ETV Bharat / state

ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ: ಸಚಿವ ಅಶ್ವತ್ಥ್​ ನಾರಾಯಣ್​​ ಭರವಸೆ

ಎಲ್ಲರಿಗೂ ಗೊತ್ತಿರುವಂತೆ ಶೈಕ್ಷಣಿಕ ವರ್ಷ ನಿಲ್ಲಬಾರದು ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಪಿಯುಸಿ, ಎಸ್​ಎಸ್​ಎಲ್​ಸಿ, ಸಿಇಟಿ, ನೀಟ್‌ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ್​​ ತಿಳಿಸಿದರು.

Dr.CN Ashwath Narayan
ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ್
author img

By

Published : Oct 15, 2020, 5:57 PM IST

ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆಯಂತೆ ಅತಿ ಶೀಘ್ರದಲ್ಲಿಯೇ ಕಾಲೇಜುಗಳು ಆರಂಭವಾಗುತ್ತಿದ್ದು, ಅದರಂತೆ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಕೂಡಲೇ ಕೌನ್ಸೆಲಿಂಗ್‌ ಮುಗಿಸಿಕೊಂಡು ನೇಮಕಾತಿ ಆದೇಶದ ನಿರೀಕ್ಷೆಯಲ್ಲಿರುವ ಎಲ್ಲ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ್​​ ತಿಳಿಸಿದರು.

ನೇಮಕಾತಿ ಪತ್ರ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಪಿಯು ಮಂಡಳಿ ಎದುರು ಧರಣಿ ನಡೆಸುತ್ತಿರುವ ಭಾವಿ ಉಪನ್ಯಾಸಕರನ್ನು ಗುರುವಾರ ಭೇಟಿಯಾದ ಡಿಸಿಎಂ, ಹಣಕಾಸು ಇಲಾಖೆಯ ಕೆಲ ಆಕ್ಷೇಪಗಳ ಕಾರಣಕ್ಕೆ ನೇಮಕಾತಿ ಪತ್ರಗಳನ್ನು ನೀಡುವುದು ತಡವಾಗಿದೆ. ಇದಕ್ಕೆ ಕೋವಿಡ್‌ ಕೂಡ ಒಂದು ಪ್ರಮುಖ ಕಾರಣ. ಇದೀಗ ಸ್ವತಃ ಮುಖ್ಯಮಂತ್ರಿಗಳೇ ಹಣಕಾಸು ಇಲಾಖೆ ಎತ್ತಿದ್ದ ಆಕ್ಷೇಪಗಳನ್ನು ನಿವಾರಿಸಿ ಕಾಲೇಜುಗಳು ಆರಂಭವಾದ ಕೂಡಲೇ ನೇಮಕಾತಿ ಆದೇಶ ನೀಡುವಂತೆ ಸೂಚಿಸಿದ್ದಾರೆ ಎಂದರು.

ದಿನೇ ದಿನೆ ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಲೆ ಕಾಲೇಜುಗಳು ಶುರುವಾಗುವುದು ಇನ್ನೂ ತಡವಾಗಬಹುದು. ಹೀಗಾಗಿ, ಈಗಲೇ ಆದೇಶ ಪತ್ರಗಳನ್ನು ನೀಡಿ ಎಂದು ಉಪನ್ಯಾಸಕರು ಒತ್ತಾಯ ಮಾಡಿದರು. ಇದಕ್ಕೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಕಾಲೇಜುಗಳನ್ನು ಆರಂಭ ಮಾಡಿ ಎಂದು ಈಗಾಗಲೇ ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಕೆಲಸ ಮಾಡುತ್ತಿದೆ ಹಾಗೂ ಕೆಲ ಮೂಲ ಸೌಕರ್ಯಗಳ ತಯಾರಿಯನ್ನೂ ಮಾಡಿಕೊಳ್ಳುತ್ತಿದೆ. ನಿಮಗೆ ಅನುಮಾನವೇ ಬೇಡ. ಕಾಲೇಜುಗಳು ಖಂಡಿತವಾಗಿಯೂ ಆರಂಭವಾಗುತ್ತವೆ. ಸರ್ಕಾರದ ಮೇಲೆ ನಂಬಿಕೆ ಇಡಿ ಎಂದು ಮನವಿ ಮಾಡಿದರು.

