ETV Bharat / state

ಇ-ಸ್ವತ್ತು ಯೋಜನೆಯನ್ನು ಜನಸ್ನೇಹಿಗೊಳಿಸಲು ಸುಧಾರಣೆ ಮಾಡಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಇ-ಸ್ವತ್ತು ಕಾರ್ಯಕ್ರಮದಡಿ ನೀಡಲಾಗುತ್ತಿರುವ ದಾಖಲೆಗಳನ್ನು ಪಡೆಯಲು ಆಗುತ್ತಿರುವ ಸಮಸ್ಯೆಗಳಲ್ಲಿ ಸುಧಾರಣೆ ತಂದು ಯೋಜನೆಯನ್ನು ರೂಪಿಸಲು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

reforms-to-make-e-asset-scheme-people-friendly-says-minister-priyank-kharge
ಇ-ಸ್ವತ್ತು ಯೋಜನೆಯನ್ನು ಜನಸ್ನೇಹಿಗೊಳಿಸಲು ಸುಧಾರಣೆ ಮಾಡಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
author img

By

Published : Aug 9, 2023, 10:50 PM IST

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂದಾಯೇತರ ಭೂಮಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ಇ-ಸ್ವತ್ತು ಕಾರ್ಯಕ್ರಮದಡಿ ನೀಡಲಾಗುತ್ತಿರುವ ದಾಖಲೆಗಳನ್ನು ಪಡೆಯಲು ಆಗುತ್ತಿರುವ ಸಮಸ್ಯೆಗಳಲ್ಲಿ ಸುಧಾರಣೆ ತಂದು ಯೋಜನೆಯನ್ನು ಜನಸ್ನೇಹಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿಂದು ಸಂಜೆ ತಮ್ಮ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, 2013 ರಿಂದ ಇ-ಸ್ವತ್ತು ಸೌಲಭ್ಯವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಾರಿಗೆ ತರಲಾಗಿದೆಯಾದರೂ ದಾಖಲೆಗಳನ್ನು ಪಡೆದುಕೊಳ್ಳುವಲ್ಲಿ ಗ್ರಾಮೀಣ ಜನರಿಗೆ ಆಗುತ್ತಿರುವ ತೊಡಕುಗಳ ನಿವಾರಣೆಯಾಗಿಲ್ಲ. ಹಾಗಾಗಿ ಇ-ಸ್ವತ್ತು ಯೋಜನೆಯನ್ನು ಜನಸ್ನೇಹಿಗೊಳಿಸಲು ಸುಧಾರಣೆಗಳನ್ನು ತಂದು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸಿ, ಡಿಜಿಟಲ್ ಗ್ರಂಥಾಲಯಗಳಾಗಿ ಮಾರ್ಪಡಿಸುವ ಕೆಲಸ ಭರದಿಂದ ಸಾಗಿದ್ದು, ರಾಜ್ಯದಲ್ಲಿನ ಒಟ್ಟಾರೆ 5819 ಪಂಚಾಯತಿ ಗ್ರಂಥಾಲಯಗಳ ಪೈಕಿ ಈಗಾಗಲೆ 5043 ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಉಳಿದ ಗ್ರಂಥಾಲಯಗಳ ಅಭಿವೃದ್ಧಿ ಕಾರ್ಯವನ್ನು ಮುಂದುವರೆಸಲು ಸೂಚಿಸಿದರು. ರಾಜ್ಯದ ಗ್ರಾಮೀಣ ಶಾಲೆಗಳಲ್ಲಿ 60,85,370 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇವರಲ್ಲಿ 40,19,962 ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ವಿಶೇಷ ಚೇತನರಿಗಾಗಿ 735 ಬೀಕನ್ ಗ್ರಂಥಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೆ 505 ಬೀಕನ್ ಗ್ರಂಥಾಲಯಗಳು ಪೂರ್ಣಗೊಂಡಿದ್ದು ಉಳಿದವುಗಳ ಕಾಮಗಾರಿ ಪೂರ್ಣಗೊಳಿಸಲು ತ್ವರಿತ ಕ್ರಮ ವಹಿಸಬೇಕು. ಮಕ್ಕಳಿಗೆ ಹೆಚ್ಚು ಜ್ಞಾನ ನೀಡುವ ಅರಿವು ಕೇಂದ್ರಗಳನ್ನಾಗಿ ಈ ಗ್ರಂಥಾಲಯಗಳನ್ನು ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತಹ ಪುಸ್ತಕಗಳನ್ನು ಪ್ರತ್ಯೇಕವಾಗಿ ಇರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಇ-ಗೌರ್ನೆನ್ಸ್ ನಿರ್ದೇಶಕಿ ಶುಭಾ ಕಲ್ಯಾಣ್ ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Centenary Ceremony of Karnataka Administrative Service Officers Association
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ

ಕೆಎಎಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ವೇತನ: ವಿಧಾನಸೌಧದಲ್ಲಿ ನಡೆದ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೆಎಎಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ತಮ್ಮ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ. ಸಂಘದ ಶತಮಾನೋತ್ಸವ ಅಂಗವಾಗಿ ಕೆ.ಎ.ಎಸ್ ಅಧಿಕಾರಿಗಳ ಸಂಘ ಸ್ಥಾಪಿಸಿದ ಕಲ್ಯಾಣ ನಿಧಿಗೆ ತಮ್ಮ ಒಂದು ತಿಂಗಳ ವೇತನ ದೇಣಿಗೆ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ:ಕರ್ನಾಟಕ ಸುವರ್ಣ ಮಹೋತ್ಸವ: ಕಾರ್ಯಕ್ರಮ ರೂಪಿಸಲು ಸಾಹಿತಿಗಳು, ಕಲಾವಿದರ ಸಲಹೆ ಪಡೆದ ಸಚಿವ ತಂಗಡಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.