ETV Bharat / state

ಮುಂದಿನ ಎರಡು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಸುರೇಶ್ ಕುಮಾರ್ - ಶಿಕ್ಷಕರ ನೇಮಕಾತಿ ಪ್ರಕ್ರಿಯೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ ಮತ್ತು ನಿರ್ದೇಶನಾಲಯಗಳಲ್ಲಿ ದೀರ್ಘ ಅವಧಿಯಿಂದ ಬಾಕಿ ಉಳಿದಿರುವ ಆಡಳಿತಾತ್ಮಕ, ನೌಕರರ ಸೇವಾ ವಿಷಯ ಮತ್ತು ಶಿಕ್ಷಣ ಇಲಾಖೆಯ ವಿವಿಧ ನೌಕರರ ಸಂಘಗಳ ಬೇಡಿಕೆಗಳ ಇತ್ಯರ್ಥಕ್ಕೆ ಮತ್ತು ಇಂತಹ ಸಮಸ್ಯೆಗಳ ಕಡತಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ವಹಿಸಬೇಕೆಂದು ಸಚಿವ ಸುರೇಶ್​ ಕುಮಾರ್​ ಸೂಚನೆ ನೀಡಿದರು.

Minister suresh kumar
ಸಚಿವ ಸುರೇಶ್ ಕುಮಾರ್ ಸಭೆ
author img

By

Published : Jan 27, 2021, 7:06 PM IST

ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ 20,000 ಶಿಕ್ಷಕರ ನೇಮಕಾತಿಗೆ ಉದ್ದೇಶಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕಳೆದ ಒಂದು ವರ್ಷದಲ್ಲಿ 3,008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2,404 ಪ್ರೌಢ ಶಾಲಾ ಶಿಕ್ಷಕರಾಗಿ, 1,342 ಪ್ರೌಢ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ನೀಡಲಾಗಿದೆ ಎಂದಿದ್ದಾರೆ.

ಇದಲ್ಲದೆ 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 40 ಮಂದಿ ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂತೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಶಿಕ್ಷಕ ಮಿತ್ರ ಆ್ಯಪ್​ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ, 2,500 ಟಿಜಿಟಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ 20,000 ಶಿಕ್ಷಕರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ ಮತ್ತು ನಿರ್ದೇಶನಾಲಯಗಳಲ್ಲಿ ದೀರ್ಘ ಅವಧಿಯಿಂದ ಬಾಕಿ ಉಳಿದಿರುವ ಆಡಳಿತಾತ್ಮಕ, ನೌಕರರ ಸೇವಾ ವಿಷಯಗಳು ಮತ್ತು ಶಿಕ್ಷಣ ಇಲಾಖೆಯ ವಿವಿಧ ನೌಕರರ ಸಂಘಗಳ ಬೇಡಿಕೆಗಳ ಇತ್ಯರ್ಥಕ್ಕೆ ಮತ್ತು ಇಂತಹ ಸಮಸ್ಯೆಗಳ ಕಡತಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಶಿಕ್ಷಣ ಇಲಾಖೆಯ ವಿವಿಧ ಸ್ತರಗಳಲ್ಲಿ ಬಾಕಿ ಇರುವ ಹಲವಾರು ಸಮಸ್ಯೆಗಳನ್ನು ವಿಭಾಗಿಸಿ ಪ್ರತ್ಯೇಕವಾಗಿ ವರದಿಯೊಂದಿಗೆ ಪ್ರಸ್ತಾವನೆ ಸಲ್ಲಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ಅರ್ಹ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಶಿಕ್ಷಕರ ವರ್ಗಾವಣೆ, ಪದವಿ ಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆ, ವೃಂದ ನೇಮಕಾತಿ ನಿಯಮಗಳ ಪರಿಷ್ಕರಣೆ, ನೇರ ನೇಮಕಾತಿ, ಪದನಾಮ ಪರಿಷ್ಕರಣೆ, ಕಾಲಮಿತಿ ಬಡ್ತಿ, ವೇತನ ತಾರತಮ್ಯ, ಬಡ್ತಿ ಹೊಂದಿದ ಶಿಕ್ಷಕರು ಮತ್ತು ಉಪನ್ಯಾಸಕರ ವೇತನದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವುದು ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ನೌಕರರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪ್ರತ್ಯೇಕವಾಗಿ ಮತ್ತು ಸಂಘಟನೆವಾರು ಪ್ರಸ್ತಾವನೆ ಮಂಡಿಸಬೇಕೆಂದು ಸೂಚನೆ ನೀಡಿದರು.

ಇದನ್ನೂ ಓದಿ: ಇನ್ಮುಂದೆ ಫಲಾನುಭವಿಗಳ ಅಕೌಂಟ್​​ಗೆ ಮಾಸಾಶನ: ಅಭಿಯಾನಕ್ಕೆ ಸಿಎಂ ಚಾಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.