ಸರ್ಕಾರ ನಿಮ್ಮ ಪರವಾಗಿದೆ: ಎಲ್ಲರಿಗೂ ಗೊತ್ತಿರುವಂತೆ ಶೈಕ್ಷಣಿಕ ವರ್ಷ ನಿಲ್ಲಬಾರದು ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಪಿಯುಸಿ, ಎಸ್​ಎಸ್​ಎಲ್​ಸಿ, ಸಿಇಟಿ, ನೀಟ್‌ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಯಾವುದೇ ಕಾರಣಕ್ಕೂ ಅಕಾಡೆಮಿಕ್‌ ವರ್ಷ ನಿಲ್ಲುವುದಿಲ್ಲ. ಶೈಕ್ಷಣಿಕ ಚಟುವಟಿಕೆಗಳು ನಿರಾತಂಕವಾಗಿ ನಡೆಯಲೇಬೇಕು. ಜೊತೆಗೆ ನಮ್ಮ ಸರ್ಕಾರವೂ ಶಿಕ್ಷಕರು, ಉಪನ್ಯಾಸಕರ ಪರವಾಗಿದೆ. ನಿಮ್ಮ ಬೇಡಿಕೆಯನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿದ್ದಾರೆಂದು ತಿಳಿಸಿದರು.

ಹಣಕಾಸು ಇಲಾಖೆ ಎತ್ತಿದ್ದ ಆಕ್ಷೇಪಗಳ ನಡುವೆಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​‌ ಕುಮಾರ್‌ ಅವರ ಒತ್ತಾಸೆಯಿಂದ ಕೋವಿಡ್‌ ನಡುವೆಯೇ ಕೌನ್ಸೆಲಿಂಗ್‌ ನಡೆಸಲಾಗಿದೆ. ಉದ್ಯೋಗ ಸ್ಥಳವನ್ನೂ ತೋರಿಸಲಾಗಿದೆ. ಒಂದು ವರ್ಷದೊಳಗೆ ನೇಮಕಾತಿ ಆದೇಶ ಬೇಕು ಎನ್ನುವ ನಿಮ್ಮ ಆತಂಕ ಸರ್ಕಾರಕ್ಕೆ ಅರ್ಥವಾಗುತ್ತದೆ. ಯಾವುದೇ ಆತಂಕ ನಿಮಗೆ ಬೇಡ. ನಂಬಿಕೆ ಇಡಿ; ಧರಣಿ ಕೈಬಿಡಿ. ತರಗತಿಗಳು ಆರಂಭವಾಗುತ್ತಿದ್ದಂತೆ ನೇಮಕಾತಿ ಆದೇಶ ಪತ್ರಗಳು ನಿಮ್ಮನ್ನು ತಲುಪುತ್ತವೆ ಎಂದು ಭರವಸೆ ನೀಡಿದರು.

ಕೋವಿಡ್‌ ಕಾರಣದಿಂದ ದೇಶದ ಯಾವುದೇ ರಾಜ್ಯದಲ್ಲೂ ನೇಮಕಾತಿಗಳು ನಡೆಯುತ್ತಿಲ್ಲ. ಅಷ್ಟೇ ಏಕೆ? ನಮ್ಮ ರಾಜ್ಯದ ಎಲ್ಲ ಇಲಾಖೆಗಳಲ್ಲೂ ಹೊಸ ನೇಮಕಾತಿಯನ್ನು ಸಂಪೂರ್ಣವಾಗಿ ತಡೆ ಹಿಡಿಯಲಾಗಿದೆ. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಎಲ್ಲ ಅಡ್ಡಿಗಳನ್ನು ಬದಿಗೊತ್ತಿ ಒಪ್ಪಿಕೊಂಡಿದೆ ಎಂದು ವಿವರಿಸಿದರು.

ನಿರ್ದೇಶಕರ ಜೊತೆ ಮಾತುಕತೆ: ಇದೇ ವೇಳೆ, ಉಪ ಮುಖ್ಯಮಂತ್ರಿಗಳು ಪಿಯುಸಿ ಮಂಡಳಿ ನಿರ್ದೇಶಕಿ ಸ್ನೇಹಾಲ್‌ ಅವರ ಜೊತೆ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಈ ಬಗ್ಗೆ ಅವರಿಂದ ಎಲ್ಲ ಮಾಹಿತಿಯನ್ನು ಪಡೆದುಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.