ETV Bharat / state

ಮೈತ್ರಿ ಸರ್ಕಾರ ಎಡವಿದ್ದೆಲ್ಲಿ?ಶಾಸಕರು ರಾಜೀನಾಮೆ ನೀಡಿದ್ದಕ್ಕೆ ಕಾರಣಗಳೇನು? ರಾಜ್ಯ ರಾಜಕೀಯದ ಸಂಪೂರ್ಣ ಚಿತ್ರಣ

ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ನಂತರ ಕುಮಾರಸ್ವಾಮಿ 15 ದಿನಗಳಲ್ಲಿ ಬಹುಮತ ಸಾಬೀತುಪಡಿಸಲು 2018 ಮೇ 23 ರಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದರು.

ಮೈತ್ರಿ ಸರ್ಕಾರ ಎಡವಿದೆಲ್ಲಿ... ಶಾಸಕರು ರಾಜೀನಾಮೆ ನೀಡಿದ್ದಕ್ಕೆ ಕಾರಣಗಳಿವು?
author img

By

Published : Jul 9, 2019, 10:15 PM IST

ಬೆಂಗಳೂರು: 2018ರ ಮೇ 15 ರಂದು ವಿಧಾನಸಭೆ ಚುನಾವಣೆ ನಡೆದ ದಿನದಿಂದಲೂ ರಾಜ್ಯ ರಾಜಕಾರಣ ಒಂದಲ್ಲೊಂದು ರೀತಿಯಲ್ಲಿ ರಾಷ್ಟ್ರಮಟ್ಟದವರೆಗೂ ಸುದ್ದಿಯಾಗಿತ್ತು. ಆದ್ರೆ, ಅಂದಿನಿಂದಲೂ ಒಂದಿಲ್ಲೊಂದು ರೀತಿಯ ಕಂಟಕಗಳನ್ನು ಎದುರಿಸಿಕೊಂಡೇ ಬರುತ್ತಿದೆ.

ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗಲಿಲ್ಲ. ಆದರೆ, ಅತಿ ಹೆಚ್ಚು ಸ್ಥಾನ ಪಡೆದಿರುವ ಬಿಜೆಪಿ ಸರ್ಕಾರ ರಚನೆ ಮಾಡಲು ಮುಂದಾಯಿತು. ಮೇ 17 ರಂದು ಬೆಳಗ್ಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸರ್ಕಾರ ರಚಿಸುವಂತೆ ಬಿಜೆಪಿಗೆ ಆಹ್ವಾನ ನೀಡಿದ್ದ ರಾಜ್ಯಪಾಲ ವಿ.ಆರ್. ವಾಲಾ ಅವರ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವಿಶ್ವಾಸಮತ ಸಾಬೀತುಪಡಿಸುವವರೆಗೂ ಯಡಿಯೂರಪ್ಪ ಯಾವುದೇ ಆಡಳಿತಾತ್ಮಕ ತೀರ್ಮಾನ ತೆಗೆದುಕೊಳ್ಳಬಾರದು ಎಂದು ತಿಳಿಸಿತ್ತು.

ಬಹುಮತವಿಲ್ಲದ ಕಾರಣ ಕಾಂಗ್ರೆಸ್-ಜೆಡಿಎಸ್ ಪಕ್ಷ ಸುಪ್ರೀಂ ಕೋರ್ಟ್ ಮೊರೆ ಹೋಯಿತು. ವಿಚಾರಣೆ ನಡೆಸಿದ ಕೋರ್ಟ್, ಮೇ 19 ರಂದು ಸಂಜೆ 4 ಗಂಟೆ ವೇಳೆಗೆ ವಿಶ್ವಾಸಮತ ಸಾಬೀತುಪಡಿಸಬೇಕೆಂದು ಆದೇಶಿಸಿತ್ತು. ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರು ಪ್ರಮಾಣ ವಚನ ಸ್ವೀಕರಿಸಬೇಕೆಂದು ಸೂಚಿಸಿತ್ತು.
ಹಾಗಾಗಿ, ರಾಜ್ಯಪಾಲರು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದರು.

ಬೋಪಯ್ಯ ಅವರ ನೇಮಕವನ್ನು ಕಾಂಗ್ರೆಸ್ ವಿರೋಧಿಸಿತ್ತು. ಬಹುಮತವಿಲ್ಲದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಮೇ 19 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿ ನಂತರ ವಾಪಸ್ ಪಡೆದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದರು. ಜೆಡಿಎಸ್ ಸರ್ಕಾರ ರಚನೆಗೆ ಕಾಂಗ್ರೆಸ್ ಪೂರ್ಣ ಬೆಂಬಲ ಸೂಚಿಸಿ ಮೇ 15 ರಂದೇ ಮೈತ್ರಿ ಸರ್ಕಾರ ರಚನೆ ಸಂಬಂಧ ರಾಜ್ಯಪಾಲರಿಗೆ ಉಭಯ ಪಕ್ಷದ ಮುಖಂಡರು ಮನವಿ ಸಲ್ಲಿಸಿದ್ದರು.

ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ನಂತರ ಕುಮಾರಸ್ವಾಮಿ ಅವರು 15 ದಿನಗಳಲ್ಲಿ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಆದೇಶಿಸಿ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡಿದರು. ಹಾಗಾಗಿ, ಹೆಚ್.ಡಿ.ಕುಮಾರಸ್ವಾಮಿ ಅವರು 2018 ಮೇ 23 ರಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದರು.

