ETV Bharat / state

ಸಿಎಎ ವಿರೋಧಿಸಿ ನಾಟಕ ಪ್ರದರ್ಶನ: ಇಲಾಖಾ ತನಿಖೆ ನಡೆಸುವಂತೆ ಡಿಜಿಪಿಗೆ ಶಿಫಾರಸು

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ್ದಕ್ಕೆ ದೇಶದ್ರೋಹ ಆರೋಪದ ಮೇರೆಗೆ ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆಯ ಮಕ್ಕಳನ್ನು ಸಮವಸ್ತ್ರ, ಶಸ್ತ್ರಾಸ್ತ್ರ ಹೊಂದಿದ್ದ ಪೊಲೀಸರು ವಿಚಾರಣೆ ನಡೆಸಿದರು. ಈ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಾಖಾ ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಹೇಳಿದೆ.

high court
ಹೈಕೋರ್ಟ್
author img

By

Published : Sep 4, 2021, 6:35 AM IST

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶಿಸಿದ್ದ ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸಮವಸ್ತ್ರ ಹಾಗೂ ಶಸ್ತ್ರಾಸ್ತ್ರ ಸಹಿತ ಅಲ್ಲಿಗೆ ತೆರಳಿ ಮಕ್ಕಳನ್ನು ವಿಚಾರಣೆ ನಡೆಸಿದ್ದ ಕ್ರಮದ ಕುರಿತು ಇಲಾಖಾ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದಾರೆ.

ಈ ಕುರಿತು ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹಂಗಾಮಿ ಸಿಜೆ ಸತೀಶ್ ಚಂದ್ರಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, ಪ್ರಕರಣದಲ್ಲಿ ಬಾಲ ನ್ಯಾಯ ಕಾಯ್ದೆ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಸಿಬ್ಬಂದಿ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸುವಂತೆ ಬೀದರ್ ಪೊಲೀಸ್​ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದಾರೆ ಎಂದು ತಿಳಿಸಿದರು.

ಅರ್ಜಿದಾರರ ಪರ ವಾದಿಸಿದ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್, ನ್ಯಾಯಾಲಯ ಈ ಹಿಂದೆ ಘಟನೆ ಬಗ್ಗೆ ತನಿಖೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಕುರಿತು ಡಿಜಿಪಿ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಆದೇಶಿಸಿತ್ತು. ಅದನ್ನು ಪಾಲಿಸಿಲ್ಲ ಎಂದರು. ಇದಕ್ಕೆ ಸರ್ಕಾರಿ ವಕೀಲರು ಉತ್ತರಿಸಿ, ಎರಡನೇ ಆದೇಶವನ್ನು ಸಹ ಪಾಲನೆ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು. ಅಷ್ಟರಲ್ಲಿ ಇಲಾಖಾ ತನಿಖೆಯ ಸ್ಥಿತಿಗತಿಯ ವಿವರವನ್ನು ಸಲ್ಲಿಸುವಂತೆ ಸೂಚಿಸಿತು.

ಪ್ರಕರಣದ ಹಿನ್ನೆಲೆ:

2020ರ ಜ.21ರಂದು ಬೀದರ್‌ನ ಶಹಾಪುರಗೇಟ್‌ನ ಶಾಹಿನ್ ಪ್ರಾಥಮಿಕ ಶಾಲೆಯ ಮಕ್ಕಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶಿಸಿದ್ದರು. ಅದರಲ್ಲಿ ಪ್ರಧಾನಿ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಲಾಗಿದೆ ಎಂದು ಸ್ಥಳೀಯ ನಿಲೇಶ್ ರಕ್ಷ್ಯಾಲ್ ಜ.26 ರಂದು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಸಮವಸ್ತ್ರದಲ್ಲೇ ತೆರಳಿ ಮಕ್ಕಳನ್ನು ವಿಚಾರಣೆ ಮಾಡಿದ್ದರು. ಇದು ಬಾಲ ನ್ಯಾಯ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.