ETV Bharat / state

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2814 ಚಾಲಕರ ಹುದ್ದೆಗಳ ಶೀಘ್ರ ನೇಮಕ : ಸಚಿವ ಶ್ರೀರಾಮುಲು

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2,814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ವಿಧಾನಸಭೆಯಲ್ಲಿ ಹೇಳಿದರು.

recruitment-of-2814-driver-posts-in-transport-department
ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ 2814 ಚಾಲಕರ ಹುದ್ದೆಗಳ ಶೀಘ್ರ ನೇಮಕ : ಸಚಿವ ಶ್ರೀರಾಮುಲು
author img

By

Published : Sep 21, 2022, 6:31 PM IST

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆ ಶಾಸಕ ಲಿಂಬಣ್ಣನವರ ಪ್ರಶ್ನೆಗೆ ಉತ್ತರಿಸಿದ ಅವರು, 2814 ಚಾಲಕರು ಹಾಗೂ ಇದರ ಜೊತೆಗೆ ಹೆಚ್ಚುವರಿಯಾಗಿ ಚಾಲಕ ಕಂ ನಿರ್ವಾಹಕರನ್ನು ಸಹ ನೇಮಕ ಮಾಡಿಕೊಳ್ಳಲಾಗುತ್ತದೆ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ಇವರನ್ನು ನಿಯೋಜನೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

2814 ಚಾಲಕರ ಹುದ್ದೆಗಳ ನೇಮಕ : ಪ್ರಸ್ತುತ ಸಂಸ್ಥೆಯಲ್ಲಿ 2500 ಚಾಲಕ, 55 ಚಾಲಕರು (ಬ್ಯಾಕ್‍ಲಾಗ್ ), 250 ಚಾಲಕ ಕಂ ನಿರ್ವಾಹಕ(ಬ್ಯಾಕ್‍ಲಾಗ್) ಸೇರಿದಂತೆ ಒಟ್ಟು 2814 ಹುದ್ದೆಗಳ ನೇಮಕಕ್ಕೆ 2019ರಲ್ಲೇ ಅಧಿಸೂಚನೆ ಹೊರಡಿಸಲಾಗಿತ್ತು. ಕೋವಿಡ್ ಕಾರಣದಿಂದ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆಗೆ ಪ್ರಸ್ತಾವನೆ ಸ್ವೀಕೃತಗೊಂಡಿದೆ ಎಂದು ಹೇಳಿದರು.

ಗದಗ ಜಿಲ್ಲೆ ಕಲಘಟ್ಟಗಿ ತಾಲ್ಲೂಕಿನ ಬಸ್ ಘಟಕಕ್ಕೆ 50 ಹೊಸ ಬಸ್‍ಗಳನ್ನು ನೀಡಬೇಕೆಂದು ಶಾಸಕರು ಮನವಿ ಮಾಡಿದರು. ಆಗ ನಮ್ಮ ಮುಂದೆ ಸದ್ಯಕ್ಕೆ ಹೊಸ ಬಸ್‍ಗಳನ್ನು ಖರೀದಿಸುವ ಪ್ರಸ್ತಾವನೆ ಇಲ್ಲ. ಇರುವ ಕಡೆ ಬಸ್‍ಗಳನ್ನು ಹೊಂದಾಣಿಕೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಹೊಸ ಬಸ್ ಖರೀದಿಗೆ ಟೆಂಡರ್ ಆಹ್ವಾನ : ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸಾರಿಗೆ ಸಂಸ್ಥೆಗೆ 650 ಹೊಸ ಬಸ್‌ ಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು. ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ ಸದಸ್ಯ ಈಶ್ವರ್ ಖಂಡ್ರೆ ಪ್ರಶ್ನೆಗೆ ಅವರು ಉತ್ತರಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ - ಕಾಲೇಜು ಮಕ್ಕಳಿಗೆ ಸಮರ್ಪಕ ಬಸ್ ವ್ಯವಸ್ಥೆಯನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಕೋವಿಡ್ ಪೂರ್ವದಲ್ಲಿ ಇದ್ದಂತೆ ಬಸ್‌ಗಳ ಕಾರ್ಯಾಚರಣೆಯನ್ನು ಮಾಡಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 1797 ವಾಹನಗಳು 9 ಲಕ್ಷ ಕಿ.ಮೀ.ಗಿಂತ ಹೆಚ್ಚಿನ ಕಿಲೋ ಮೀಟರ್ ಕ್ರಮಿಸಿದ್ದು, ಈ ಬಸ್‌ಗಳನ್ನು ಬದಲಿಸಿ ಹೊಸ ಬಸ್‌ಗಳನ್ನು ನೀಡಲಾಗುವುದು. ಸಂಸ್ಥೆಯ ಆರ್ಥಿಕ ಸ್ಥಿತಿ ಅಷ್ಟೇನು ಉತ್ತಮವಾಗಿಲ್ಲ.

ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಹೊಸ ಬಸ್‌ಗಳನ್ನು ಒದಗಿಸಲಾಗುವುದು. ಹೊಸ ಬಸ್‌ಗಳ ಖರೀದಿಗೆ ಟೆಂಡರ್ ಕರೆದಿದ್ದೇವೆ. ಟೆಂಡರ್ ಪ್ರಕ್ರಿಯೆ ಮುಗಿದು ಹೊಸ ಬಸ್‌ಗಳು ಲಭ್ಯವಾದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೂ ಹೊಸ ಬಸ್‌ಗಳನ್ನು ನೀಡುವುದಾಗಿ ಅವರು ಹೇಳಿದರು.

ಬಸ್​​​​ಗಳಿಲ್ಲದೇ ವಿದ್ಯಾರ್ಥಿಗಳ ಪರದಾಟ : ​ಇದಕ್ಕೂ ಮೊದಲು ಪ್ರಶ್ನೆ ಕೇಳಿದ್ದ ತುಕಾರಾಮ್ ನರಸಿಂಹನಾಯಕ್ ಅವರು ಬಳ್ಳಾರಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಮಾಡಿ, ಬಸ್‌ಗಳಿಲ್ಲದೆ ಮಕ್ಕಳು ತೊಂದರೆಗೆ ಸಿಲುಕಿದ್ದಾರೆ ಎಂದು ಹೇಳಿದ್ದರು.

ಈ ಸಂದರ್ಭದಲ್ಲಿ ಹಲವು ಸದಸ್ಯರು ಎದ್ದುನಿಂತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರವಲ್ಲ, ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಸಾರಿಗೆ ಸಂಸ್ಥೆ ಬಸ್‌ಗಳ ಓಡಾಟ ಸಮರ್ಪಕವಾಗಿಲ್ಲ. ಎಲ್ಲ ಕಡೆಗಳಲ್ಲಿ ಬಸ್‌ಗಳ ತೊಂದರೆಯಿದೆ ಎಂದು ಇತರ ಸದಸ್ಯರು ಕೇಳಲು ಆರಂಭಿಸಿದಾಗ, ಇದರಿಂದ ಸದನದಲ್ಲಿ ಗೊಂದಲದ ಪರಿಸ್ಥಿತಿ ಉಂಟಾಯಿತು.

ಇದನ್ನೂ ಓದಿ : ವಿಧಾನಸಭೆಯಲ್ಲಿ ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ: ಚರ್ಚೆಗೆ ಸರ್ಕಾರ ಸಿದ್ಧ ಎಂದ ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.