ETV Bharat / state

ಭಾರೀ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ

ರಾಜ್ಯದ ಮಳೆಯ ಪ್ರಸ್ತುತ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ದೂರವಾಣಿ ಮೂಲಕ ಆಡಿಯೋ ಸಭೆ ನಡೆಸಿ ಚರ್ಚೆ ನಡೆಸಿದರು.

heavy rainfall predicted
ಭಾರೀ ಮಳೆ
author img

By

Published : Aug 6, 2020, 4:08 AM IST

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ದೂರವಾಣಿ ಮೂಲಕ ಆಡಿಯೋ ಸಭೆ ನಡೆಸಿ ಚರ್ಚೆ ನಡೆಸಿದರು.

ನಂತರ ಮಾತನಾಡಿದ‌ ಸಚಿವರು, ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾಧಿಕಾರಿಗಳಿಗೆ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ಬಗ್ಗೆ ಎಚ್ಚರಿಕೆ ನೀಡಿದ್ದೇವೆ. ಕಾವೇರಿ ಕಣಿವೆ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ. ಜಲಾಶಯಗಳ ಒಳಹರಿವು ಸಹ ಹೆಚ್ಚಲಿದೆ. 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿ ಮಾಹಿತಿ ಪಡೆದು ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದೇನೆ ಎಂದರು.

R. Ashoka
ಕಂದಾಯ ಸಚಿವ ಆರ್.ಅಶೋಕ್

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಮೂಡಿಗೆರೆ ಭಾಗದಲ್ಲಿ ಕೆಲವು ಮನೆಗಳು ಹಾನಿಯಾಗಿದ್ದು, ಕೂಡಲೇ 10,000 ರೂ. ಪರಿಹಾರ ಪಾವತಿಗೆ ಸೂಚಿಸಿದ್ದೇನೆ. ಉಡುಪಿ ಜಿಲ್ಲೆಯ ಬೈಂದೂರು ಭಾಗದಲ್ಲಿ 150 ಮಿ.ಮೀ. ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ಉರುಳಿವೆ. ಮರಗಳನ್ನು ತೆರವುಗೊಳಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಮರಗಳು ಉರುಳಿವೆ. ಶಿವಮೊಗ್ಗದ ಕೆಲಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಮರಗಳು ಉರುಳಿದ್ದು, ಯಾವುದೇ ಮನೆಗಳಿಗೆ ಧಕ್ಕೆಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಶೋಕ್ ಮಾಹಿತಿ ನೀಡಿದರು.

ಜುಲೈ 25ರಂದು ಜಿಲ್ಲಾಧಿಕಾರಿಗಳ ಜೊತೆ ನಡೆದಿದ್ದ ವಿಡಿಯೋ ಸಂವಾದದಲ್ಲಿ ಅಗತ್ಯ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದ ಯೋಜನೆ ರೂಪಿಸಲಾಗಿದೆ. ಎಲ್ಲ ಜಿಲ್ಲೆಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಹಾರಾಷ್ಟ್ರ ಜಲಾಶಯಗಳ ಹೊರಹರಿವು ಸಂಬಂಧ ನೆರೆಯ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಿಕೊಡಲಾಗಿದೆ ಎಂದ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.