ಈ ಸಮಾರಂಭಕ್ಕೆ ರಾಷ್ಟ್ರನಾಯಕರು ಆಗಮಿಸಿದ್ದು ವಿಶೇಷವಾಗಿತ್ತು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂತು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಸಂಪುಟ ರಚನೆಯಾಯಿತು. ಜೂನ್ 6 ರಂದು ಕಾಂಗ್ರೆಸ್ ನಿಂದ 15 ಹಾಗೂ ಜೆಡಿಎಸ್ ನಿಂದ 10 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಉಳಿದ ಸಚಿವ ಸ್ಥಾನ ತುಂಬುವಷ್ಟರಲ್ಲೇ ಮೈತ್ರಿಯಲ್ಲಿ ಬಿರುಕು ಮೂಡಿತ್ತು.
ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಭಾವುಟ ಹಾರಿಸಿರುವ 13 ಶಾಸಕರು ಸರ್ಕಾರಕ್ಕೆ ಮುಳುವಾಗಿದ್ದು, ಮತ್ತೊಬ್ಬರು ರಾಜೀನಾಮೆ ನೀಡುವ ಮೂಲಕ ರಾಜೀನಾಮೆ ನೀಡಿದವರ ಸಂಖ್ಯೆ 14 ಕ್ಕೆ ಏರಿದೆ.

Reason of MLAs resign
ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತಿರುವುದು

ಮತ್ತೊಂದೆಡೆ ರಾಜೀನಾಮೆ ನೀಡಿರುವ ಶಾಸಕರ ಈ ನಿರ್ಧಾರಕ್ಕೆ ಕಾರಣಗಳೇನೆಂಬುದು ಸಹ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಆರಂಭಗೊಂಡ ರಮೇಶ್ ಜಾರಕಿಹೊಳಿ ರಾಜಕೀಯ ವೈರುಧ್ಯ 14 ಶಾಸಕರ ರಾಜೀನಾಮೆವರೆಗೂ ಬಂದಿದ್ದು, ಈ ಅವಧಿಯ ಬೆಳವಣಿಗೆಗಳು ಶಾಸಕರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ.

ಕಾರಣಗಳೇನು?
ಪ್ರಮುಖವಾಗಿ ಬಂಡಾಯ ಶಾಸಕರ ನಾಯಕತ್ವವಹಿಸಿದ್ದ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ರಮೇಶ್ ವಿರುದ್ಧ ನಿಂತ ಸಚಿವ ಡಿಕೆ ಶಿವಕುಮಾರ್​ ಮೊದಲ ಕಾರಣ ಎನ್ನಲಾಗಿದೆ. ಅಲ್ಲದೇ ಇದೇ ವೇಳೆ ಸಚಿವ ಸ್ಥಾನದಿಂದ ಕಿತ್ತು ಹಾಕಿ ಅವಮಾನ ಮಾಡಿದ್ದು, ಪಿಎಲ್​ಡಿಪಿ ಬ್ಯಾಂಕ್ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮೇಲುಗೈ ಸಾಧಿಸಿದ್ದು ಕೂಡ ರಮೇಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್​ನಿಂದ ದೂರ ಮಾಡಿತ್ತು.

Reason of MLAs resign
ಸ್ವಪಕ್ಷದ ನಾಯಕರ ವಿರುದ್ಧ ಬಂಡೆದ್ದ ರೋಷನ್​ ಬೇಗ್

ರಾಜೀನಾಮೆ ನಡೆಯಲ್ಲಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರಿಗೆ ರಾಜೀನಾಮೆಗೆ ಪ್ರಮುಖ ಕಾರಣ ಬೆಂಗಳೂರಿನಲ್ಲಿ ಕಿರಿಯರಿಗೆ ಮಣೆ ಹಾಕಿ ಸಚಿವ ಸ್ಥಾನ ನಿರಾಕರಿಸಿದ್ದು.ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಇಷ್ಟಾದರು ಸಿದ್ದರಾಮಯ್ಯ ಹಾಗೂ ಪರಮೇಶ್ವರ್, ದಿನೇಶ್ ಗುಂಡೂರಾವ್ ಅವರು ನಿರ್ಲಕ್ಷ್ಯ ಮಾಡಿದ್ದರು. ಅಸಮಾಧಾನವಾಗಿದ್ದರೂ ಮನವೊಲಿಸಲು ಹೈಕಮಾಂಡ್ ಯಾವುದೇ ಪ್ರಯತ್ನ ಮಾಡಿಲ್ಲ. ಇದರಿಂದ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಬಿಜೆಪಿಯಲ್ಲಿ ನನಗೆ ಮತ್ತು ಮಗಳಿಗೆ ಭವಿಷ್ಯ ಇದೆ ಎನ್ನುವ ಲೆಕ್ಕಾಚಾರ ಹಾಗೂ ಸಿದ್ದರಾಮಯ್ಯ ಆ್ಯಂಡ್ ಟೀಂಗೆ ಬಿಸಿ ಮುಟ್ಟಿಸಲು ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಹೆಚ್ ವಿಶ್ವನಾಥ್ ರಾಜೀನಾಮೆ ಜೆಡಿಎಸ್ ವರಿಷ್ಠರಿಗೆ ಶಾಕ್ ನೀಡಿದೆ. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ರಾಜೀನಾಮೆಗೆ ನಿರ್ಧಾರ ಮಾಡಿರುವ ವಿಶ್ವನಾಥ್, ಸಮನ್ವಯ ಸಮಿತಿಯಿಂದ ದೂರ ಇಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದರು. ಪಕ್ಷದ ಅಧ್ಯಕ್ಷರಾದರೂ ಪದೇ ಪದೇ ಅವರಿಗೆ ಅವಮಾನ ಎದುರಾಗಿತ್ತು. ಇದರಿಂದ ಬೇಸತ್ತು ಪದತ್ಯಾಗ ನಿರ್ಧಾರ ಮಾಡಿದ್ದರು. ಅಲ್ಲದೇ ತಮ್ಮ ಮತ್ತು ಮಗನ ಭವಿಷ್ಯಕ್ಕಾಗಿ ಬಿಜೆಪಿ ಸೇರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಮೂರು ಬಾರಿ ಸಂಪುಟ ವಿಸ್ತರಣೆ ಆದರೂ ಸಚಿವ ಸ್ಥಾನ ಆಸೆ ಹೊಂದಿದ್ದ ಬಿ ಸಿ ಪಾಟೀಲ್ ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ದೋಸ್ತಿಗಳು ಮಂತ್ರಿಗಿರಿ ನೀಡದ ಕಾರಣ ಬಿ.ಸಿ ಪಾಟೀಲ್ ರಾಜೀನಾಮೆ ನಿರ್ಧಾರಕ್ಕೆ ಮುಂದಾಗಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್​ನಿಂದ ಒಂದು ಕಾಲು ಹೊರಗೇ ಇಟ್ಟಿರುವ ಬಿ ಸಿ ಪಾಟೀಲ್ ಅವರಿಗೆ ನಿಗಮ ಮಂಡಳಿಯಲ್ಲೂ ಯಾವುದೇ ಸ್ಥಾನಮಾನ ಸಿಕ್ಕಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಅವರು, ರಾಜೀನಾಮೆ ನೀಡಿದ್ದಾರೆ.

