ETV Bharat / state

ಕೈಗಾರಿಕಾ ಭದ್ರತಾ ಪಡೆ ನಿಯೋಜನೆ ಮೂಲಕ ಕಾನೂನು ಬಾಹಿರ ಕೃತ್ಯಗಳಿಗೆ ಬ್ರೇಕ್​: ಗೃಹ ಸಚಿವ ಆರಗ ಜ್ಞಾನೇಂದ್ರ - ಕೈಗಾರಿಕಾ ಭದ್ರತಾ ಪಡೆ ನಿಯೋಜನೆ ಮೂಲಕ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ

ಜೈಲಿನ ಒಳಗೆ ಹೋಗುವವರನ್ನು ತಪಾಸಣೆ ಮಾಡಲು ಜೈಲು ಸಿಬ್ಬಂದಿಯ ಬದಲಿಗೆ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಮೂಲಕ ಜೈಲಿನ ಒಳಗೆ ನಡೆಯುತ್ತಿದ್ದ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಗೆ ಹೇಳಿದ್ರು.

Home Minister Araga Jnanendra
ಗೃಹ ಸಚಿವ ಅರಗ ಜ್ಞಾನೇಂದ್ರ
author img

By

Published : Mar 15, 2022, 8:37 PM IST

ಬೆಂಗಳೂರು : ರಾಜ್ಯದ ಕಾರಾಗೃಹಗಳಲ್ಲಿ ಮಾದಕ ವಸ್ತು, ಫೋನ್​ಗಳನ್ನು ತೆಗೆದುಕೊಂಡು ಹೋಗುವುದು ಸೇರಿದಂತೆ ಕಾನೂನು ಬಾಹಿರ ಕೃತ್ಯ ನಡೆಯುವುದನ್ನು ತಡೆಯಲು ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ನಿಯೋಜಿಸಿದ್ದು, ಈಗ ನಿಯಂತ್ರಣಕ್ಕೆ ಬರುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ತಿಳಿಸಿದರು.

ಕೈಗಾರಿಕಾ ಭದ್ರತಾ ಪಡೆ ನಿಯೋಜನೆ ಮೂಲಕ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ

ಇಂದು ಪ್ರಶ್ನೋತ್ತರ ವೇಳೆ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜೈಲಿನ ಒಳಗೆ ಹೋಗುವವರನ್ನು ತಪಾಸಣೆ ಮಾಡಲು ಜೈಲು ಸಿಬ್ಬಂದಿಯ ಬದಲಿಗೆ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಿಂದ ಇಂತಹ ಕೃತ್ಯಗಳು ನಿಯಂತ್ರಣಕ್ಕೆ ಬರುತ್ತಿವೆ ಎಂದರು.

ಬೆಂಗಳೂರು, ಮಂಗಳೂರು, ಬಳ್ಳಾರಿ, ಬೆಳಗಾವಿಯ ಕೇಂದ್ರ ಕಾರಾಗೃಹಗಳಿಗೆ ಕೆಎಸ್‌ಐಎಸ್‌ಎಫ್ ಘಟಕದ ಅಧಿಕಾರಿಗಳನ್ನು ಈಗಾಗಲೇ ನಿಯೋಜಿಸಲಾಗಿದ್ದು, 2ನೇ ಹಂತದಲ್ಲಿ ಮೈಸೂರು, ಧಾರವಾಡ , ವಿಜಯಪುರ ಜಿಲ್ಲೆಗಳ ಕಾರಾಗೃಹಗಳಿಗೂ ಈ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು.

ಅಪಘಾತದಲ್ಲಿ ಉಪವಿಭಾಗಾಧಿಕಾರಿ ಸಾವು : ಯಾವುದೇ ಸುಳಿವು ಇಲ್ಲ ಎಂದ ಗೃಹ ಸಚಿವರು

ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿದ್ದ ಜಿ.ವಿ.ಪ್ರಸನ್ನ ಎಂಬುವರು 2021ರ ಮೇ ತಿಂಗಳಿನಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದು, ಅಪಘಾತ ಮಾಡಿದವರ ಬಗ್ಗೆ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಶಾಸಕ ಟಿ.ರಘುಮೂರ್ತಿ ಅವರ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದರು.

ಆದರೂ ಪೊಲೀಸರು ಕೈ ಚೆಲ್ಲಿ ಕುಳಿತಿಲ್ಲ. ಅಪಘಾತ ಮಾಡಿದವರ ಪತ್ತೆಗೆ ಪ್ರಯತ್ನ ಮಾಡಲಾಗುತ್ತಿದೆ. 60ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಸಿಸಿಟಿವಿಗಳನ್ನೂ ಸಹ ಪರಿಶೀಲಿಸಲಾಗಿದೆ. ಸುಮಾರು 2000ಕ್ಕೂ ಹೆಚ್ಚು ದ್ವಿಚಕ್ರವಾಹನ, 800ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಲಾಗಿದೆ. ಅಲ್ಲದೆ ಅಪಘಾತದ ಎಸಗಿದವರ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲಾಗಿದೆ. ಆದರೂ ಅಪಘಾತ ಎಸಗಿದ ಆರೋಪಿಗಳ ಪತ್ತೆಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಔರಾದ್ಕರ್ ವರದಿ ಅನುಷ್ಠಾನಗೊಳಿಸುವಂತೆ ಎಂ ಬಿ ಪಾಟೀಲ್ ಆಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.