸವರಾಜ್
author img

By

Published : Aug 6, 2021, 4:59 AM IST

ಕೆ.ಆರ್.ಪುರ: ನನ್ನ‌ ಕ್ಷೇತ್ರದ ಜನರ ಆಶಿರ್ವಾದದಿಂದ ಎರಡನೇ ಬಾರಿಗೆ ರಾಜ್ಯದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟು ಯಾವುದೇ ಖಾತೆ ನೀಡಿದರೂ ನಿಭಾಯಿಸಲು ನಾನು ಸಿದ್ಧ ಎಂದು ಸಚಿವ ಬೈರತಿ ಬಸವರಾಜ್ ಹೇಳಿದ್ಧಾರೆ.

ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೈರತಿ ಬಸವರಾಜ ಅವರಿಗೆ ಶುಭಕೋರಲು ಅವರ ನಿವಾಸಕ್ಕೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಪಕ್ಷದ ಮುಖಂಡರು ಆಗಮಿಸಿದ್ದರು. ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಒಂದು ವರ್ಷಗಳಿಂದ ನಗರಾಭಿವೃದ್ಧಿ ಸಚಿವನಾಗಿ‌ ಕೆಲಸ ಮಾಡಿದ್ದೇನೆ. ನನ್ನ ಮೇಲೆ ಕೆಲಸ ನೋಡಿ ಬೊಮ್ಮಾಯಿ ಅವರು ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ. ನಗರಾಭಿವೃದ್ಧಿ ಖಾತೆಯನ್ನೇ ನೀಡಿದರೆ ಇನ್ನಷ್ಟು ಅಭಿವೃದ್ಧಿ ಕೆಲಸಗಳ ಮತ್ತು ಅಭಿವೃದ್ಧಿಗೆ ವೇಗ ನೀಡಲಾಗುವುದು ಎಂದರು.

ಜೊತೆಗೆ ಮಳೆಹಾನಿ ಹಾಗೂ ಕೋವಿಡ್ ತುರ್ತು ಪರಿಸ್ಥಿತಿ ಹಿನ್ನೆಲೆ ದಾವಣಗೆರೆ ಉಸ್ತುವಾರಿ ಜವಾಬ್ದಾರಿ ನೀಡಿದ್ದು ಇಂದಿನಿಂದಲೆ ಕಾರ್ಯಪ್ರವೃತ್ತರಾಗುತ್ತೇನೆ. ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಪ್ರವಾಸ ಮಾಡಿ ಮಳೆಯಿಂದ ಯಾವುದೇ ಹಾನಿಯಾಗಿದ್ದರೆ ತಕ್ಷಣ ಪರಿಹಾರ ನೀಡಲು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.

ಇದೇ ವೇಳೆ ತಮ್ಮ ಮೇಲೆ ನಂಬಿಕೆಯಿಟ್ಟು ಎರಡನೇ ಬಾರಿಗೆ ಸಚಿವ ಸ್ಥಾನ ನೀಡಿದ ಪಕ್ಷ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಮುಖಂಡರಿಗೆ ಧನ್ಯವಾದ ತಿಳಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.