Reason of MLAs resign
ಅತೃಪ್ತ ಶಾಸಕರು ಮುಂಬೈಗೆ ತೆರಳುತ್ತಿರುವುದು

ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬಳಿಕ ಯಾವುದೇ ಸ್ಥಾನಮಾನ ಸಿಗದೆ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ , ಬಿಜೆಪಿಯಿಂದಲೇ ಬಂದು ಮತ್ತೆ ಮಾತೃಪಕ್ಷಕ್ಕೆ ಹೋಗುವ ತೀರ್ಮಾನ ಮಾಡಿದ್ದಾರೆ. ಬಳ್ಳಾರಿ ರಾಜಕೀಯದಲ್ಲಿ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪವೇ ಆನಂದ್ ಸಿಂಗ್ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ.

ಉಳಿದಂತೆ ಜೆಡಿಎಸ್​ನಲ್ಲಿ ಸಿಗದ ಸ್ಥಾನಮಾನ, ಸಚಿವ ಸ್ಥಾನ ಹಾಗೂ ಮಂಡ್ಯ ರಾಜಕೀಯದಲ್ಲೂ ಹಿಡಿತ ಸಿಗದ ಹಿನ್ನೆಲೆಯಲ್ಲಿ ನಾರಾಯಣ ಗೌಡ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ರಮುಖವಾಗಿ ಕೆ.ಆರ್. ಪೇಟೆ ರಾಜಕೀಯದಲ್ಲಿ ರೇವಣ್ಣ-ಭವಾನಿ ರೇವಣ್ಣ ಹಸ್ತಕ್ಷೇಪ ಹಾಗೂ ಎಲೆಕ್ಷನ್ ರಾಜಕೀಯಕ್ಕೆ ವಿದಾಯದತ್ತ ಚಿಂತನೆ ನಡೆಸಿದ್ದ ಅವರು ಮೊದಲಿನಿಂದಲೂ ಬಿಜೆಪಿ ಸೇರುವ ಕಡೆ ಹೆಚ್ಚು ಒಲವು ತೋರಿದ್ದರು.

ಮೈತ್ರಿ ಸರ್ಕಾರದಲ್ಲಿ ದೇವೇಗೌಡರ ಕುಟುಂಬದ ವಿಪರೀತ ಹಸ್ತಕ್ಷೇಪಕ್ಕೆ ಅಸಮಾಧಾನ ಗೊಂಡಿದ್ದ ಎಸ್.ಟಿ ಸೋಮಶೇಖರ್ ಅವರನ್ನು ಬಿಡಿಎ ಆಯುಕ್ತರ ಬದಲಾವಣೆಗೆ ಡಿಸಿಎಂ ಪರಮೇಶ್ವರ್ ಸತಾಯಿಸಿದ್ದು ಅಸಮಾಧಾನಕ್ಕೆ ಕಾರಣವಾಗಿತ್ತು. ಅಲ್ಲದೇ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಿದ್ದರು. ಪರಿಣಾಮ ಬಿಜೆಪಿ ಸೇರಿದರೆ ಬೆಂಗಳೂರು ರಾಜಕಾರಣದಲ್ಲಿ ಭವಿಷ್ಯ ಇದೆ ಎಂಬ ಕಾರಣದಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷದ ನಿಷ್ಠರಾಗಿದ್ದ ಶಾಸಕ ಮುನಿರತ್ನ ಅವರ ರಾಜೀನಾಮೆ ಪಕ್ಷದ ನಾಯಕರಿಗೆ ಅಚ್ಚರಿ ಹಾಗೂ ಆಘಾತಕಾರಿಯಾಗಿದ್ದು, ಬಿಜೆಪಿಗೆ ಸೇರಿದರೆ ಬೆಂಗಳೂರಿನಲ್ಲಿ ಉತ್ತಮ ಭವಿಷ್ಯ ಸಿಗಲಿದೆ ಎಂದು ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಆರಂಭದಿಂದಲೂ ಸಚಿವ ಸ್ಥಾನ ಮೇಲೆ ಕಣ್ಣಿಟ್ಟಿದ್ದ ಶಿವರಾಂ ಹೆಬ್ಬಾರ್ ಅವರಿಗೆ ಪಕ್ಷದ ನಾಯಕರು ಸಚಿವ ಸ್ಥಾನ ನೀಡದೇ ಸತಾಯಿಸಿದ್ದರು. ಅಲ್ಲದೇ ಸಚಿವ ಸ್ಥಾನ ನೀಡದೆ ನಿಗಮ ಮಂಡಳಿ ಕೊಟ್ಟಿದ್ದು ಅಸಮಾಧಾನ ಹೆಚ್ಚಾಗಲು ಕಾರಣವಾಗಿತ್ತು. ಮೊದಲಿನಿಂದಲೂ ಬಿಜೆಪಿ ಕಡೆ ಹೆಚ್ಚು ಒಲವು ಹೊಂದಿದ್ದ ಅವರು ಉತ್ತರ ಕನ್ನಡದಲ್ಲಿ ಸೇಫ್ ಎಂಬ ಮುಂದಾಲೋಚನೆಯೊಂದಿಗೆ ಬಿಜೆಪಿಗೆ ಸೇರಲು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Reason of MLAs resign
ಅತೃಪ್ತರಿಂದ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ

