ETV Bharat / state

ಒಳ ಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು; ಸಿಎಂಗೆ ಮಾದಿಗ ಸಮುದಾಯದಿಂದ ಅಭಿನಂದನೆ

ಭಾರತ ಹಲವಾರು ಸಮುದಾಯಗಳಿಂದ ಕೂಡಿರುವ ದೇಶವಾಗಿದ್ದು ಪ್ರಜಾಪ್ರಭುತ್ವದಲ್ಲಿ ಯಾರಿಗೆ ಶಕ್ತಿ ಇದೆ, ಅವರು ಅನುಕೂಲ ಪಡೆಯುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಿಎಂಗೆ ಮಾದಿಗ ಸಮುದಾಯದಿಂದ ಅಭಿನಂದನೆ
ಸಿಎಂಗೆ ಮಾದಿಗ ಸಮುದಾಯದಿಂದ ಅಭಿನಂದನೆ
author img

By

Published : Mar 25, 2023, 9:28 AM IST

ಬೆಂಗಳೂರು: ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ಶಿಫಾರಸಿನಂತೆ ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‌ತೀರ್ಮಾನ ತೆಗೆದುಕೊಂಡಿರುವ ಹಿನ್ನೆಲೆ ಮಾದಿಗ ಸಮುದಾಯದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಾಯಿತು.

ಅಧಿಕೃತ ನಿವಾಸದಲ್ಲಿ ಅಭಿನಂದನೆ ಸ್ವೀಕರಿಸಿ, ಮಾತನಾಡಿದ ಅವರು, ಭಾರತ ಹಲವಾರು ಸಮುದಾಯಗಳಿಂದ ಕೂಡಿದೆ. ಜಗತ್ತಿನಲ್ಲಿ ಇಷ್ಟೊಂದು ಸಮುದಾಯ ಯಾವ ದೇಶದಲ್ಲಿಯೂ ಇಲ್ಲ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ಶಕ್ತಿ ಇದೆ, ಅವರು ಅನುಕೂಲ ಪಡೆಯುತ್ತಾರೆ. ಡಾ.ಬಾಬಾ ಸಾಹೆಬ್ ಅಂಬೇಡ್ಕರ್ ಇಲ್ಲದಿದ್ದರೆ ಏನಾಗುತ್ತಿತ್ತು. ಡಾ.ಜಗಜೀವನ್ ರಾಮ್ ಅವರು ಅಪಾರ ಜ್ಞಾನ ಉಳ್ಳವರಾಗಿದ್ದರು. ನಮ್ಮ ತಂದೆ ಹೇಳುತ್ತಿದ್ದರು. ಡಾ. ಜಗಜೀವನ್ ರಾಮ್ ಅವರು ಮುತ್ಸದಿಯಾಗಿದ್ದರು. ಅವರು ಹಸಿರು ಕ್ರಾಂತಿ ಮಾಡಿದರು ಎಂದರು.

ಎಡ, ಬಲ ಎನ್ನದೇ ಎಸ್ಸಿ ಸಮುದಾಯ ಈ ದೇಶದ ಒಂದು ಶಕ್ತಿ. ಸುಮಾರು 24% ಜನ ಹಿಂದುಳಿದರೆ ದೇಶ ಹೇಗೆ ಉದ್ದಾರ ಆಗುತ್ತದೆ. ಸಾಮಾಜಿಕ ನ್ಯಾಯ ಅಂತ ಇಷ್ಟು ವರ್ಷ ಹೇಳುತ್ತ ಬಂದಿದ್ದಾರೆ. ಶಿಕ್ಷಣ, ಉದ್ಯೋಗ, ಸಬಲೀಕರಣ ಈ ಮೂರು ತತ್ವ ಪಾಲಿಸಿದರೆ ಅಭಿವೃದ್ಧಿ ಸಾಧ್ಯ. ಬಹಳ ಜನ ಜೇನುಗೂಡಿಗೆ ಕೈ ಹಾಕುತ್ತಿದ್ದೀರಿ ಅಂತ ಹೇಳಿದರು. ನಾನು ನನಗೆ ಜೇನು ಕಡಿದರೂ ಚಿಂತೆಯಿಲ್ಲ ತುಳಿತಕ್ಕೊಳಗಾದ ಸಮುದಾಯಗಳಿಗೆ ಜೇನು ಸಿಗಲಿ ಅಂತ ಈ ಕೆಲಸ ಮಾಡಿದ್ದೇನೆ. ಯಾರಿಗೂ ಅನ್ಯಾಯವಾಗದಂತೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ಇದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ನಿಮ್ಮ ಆಶೀರ್ವಾದ ಇರಲಿ ಎಂದರು.

