ETV Bharat / state

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ - ಈಟಿವಿ ಭಾರತ ಕನ್ನಡ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

recruitment-in-department-of-health-and-family-welfare
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ
author img

By

Published : Dec 20, 2022, 10:39 PM IST

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 400 ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಮತ್ತು 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರವು ಉಲ್ಲೇಖಿತ ಪತ್ರದಲ್ಲಿ ಅನುಮೋದನೆ ನೀಡಿದೆ. ಈ ಸಂಬಂಧ ಅನುಬಂಧದಲ್ಲಿರುವಂತೆ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕೂಡಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಾವಧಿ ಟೆಂಡರ್ ಅನ್ನು ನಿಯಮಾನುಸಾರ ಕರೆಯುವ ಮೂಲಕ ಹೊರಗುತ್ತಿಗೆ ಆಧಾರದ ಮೂಲಕ ನೇಮಕಾತಿ ಮಾಡಿಕೊಳ್ಳಲು ಸೂಚಿಸಿದೆ.

recruitment-in-department-of-health-and-family-welfare
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಈ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡುವ ಬಗ್ಗೆ ಅನುದಾನವನ್ನು ಖಾಲಿ ಇರುವ ರಾಜ್ಯ ಮತ್ತು ಜಿಲ್ಲಾ ವಲಯದ ಸಂಸ್ಥೆಗಳಲ್ಲಿ ಯಾವ ಲೆಕ್ಕ ಶೀರ್ಷಿಕೆಗಳಡಿ ಮಂಜೂರಾಗಿರುತ್ತದೆಯೋ ಅದೇ ಲೆಕ್ಕ ಶೀರ್ಷಿಕೆಯ, ಉಪ ಲೆಕ್ಕ ಶೀರ್ಷಿಕೆ 034ರಡಿ ಭರಿಸುವಂತೆ ಹಾಗೂ ಕ್ರಮವಹಿಸಿದ ವರದಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸಲು ಸೂಚಿಸಿದೆ.

ಹುದ್ದೆ ಮತ್ತು ವಿದ್ಯಾರ್ಹತೆ :

ಫಾರ್ಮಸಿ ಅಧಿಕಾರಿ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೊಮಾ ಇನ್ ಫಾರ್ಮಸಿ ಹೊಂದಿರಬೇಕು ಹಾಗೂ ಕರ್ನಾಟಕ ಫಾರ್ಮಸಿ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಿರಬೇಕು.

ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ : ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಪ್ರಯೋಗಶಾಲಾ ತಂತ್ರಜತೆಯಲ್ಲಿ 2 ವರ್ಷದ ಕರ್ನಾಟಕ ವೊಕೇಷನಲ್ ಶೈಕ್ಷಣಿಕ ಬೋರ್ಡ್‌ನಿಂದ ಡಿಪ್ಲೊಮಾ ಹೊಂದಿರಬೇಕು ಅಥವಾ ಪಿ.ಯು.ಸಿ (ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಆರೆ-ವೈದ್ಯಕೀಯ ಮಂಡಳಿಯು ನಡೆಸುವ 2 ವರ್ಷದ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಹೊಂದಿರಬೇಕು.

ಅಥವಾ, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಆರೆ ವೈದ್ಯಕೀಯ ಮಂಡಳಿಯು ನಡೆಸುವ 3 ವರ್ಷದ ವೈದ್ಯಕೀಯ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಡಿಪ್ಲೊಮಾ ಹೊಂದಿರಬೇಕು.

ಇದನ್ನೂ ಓದಿ : ಬೀದರ್​: ಅಗ್ನಿವೀರ್ ನೇಮಕಾತಿ ರ್‍ಯಾಲಿಗೆ ಭೇಟಿ ನೀಡಿದ ಸಚಿವ ಪ್ರಭು ಬಿ ಚವ್ಹಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.