ರಾಜಕೀಯ ಗುರು ರಮೇಶ್ ಜಾರಕಿಹೊಳಿ ಹಾದಿಯಲ್ಲೇ ಸಾಗಿರುವ ಮಹೇಶ್ ಕುಮಟಳ್ಳಿ ಅವರು ಗುರು ಆದೇಶದಂತೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ರಮೇಶ್ ಹಾರಕಿಹೊಳಿಗೆ ಹೈಕಮಾಂಡ್ ಅವಮಾನ ಮಾಡಿದ್ದರಿಂದ ರಮೇಶ್​ ಕೊಟ್ಟ ಮಾತಿನಂತೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಎಂಟು ತಿಂಗಳ ಮೊದಲೇ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ಹೇಳಿ ಕಾಂಗ್ರೆಸ್ ನಾಯಕರು ಕೈಕೊಟ್ಟಿದ್ದರು. ರಮೇಶ್ ಜಾರಕಿಹೊಳಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಅವರು, ಬಿಎಸ್​ವೈಗೆ ಮೊದಲೇ ನೀಡಿದ್ದ ಮಾತಿನಂತೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ದಿನಕ್ಕೊಂದು ನಾಟಕ :
ರಾಜ್ಯ ರಾಜಕೀಯದ ಬೆಳವಣಿಗೆ ದಿನಕ್ಕೊಂದು ನಾಟಕೀಯ ತಿರುವು ಪಡೆಯುತ್ತಿದೆ. ಸುಮಾರು 3 ವಾರ ಹಿಂದಷ್ಟೇ ಸಂಪುಟ ಸೇರಿ ಸಚಿವರಾಗಿದ್ದ ಇಬ್ಬರು ಪಕ್ಷೇತರ ಶಾಸಕರು ದಿಢೀರ್ ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಈಗಾಗಲೇ 14 ಶಾಸಕರೂ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಂತಾಗಿದೆ.

14 ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದೇ ಅದರೆ ಸರ್ಕಾರ ಅಧಿಕೃತವಾಗಿ ಅಲ್ಪಮತಕ್ಕೆ ಕುಸಿಯಲಿದೆ. ಮತ್ತೊಂದಡೆ ಪಕ್ಷೇತರ ಶಾಸಕರಾದ ಆರ್. ಶಂಕರ್, ಹೆಚ್. ನಾಗೇಶ್ ಸೇರುವುದರೊಂದಿಗೆ ಪ್ರತಿಪಕ್ಷ ಬಿಜೆಪಿ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಗಡಿ ದಾಟಲಿದೆ.

ಒಟ್ಟು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಇಬ್ಬರು ಪಕ್ಷೇತರರು ಹಾಗೂ ಒಬ್ಬರು ಬಿಎಸ್​ಪಿ ಶಾಸಕರು ಸೇರಿ ಆಡಳಿತಾರೂಢ ಪಕ್ಷಗಳ ಬಲ 119 ಆಗಿತ್ತು. ಪ್ರತಿಪಕ್ಷ ಬಿಜೆಪಿ ಬಲ 105. ಈ ಪೈಕಿ ಕಾಂಗ್ರೆಸ್​ನ 11 ಮತ್ತು ಜೆಡಿಎಸ್ ನ 3 ಶಾಸಕರು ರಾಜೀನಾಮೆ ಪತ್ರ ಸಲ್ಲಿಸಿದ ನಂತರವೂ ಸರ್ಕಾರ ಬಹುಮತ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿರಲಿಲ್ಲ. ಇನ್ನಿಬ್ಬರು ಶಾಸಕರು ರಾಜೀನಾಮೆ ನೀಡಿದ್ದರೆ ಅಲ್ಪಮತಕ್ಕೆ ಕುಸಿಯುತಿತ್ತು.ಆದರೆ, ಪಕ್ಷೇತರ ಶಾಸಕರಾದ ಹೆಚ್. ನಾಗೇಶ್ ಮತ್ತು ಆರ್. ಶಂಕರ್ ಅವರಿಬ್ಬರೂ ನಿನ್ನೆ ದಿಢೀರನೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದರು.

ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ರವಾನಿಸಿದ್ದಲ್ಲದೆ, ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದ ಪತ್ರವನ್ನೂ ರಾಜ್ಯಪಾಲರಿಗೆ ನೀಡಿದರು. ಜೊತೆಗೆ ಬಿಜೆಪಿ ಜೊತೆ ಗುರುತಿಸಿಕೊಂಡು ಆ ಪಕ್ಷಕ್ಕೆ ಬೆಂಬಲ ನೀಡುವ ನಿರ್ಧಾರವನ್ನೂ ಅವರಿಬ್ಬರೂ ಶಾಸಕರು ಕೈಗೊಂಡಿದ್ದಾರೆ. ಇದರಿಂದಾಗಿ ಪ್ರತಿಪಕ್ಷ ಬಿಜೆಪಿಯ ಬಲ 107 ಕ್ಕೆ ಏರಿದರೆ, ಸರ್ಕಾರದ ಬಲ 104 ಕ್ಕೆ ಕುಸಿದಂತಾಗಲಿದೆ. ಮೇಲ್ನೋಟಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ಬಹುಮತ ಕಳೆದುಕೊಂಡಿದೆ. ಅದರ ಸಂಖ್ಯಾಬಲ ಕುಸಿದಿದೆ. ಅದು ಸದನದಲ್ಲೇ ಸಾಬೀತಾಗಬೇಕಿದೆ.