ಈ ಸಂದರ್ಭದಲ್ಲಿ ಮಾದರ ಚೆನ್ನಯ್ಯ ಸ್ವಾಮೀಜಿ, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಸಚಿವರಾದ ಗೋವಿಂದ ‌ಕಾರಜೋಳ, ಡಾ.‌ಕೆ ಸುಧಾಕರ್, ಮುರುಗೇಶ ನಿರಾಣಿ ಹಾಗೂ ಮತ್ತಿತರರು ಹಾಜರಿದ್ದರು.

ಕಟೀಲ್ ಅಭಿನಂದನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿಗೆ ಸಂಬಂಧಿಸಿ ಬಹುವರ್ಷಗಳ ನೆನೆಗುದಿಗೆ ಬಿದ್ದ ಬೇಡಿಕೆಯನ್ನು ಈಡೇರಿಸಿದ್ದಾರೆ. ಒಳ ಮೀಸಲಾತಿ ವಿಚಾರದಲ್ಲೂ ಸಮರ್ಪಕ ನಿರ್ಣಯ ಕೈಗೊಂಡಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಎಲ್ಲಾ ಸಮಾಜಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಪ್ರಾಮಾಣಿಕ, ಜನಪರ, ಕಾಮನ್ ಮ್ಯಾನ್ ಮುಖ್ಯಮಂತ್ರಿಗಳು, ಕರ್ನಾಟಕದ ಸುಮಾರು ಏಳು ಕೋಟಿ ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಇದಕ್ಕಾಗಿ ಅವರಿಗೆ ಮತ್ತು ಸಚಿವ ಸಂಪುಟದ ಎಲ್ಲ ಸಚಿವರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಹಲವಾರು ದಶಕಗಳಿಂದ ಅನೇಕ ಬೇಡಿಕೆಗಳನ್ನು ವಿವಿಧ ಸಮುದಾಯದವರು ಮುಂದಿಟ್ಟಿದ್ದರು. ನಾವು ನ್ಯಾಯ ಕೊಡುವ ದೃಷ್ಟಿಯಿಂದ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಸೆಂಬ್ಲಿಯಲ್ಲಿ ಕಾನೂನು ಮಾಡಿ ಅನುಷ್ಠಾನ ಮಾಡಲಾಗುತ್ತಿದೆ. ಅದೇ ಆಧಾರದಲ್ಲಿ ನೇಮಕಾತಿ ಆಗಲಿದೆ ಎಂಬ ಮುಖ್ಯಮಂತ್ರಿಯವರ ಹೇಳಿಕೆ ಅತ್ಯಂತ ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ. ಒಳ ಮೀಸಲಾತಿ ಕುರಿತಂತೆ ನಿರ್ಧರಿಸಲು ಸಚಿವ ಮಾಧುಸ್ವಾಮಿ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಉಪ ಸಮಿತಿ ರಚಿಸಲಾಗಿತ್ತು. ಅದರ ಶಿಫಾರಸಿನಡಿ ನಿರ್ಣಯಗಳನ್ನು ಕೈಗೊಂಡಿದ್ದು, ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಹೊರಬಿದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವು ಹಿಂದುಳಿದ ವರ್ಗದಲ್ಲಿ ಕೆಲವು ಸಮುದಾಯಗಳಿವೆ. ಅವುಗಳನ್ನು ಯಾವ ಪಟ್ಟಿಯಲ್ಲಿ ಸೇರಿಸಬೇಕೆಂಬ ವಿಷಯದಲ್ಲಿ ಮುಂದಿನ ದಿನಗಳಳ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.

ಅಲ್ಲದೆ, ಕೆಲವು ಸಮುದಾಯಗಳನ್ನು ಎಸ್ಸಿಗೆ ಸೇರಿಸಲು ಬೇಡಿಕೆ ಇದೆ. ಇದನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕಿದೆ. ಅದನ್ನು ಇಲಾಖೆಯ ಶಿಫಾರಸಿನಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಅದನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಪಿಂಜಾರ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಲು ತೀರ್ಮಾನ ಮಾಡಿರುವುದು ಸಮರ್ಪಕ ಕ್ರಮ ಎಂದು ಅವರು ತಿಳಿಸಿದ್ದು, ಮುಖ್ಯಮಂತ್ರಿ ಮತ್ತು ಸಚಿವಸಂಪುಟದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ವರುಣಾದಿಂದ ಸ್ಪರ್ಧಿಸುವಂತೆ ನಮ್ಮ ಮನೆಯಲ್ಲಿ ಸಲಹೆ ನೀಡಿದ್ದಾರೆ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.