ETV Bharat / state

ಜುಲೈ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ.. ಹಲವು ಜಿಲ್ಲೆಗಳಿಗೆ ರೆಡ್​ ಅಲರ್ಟ್​..

ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಜುಲೈ 18ರಂದು ಯೆಲ್ಲೋ ಅಲರ್ಟ್, ಜುಲೈ 15, 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ..

ಜುಲೈ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

author img

By

Published : Jul 14, 2021, 5:23 PM IST

Updated : Jul 14, 2021, 5:34 PM IST

ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತಾರ ಪ್ರದೇಶವಿದೆ. ಕಚ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 14ರಿಂದ 18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ ಎಸ್ ಪಾಟೀಲ್​ ಎಚ್ಚರಿಸಿದ್ದಾರೆ.

ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದಿದ್ದಾರೆ.

ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಜುಲೈ 18ರಂದು ಯೆಲ್ಲೋ ಅಲರ್ಟ್, ಜುಲೈ 15, 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ನೈರುತ್ಯ ಮುಂಗಾರು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಧವಾರ ಸಾಮಾನ್ಯ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ.

ಮುಖ್ಯವಾಗಿ, ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 13 ಸೆಂ.ಮೀ, ಸುಬ್ರಮಣ್ಯದಲ್ಲಿ 10 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಓದಿ: ಕೊಡಗು ಜಿಲ್ಲೆಯಾದ್ಯಂತ ನಿಲ್ಲದ ವರುಣನ ಅಬ್ಬರ.. ರೆಡ್​​​ ಅಲರ್ಟ್​ ನಡುವೆ 204 ಮಿ.ಮೀ ಮಳೆ ಸಾಧ್ಯತೆ

Last Updated : Jul 14, 2021, 5:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.