Intro:ಬೆಂಗಳೂರು : 2018 ರ ಮೇ 15 ರಂದು ವಿಧಾನಸಭೆ ಚುನಾವಣೆ ನಡೆದ ದಿನದಿಂದಲೂ ರಾಜ್ಯ ರಾಜಕಾರಣ ಒಂದಲ್ಲಾ ಒಂದು ರೀತಿಯಲ್ಲಿ ರಾಷ್ಟ್ರಮಟ್ಟದವರೆಗೂ ಸುದ್ದಿಯಾಗಿತ್ತು. Body:ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗಲಿಲ್ಲ. ಆದರೆ, ಅತಿ ಹೆಚ್ಚು ಸ್ಥಾನ ಪಡೆದಿರುವ ಬಿಜೆಪಿ ಸರ್ಕಾರ ರಚನೆ ಮಾಡಲು ಮುಂದಾಯಿತು. ಮೇ 17 ರಂದು ಬೆಳಗ್ಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸರ್ಕಾರ ರಚಿಸುವಂತೆ ಬಿಜೆಪಿಗೆ ಆಹ್ವಾನ ನೀಡಿರುವ ರಾಜ್ಯಪಾಲ ವಿ.ಆರ್. ವಾಲಾ ಅವರ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕೋರ್ಟ್, ವಿಶ್ವಾಸಮತ ಸಾಬೀತುಪಡಿಸುವ ವರೆಗೂ ಯಡಿಯೂರಪ್ಪ ಅವರು ಯಾವುದೇ ಆಡಳಿತಾತ್ಮಕ ತೀರ್ಮಾನ ತೆಗೆದುಕೊಳ್ಳಬಾರದು ತಿಳಿಸಿತ್ತು. ಆದರೆ, ಬಹುಮತವಿಲ್ಲದ ಕಾರಣ ಕಾಂಗ್ರೆಸ್-ಜೆಡಿಎಸ್ ಪಕ್ಷ ಸುಪ್ರೀಂಕೋರ್ಟ್ ಮೊರೆ ಹೋಯಿತು. ವಿಚಾರಣೆ ನಡೆಸಿದ ಕೋರ್ಟ್, ಮೇ 19 ರಂದು ಸಂಜೆ 4 ಗಂಟೆ ವೇಳೆಗೆ ವಿಶ್ವಾಸಮತ ಸಾಬೀತುಪಡಿಸಬೇಕೆಂದು ಆದೇಶಿಸಿತ್ತು. ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರು ಪ್ರಮಾಣ ವಚನ ಸ್ವೀಕರಿಸಬೇಕೆಂದು ಸೂಚಿಸಿತ್ತು.
ಹಾಗಾಗಿ, ರಾಜ್ಯಪಾಲರು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದರು. ಬೋಪಯ್ಯ ಅವರ ನೇಮಕವನ್ನು ಕಾಂಗ್ರೆಸ್ ವಿರೋಧಿಸಿತ್ತು.
ಬಹುಮತವಿಲ್ಲದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಮೇ 19 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿ ನಂತರ ವಾಪಸ್ ಪಡೆದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದರು. ಜೆಡಿಎಸ್ ಸರ್ಕಾರ ರಚನೆಗೆ ಕಾಂಗ್ರೆಸ್ ಪೂರ್ಣ ಬೆಂಬಲ ಸೂಚಿಸಿ ಮೇ 15 ರಂದೇ ಮೈತ್ರಿ ಸರ್ಕಾರ ರಚನೆ ಸಂಬಂಧ ರಾಜ್ಯಪಾಲರಿಗೆ ಉಭಯ ಪಕ್ಷದ ಮುಖಂಡರು ಮನವಿ ಸಲ್ಲಿಸಿದ್ದರು.
ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ನಂತರ ಕುಮಾರಸ್ವಾಮಿ ಅವರು 15 ದಿನಗಳಲ್ಲಿ ಬಹುಮತ ಸಾಬೀತುಪಡಿಸಲು ರಾಜ್ಯಪಾಲುರು ಆದೇಶಿಸಿ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡಿದರು. ಹಾಗಾಗಿ, ಹೆಚ್.ಡಿ.ಕುಮಾರಸ್ವಾಮಿ ಅವರು 2018 ಮೇ 23 ರಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದರು. ಈ ಸಮಾರಂಭಕ್ಕೆ ರಾಷ್ಟ್ರನಾಯಕರು ಆಗಮಿಸಿದ್ದು ವಿಶೇಷವಾಗಿತ್ತು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂತು.
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಸಂಪುಟ ರಚನೆಯಾಯಿತು. ಜೂನ್ 6 ರಂದು ಕಾಂಗ್ರೆಸ್ ನಿಂದ 15 ಹಾಗೂ ಜೆಡಿಎಸ್ ನಿಂದ 10 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಉಳಿದ ಸಚಿವ ಸ್ಥಾನ ತುಂಬುವಷ್ಟರಲ್ಲೇ ಮೈತ್ರಿಯಲ್ಲಿ ಬಿರುಕು ಮೂಡಿತ್ತು.
ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಭಾವುಟ ಹಾರಿಸಿರುವ 13 ಶಾಸಕರು ಸರ್ಕಾರಕ್ಕೆ ಮುಳುವಾಗಿದ್ದು, ಇಂದು ಮತ್ತೊಬ್ಬರು ರಾಜೀನಾಮೆ ನೀಡುವ ಮೂಲಕ ರಾಜೀನಾಮೆ ನೀಡಿದವರ ಸಂಖ್ಯೆ 14 ಕ್ಕೆ ಏರಿದೆ.
