ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಮುಂದಿನ 48 ಗಂಟೆಗಳ ಅವಧಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 11ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರ್ನಾಟಕದಲ್ಲಿ ಶನಿವಾರವೂ ಧಾರಾಕಾರ ಮಳೆ ಸುರಿಯುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಖ್ಯವಾಗಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳು ಮಳೆಯ ಅಬ್ಬರಕ್ಕೆ ತುತ್ತಾಗಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ತಂಪಾದ ವಾತಾವರಣ: ಸಿಲಿಕಾನ್ ಸಿಟಿಯಲ್ಲಿ ತಂಪಾದ ಗಾಳಿ ಮತ್ತು ತುಂತುರು ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಪ್ರವಾಹದ ಭೀತಿ ಎದುರಿಸುತ್ತಿವೆ.
ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆ: ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಧಾರಾಕಾರ ಮಳೆ: ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಸದ್ಯದ ಮಾಹಿತಿ