ಮತ್ತೊಂದೆಡೆ ರಾಜೀನಾಮೆ ನೀಡಿರುವ ಶಾಸಕರ ಈ ನಿರ್ಧಾರಕ್ಕೆ ಕಾರಣಗಳೇನೆಂಬುದು ಸಹ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಆರಂಭಗೊಂಡ ರಮೇಶ್ ಜಾರಕಿಹೊಳಿ ರಾಜಕೀಯ ವೈರುಧ್ಯ 13 ಶಾಸಕರ ರಾಜೀನಾಮೆವರೆಗೂ ಬಂದಿದ್ದು, ಈ ಅವಧಿಯ ಬೆಳವಣಿಗೆಗಳು ಶಾಸಕರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ. ಪ್ರಮುಖವಾಗಿ ಬಂಡಾಯ ಶಾಸಕರ ನಾಯಕತ್ವ ವಹಿಸಿದ್ದ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ರಮೇಶ್ ವಿರುದ್ಧ ನಿಂತ ಸಚಿವ ಡಿಕೆ ಶಿವಕುಮಾರ್ ಅವರು ನಿಂತಿದ್ದೆ ಕಾರಣ ಎನ್ನಲಾಗಿದೆ. ಅಲ್ಲದೇ ಇದೇ ವೇಳೆ ಸಚಿವ ಸ್ಥಾನದಿಂದ ಕಿತ್ತು ಹಾಕಿ ಅವಮಾನ ಮಾಡಿದ್ದು, ಪಿಎಲ್ಡಿ ಬ್ಯಾಂಕ್ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮೇಲುಗೈ ಸಾಧಿಸಿದ್ದು ಕೂಡ ರಮೇಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ನಿಂದ ದೂರ ಮಾಡಿತ್ತು.
ರಾಜೀನಾಮೆ ನಡೆಯಲ್ಲಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರಿಗೆ ರಾಜೀನಾಮೆಗೆ ಪ್ರಮುಖ ಕಾರಣ ಬೆಂಗಳೂರಿನಲ್ಲಿ ಕಿರಿಯರಿಗೆ ಮಣೆ ಹಾಕಿ ಸಚಿವ ಸ್ಥಾನ ನಿರಾಕರಿಸಿದ್ದು. ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಇಷ್ಟಾದರು ಸಿದ್ದರಾಮಯ್ಯ ಹಾಗೂ ಪರಮೇಶ್ವರ್, ದಿನೇಶ್ ಗುಂಡೂರಾವ್ ಅವರು ನಿರ್ಲಕ್ಷ್ಯ ಮಾಡಿದ್ದರು. ಅಸಮಾಧಾನವಾಗಿದ್ದರೂ ಮನವೊಲಿಸಲು ಹೈಕಮಾಂಡ್ ಯಾವುದೇ ಪ್ರಯತ್ನ ಮಾಡಿಲ್ಲ. ಇದರಿಂದ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಬಿಜೆಪಿಯಲ್ಲಿ ನನಗೆ ಮತ್ತು ಮಗಳಿಗೆ ಭವಿಷ್ಯ ಇದೆ ಎನ್ನುವ ಲೆಕ್ಕಾಚಾರ ಹಾಗೂ ಸಿದ್ದರಾಮಯ್ಯ ಆಂಡ್ ಟೀಂಗೆ ಬಿಸಿ ಮುಟ್ಟಿಸಲು ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.
ಇನ್ನು ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಎಚ್ ವಿಶ್ವನಾಥ್ ರಾಜೀನಾಮೆ ಜೆಡಿಎಸ್ ವರಿಷ್ಠರಿಗೆ ಶಾಕ್ ನೀಡಿದೆ. ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ರಾಜೀನಾಮೆಗೆ ನಿರ್ಧಾರ ಮಾಡಿರುವ ವಿಶ್ವನಾಥ್ ಅವರು, ಸಮನ್ವಯ ಸಮಿತಿಯಿಂದ ದೂರ ಇಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದರು. ಪಕ್ಷದ ಅಧ್ಯಕ್ಷರಾದರು ಪದೇ ಪದೇ ಅವರಿಗೆ ಅವಮಾನ ಎದುರಾಗಿತ್ತು. ಇದರಿಂದ ಬೇಸತ್ತು ಪದತ್ಯಾಗ ನಿರ್ಧಾರ ಮಾಡಿದ್ದರು. ಅಲ್ಲದೇ ತಮ್ಮ ಮತ್ತು ಮಗನ ಭವಿಷ್ಯಕ್ಕಾಗಿ ಬಿಜೆಪಿ ಸೇರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಮೂರು ಬಾರಿ ಸಂಪುಟ ವಿಸ್ತರಣೆ ಆದರೂ ಸಚಿವ ಸ್ಥಾನ ಆಸೆ ಹೊಂದಿದ್ದ ಬಿಸಿ ಪಾಟೀಲ್ ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ದೋಸ್ತಿಗಳು ಮಂತ್ರಿಗಿರಿ ನೀಡದ ಕಾರಣ ಬಿ.ಸಿ ಪಾಟೀಲ್ ರಾಜೀನಾಮೆ ನಿರ್ಧಾರಕ್ಕೆ ಮುಂದಾಗಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್ನಿಂದ ಒಂದು ಕಾಲು ಹೊರಗೇ ಇಟ್ಟಿರುವ ಬಿಸಿ ಪಾಟೀಲ್ ಅವರಿಗೆ ನಿಗಮ ಮಂಡಳಿಯಲ್ಲೂ ಯಾವುದೇ ಸ್ಥಾನಮಾನ ಸಿಕ್ಕಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಸಿದ್ದರಾಮಯ್ಯ ನಂಬಿ ಕೂತರೆ ಭವಿಷ್ಯ ಇಲ್ಲ ಎಂದು ನಿರ್ಧರಿಸಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬಳಿಕ ಯಾವುದೇ ಸ್ಥಾನಮಾನ ಸಿಗದೆ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ ಅವರು, ಬಿಜೆಪಿಯಿಂದಲೇ ಬಂದು ಮತ್ತೆ ಮಾತೃಪಕ್ಷಕ್ಕೆ ಹೋಗುವ ತೀರ್ಮಾನ ಮಾಡಿದ್ದು, ಬಳ್ಳಾರಿ ರಾಜಕೀಯದಲ್ಲಿ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪವೇ ಆನಂದ್ ಸಿಂಗ್ ಸಿಟ್ಟಿಗೆ ಕಾರಣವಾಗಿತ್ತು. ಪರಿಣಾಮ ಜಿಂದಾಲ್ ವಿವಾದ ನೆಪವಾಗಿಸಿ ಸಚಿವ ಸ್ಥಾನ ಸಿಗದ ಕಾರಣ ರಾಜೀನಾಮೆ ನೀಡಿದ್ದಾರೆ.
ಉಳಿದಂತೆ ಜೆಡಿಎಸ್ನಲ್ಲಿ ಸಿಗದ ಸ್ಥಾನಮಾನ, ಸಚಿವ ಸ್ಥಾನ ಹಾಗೂ ಮಂಡ್ಯ ರಾಜಕೀಯದಲ್ಲೂ ಹಿಡಿತ ಸಿಗದ ಹಿನ್ನೆಲೆಯಲ್ಲಿ ನಾರಾಯಣ ಗೌಡ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ರಮುಖವಾಗಿ ಕೆ.ಆರ್. ಪೇಟೆ ರಾಜಕೀಯದಲ್ಲಿ ರೇವಣ್ಣ-ಭವಾನಿ ರೇವಣ್ಣ ಹಸ್ತಕ್ಷೇಪ ಹಾಗೂ ಎಲೆಕ್ಷನ್ ರಾಜಕೀಯಕ್ಕೆ ವಿದಾಯದತ್ತ ಚಿಂತನೆ ನಡೆಸಿದ್ದ ಅವರು ಮೊದಲಿನಿಂದಲೂ ಬಿಜೆಪಿ ಸೇರುವ ಕಡೆ ಹೆಚ್ಚು ಒಲವು ತೋರಿದ್ದರು. ಮೈತ್ರಿ ಸರ್ಕಾರದಲ್ಲಿ ದೇವೇಗೌಡರ ಕುಟುಂಬದ ವಿಪರೀತ ಹಸ್ತಕ್ಷೇಪಕ್ಕೆ ಅಸಮಾಧಾನ ಗೊಂಡಿದ್ದ ಎಸ್.ಟಿ ಸೋಮಶೇಖರ್ ಅವರನ್ನು ಬಿಡಿಎ ಆಯುಕ್ತರ ಬದಲಾವಣೆಗೆ ಡಿಸಿಎಂ ಪರಮೇಶ್ವರ್ ಸತಾಯಿಸಿದ್ದು ಅಸಮಾಧಾನಕ್ಕೆ ಕಾರಣವಾಗಿತ್ತು. ಅಲ್ಲದೇ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಿದ್ದರು. ಪರಿಣಾಮ ಬಿಜೆಪಿ ಸೇರಿದರೆ ಬೆಂಗಳೂರು ರಾಜಕಾರಣದಲ್ಲಿ ಭವಿಷ್ಯ ಇದೆ ಎಂಬ ಕಾರಣದಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ನಿಷ್ಠರಾಗಿದ್ದ ಶಾಸಕ ಮುನಿರತ್ನ ಅವರ ರಾಜೀನಾಮೆ ಪಕ್ಷದ ನಾಯಕರಿಗೆ ಅಚ್ಚರಿ ಹಾಗೂ ಆಘಾತಕಾರಿಯಾಗಿದ್ದು, ಬಿಜೆಪಿಗೆ ಸೇರಿದರೆ ಬೆಂಗಳೂರಿನಲ್ಲಿ ಉತ್ತಮ ಭವಿಷ್ಯ ಸಿಗಲಿದೆ. ದೋಸ್ತಿ ಸರ್ಕಾರದಲ್ಲಿ ಯಾವುದೇ ಮನ್ನಣೆ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಸಲ್ಲಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಆರಂಭದಿಂದಲೂ ಸಚಿವ ಸ್ಥಾನ ಮೇಲೆ ಕಣ್ಣಿಟ್ಟಿದ್ದ ಶಿವರಾಂ ಹೆಬ್ಬಾರ್ ಅವರಿಗೆ ಪಕ್ಷದ ನಾಯಕರು ಸಚಿವ ಸ್ಥಾನ ನೀಡದೇ ಸತಾಯಿಸಿದ್ದರು. ಅಲ್ಲದೇ ಸಚಿವ ಸ್ಥಾನ ನೀಡದೆ ನಿಗಮ ಮಂಡಳಿ ಕೊಟ್ಟಿದ್ದು ಅಸಮಾಧಾನ ಹೆಚ್ಚಾಗಲು ಕಾರಣವಾಗಿತ್ತು. ಮೊದಲಿನಿಂದಲೂ ಬಿಜೆಪಿ ಕಡೆ ಹೆಚ್ಚು ಒಲವು ಹೊಂದಿದ್ದ ಅವರು ಉತ್ತರ ಕನ್ನಡದಲ್ಲಿ ಸೇಫ್ ಎಂಬ ಮುಂದಾಲೋಚನೆಯೊಂದಿಗೆ ಬಿಜೆಪಿಗೆ ಸೇರಲು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ರಾಜಕೀಯ ಗುರು ರಮೇಶ್ ಜಾರಕಿಹೊಳಿ ಹಾದಿಯಲ್ಲೇ ಸಾಗಿರುವ ಮಹೇಶ್ ಕುಮಟಳ್ಳಿ ಅವರು ಗುರು ಆದೇಶದಂತೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ರಮೇಶ್ ಹಾರಕಿಹೊಳಿಗೆ ಹೈಕಮಾಂಡ್ ಅವಮಾನ ಮಾಡಿದ್ದರಿಂದ ರಮೇಶ್ಗೆ ಕೊಟ್ಟ ಮಾತಿನಂತೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಎಂಟು ತಿಂಗಳ ಮೊದಲೇ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ಹೇಳಿ ಕಾಂಗ್ರೆಸ್ ನಾಯಕರು ಕೈಕೊಟ್ಟಿದ್ದರು. ರಮೇಶ್ ಜಾರಕಿಹೊಳಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಅವರು, ಬಿಎಸ್ವೈಗೆ ಮೊದಲೇ ನೀಡಿದ್ದ ಮಾತಿನಿಂತೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ದಿನಕ್ಕೊಂದು ನಾಟಕ : ರಾಜ್ಯ ರಾಜಕೀಯದ ಬೆಳವಣಿಗೆ ದಿನಕ್ಕೊಂದು ನಾಟಕೀಯ ತಿರುವು ಪಡೆಯುತ್ತಿದೆ. ಸುಮಾರು 3 ವಾರ ಹಿಂದಷ್ಟೇ ಸಂಪುಟ ಸೇರಿ ಸಚಿವರಾಗಿದ್ದ ಇಬ್ಬರು ಪಕ್ಷೇತರ ಶಾಸಕರು ದಿಢೀರ್ ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.
ಈಗಾಗಲೇ 14 ಶಾಸಕರೂ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಂತಾಗಿದೆ. 14 ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದೇ ಅದರೆ ಸರ್ಕಾರ ಅಧಿಕೃತವಾಗಿ ಅಲ್ಪಮತಕ್ಕೆ ಕುಸಿಯಲಿದೆ. ಮತ್ತೊಂದಡೆ ಪಕ್ಷೇತರ ಶಾಸಕರಾದ ಆರ್. ಶಂಕರ್, ಹೆಚ್. ನಾಗೇಶ್ ಸೇರುವುದರೊಂದಿಗೆ ಪ್ರತಿಪಕ್ಷ ಬಿಜೆಪಿ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಗಡಿ ದಾಟಿದೆ.
ಒಟ್ಟು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಇಬ್ಬರು ಪಕ್ಷೇತರರು ಹಾಗೂ ಒಬ್ಬರು ಬಿಎಸ್ ಪಿ ಶಾಸಕರು ಸೇರಿ ಆಡಳಿತಾರೂಢ ಪಕ್ಷಗಳ ಬಲ 119 ಆಗಿತ್ತು. ಪ್ರತಿಪಕ್ಷ ಬಿಜೆಪಿ ಬಲ 105. ಈ ಪೈಕಿ ಕಾಂಗ್ರೆಸ್ ನ 11 ಮತ್ತು ಜೆಡಿಎಸ್ ನ 3 ಶಾಸಕರು ರಾಜೀನಾಮೆ ಪತ್ರ ಸಲ್ಲಿಸಿದ ನಂತರವೂ ಸರ್ಕಾರ ಬಹುಮತ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿರಲಿಲ್ಲ. ಇನ್ನಿಬ್ಬರು ಶಾಸಕರು ರಾಜೀನಾಮೆ ನೀಡಿದ್ದರೆ ಅಲ್ಪಮತಕ್ಕೆ ಕುಸಿಯುತಿತ್ತು. ಆದರೆ, ಪಕ್ಷೇತರ ಶಾಸಕರಾದ ಎಚ್. ನಾಗೇಶ್ ಮತ್ತು ಆರ್. ಶಂಕರ್ ಅವರಿಬ್ಬರೂ ನಿನ್ನೆ ದಿಢೀರನೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನೂ ವಾಪಸ್ ಪಡೆದರು. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ರವಾನಿಸಿದ್ದಲ್ಲದೆ, ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದ ಪತ್ರವನ್ನೂ ರಾಜ್ಯಪಾಲರಿಗೆ ನೀಡಿದರು. ಜೊತೆಗೆ ಬಿಜೆಪಿ ಜೊತೆ ಗುರುತಿಸಿಕೊಂಡು ಆ ಪಕ್ಷಕ್ಕೆ ಬೆಂಬಲ ನೀಡುವ ನಿರ್ಧಾರವನ್ನೂ ಅವರಿಬ್ಬರೂ ಶಾಸಕರು ಕೈಗೊಂಡಿದ್ದಾರೆ. ಇದರಿಂದಾಗಿ ಪ್ರತಿಪಕ್ಷ ಬಿಜೆಪಿಯ ಬಲ 107 ಕ್ಕೆ ಏರಿದರೆ, ಸರ್ಕಾರದ ಬಲ 104 ಕ್ಕೆ ಕುಸಿದಂತಾಗಲಿದೆ. ಮೇಲ್ನೋಟಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ಬಹುಮತ ಕಳೆದುಕೊಂಡಿದೆ. ಅದರ ಸಂಖ್ಯಾಬಲ ಕುಸಿದಿದೆ. ಅದು ಸದನದಲ್ಲೇ ಸಾಬೀತಾಗಬೇಕಿದೆ.
Conclusion:

For All Latest Updates

TAGGED:

alliance
ETV Bharat Logo

Copyright © 2024 Ushodaya Enterprises Pvt. Ltd., All Rights Reserved.