ETV Bharat / state

Surjewala: ಬಿಜೆಪಿ ಬಡವರ ವಿರೋಧಿ, ಮೋದಿಯ ಶತ್ರುತ್ವ ನೀತಿ ಬಯಲಾಗಿದೆ- ಸುರ್ಜೇವಾಲ - ಮುಕ್ತ ಮಾರುಕಟ್ಟೆ

ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನಿರಾಕರಿಸುವುದಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

AICC General Secretary Randeep Singh Surjewala
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ
author img

By

Published : Jun 15, 2023, 9:33 PM IST

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚಿನ ಅಕ್ಕಿ ವಿತರಣೆಗೆ ಕೈಗೊಂಬೆಯಾಗಿರುವ ಎಫ್‌ಸಿಐ ನಿರಾಕರಿಸಿರುವುದು ಬಿಜೆಪಿಯ ಬಡವರ ವಿರೋಧಿ ಹಾಗೂ ಪ್ರಧಾನಿಯ ಶತ್ರುತ್ವ ನೀತಿ ಬಯಲು ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಸುರ್ಜೆವಾಲ, ಟ್ವೀಟ್‌ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಅನ್ನಭಾಗ್ಯ ಯೋಜನೆಯಲ್ಲಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ ಜಿ ಅಕ್ಕಿ ಉಚಿತ ನೀಡಲಾಗುವುದು. ಈ ಯೋಜನೆಯಲ್ಲಿ ರಾಜ್ಯದ 1.28 ಕೋಟಿ ಕುಟುಂಬಗಳು ಸೇರಿದಂತೆ ಸುಮಾರು 4.42 ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಇದಕ್ಕೆ ಬೇಕಾಗುವ ₹11,000 ಕೋಟಿ ನೀಡಲು ಸಿದ್ಧವಿದೆ. ಆದರೂ ಮೋದಿ ಸರ್ಕಾರ ಭಾರತೀಯ ಆಹಾರ ನಿಗಮಕ್ಕೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಂತೆ ನಿರ್ದೇಶನ ನೀಡಿದೆ ಎಂದಿದ್ದಾರೆ.

ಭಾರತೀಯ ಆಹಾರ ನಿಗಮದ ಬಳಿ ಹೆಚ್ಚುವರಿ ಅಕ್ಕಿ ದಾಸ್ತಾನು ಇದೆ. ಆದರೂ FCI ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಲು ಮುಂದಾಗಿದ್ದು, ಕರ್ನಾಟಕ ರಾಜ್ಯಕ್ಕೆ ನೀಡಲು ಸಿದ್ಧವಿಲ್ಲ. ಇದು ಭ್ರಷ್ಟ ಬಿಜೆಪಿಯನ್ನು ಬಡಿದೋಡಿಸಿದ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತ್ತು ಬಡವರ ವಿರುದ್ಧ ಬಿಜೆಪಿ ಹಾಗೂ ಮೋದಿ ಸರ್ಕಾರಕ್ಕೆ ಇರುವ ದ್ವೇಷ ತೋರುತ್ತಿದೆ. ಸುರ್ಜೇವಾಲ ಕೇಳಿರುವ ಪ್ರಶ್ನೆಗಳು..

1. ತನ್ನ ಸೋಲಿನಿಂದಾಗಿ ಜನರಿಗೆ ಅನ್ನ ನಿರಾಕರಿಸುವಷ್ಟರ ಮಟ್ಟಿಗೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಕುರುಡರಾಗಿದ್ದಾರಾ?
2. ಎಫ್‌ಸಿಐ ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಅಕ್ಕಿ ಮಾರಲು ಸಿದ್ಧವಿದೆ. ಆದರೆ, ರಾಜ್ಯಕ್ಕೆ ಉತ್ತಮ ದರದಲ್ಲಿ ಅಕ್ಕಿ ನೀಡಲು ನಿರ್ಬಂಧ ಹೇರಿರುವುದೇಕೆ?

3. ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ನೀಡಬಾರದು ಎಂಬ ಒಂದೇ ಉದ್ದೇಶದಿಂದ ಈ ತೀರ್ಮಾನ ಮಾಡಿದೆಯಲ್ಲವೇ?
4. ಕಾಂಗ್ರೆಸ್ ಸರ್ಕಾರ ಎಫ್‌ಸಿಐ ಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದ ನಂತರ ಕೇಂದ್ರ ಸರ್ಕಾರವು ಕೇವಲ ಮುಕ್ತ ಮಾರುಕಟ್ಟೆಯಲ್ಲಿ ದೊಡ್ಡ ವ್ಯಾಪಾರಿಗಳಿಗೆ ಮಾತ್ರ ಮಾರಾಟ ಮಾಡುವಂತೆ ನಿರ್ದೇಶನ ನೀಡಿರುವುದು ಸ್ವಲ್ಪ ಅತಿಯಾದ ಕಾಕತಾಳೀಯವಲ್ಲವೇ?
5. ಬಿಜೆಪಿ ಹಾಗೂ ಮೋದಿ ಸರ್ಕಾರದ ಬೆಂಬಲವಿರುವ ದೊಡ್ಡ ವ್ಯಾಪಾರಿಗಳ ಕೂಟ ಬಡವರ ಅಕ್ಕಿಯನ್ನು ಕಸಿಯಲು ಮುಂದಾಗಿದೆಯೇ?
6. ಕರ್ನಾಟಕ ರಾಜ್ಯದ ಸಂಸದರು, ಕೇಂದ್ರದ ಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಕಂಡು ಮೌನವಾಗಿರುವುದೇಕೆ? ಇಷ್ಟಾದರೂ ಅವರು ಸಂಸದ ಹಾಗೂ ಸಚಿವ ಸ್ಥಾನದಲ್ಲಿ ಒಂದು ದಿನ ಮುಂದುವರಿಯಲು ಯೋಗ್ಯರೇ? ರಾಜ್ಯದ ಆರೂವರೆ ಕೋಟಿ ಜನರಿಗೆ ದ್ರೋಹ ಬಗೆದಿರುವ ಅವರು ಕೂಡಲೇ ಯಾಕೆ ರಾಜೀನಾಮೆ ನೀಡಬಾರದು?
7. ರಾಜ್ಯ ಬಿಜೆಪಿ ನಾಯಕರು ಬಡವರು, ಎಸ್ ಸಿ, ಎಸ್ ಟಿ, ಒಬಿಸಿ ಬಡ ಕುಟುಂಬಗಳಿಗೆ ಅಕ್ಕಿ ನಿರಾಕರಿಸಿರುವ ವಿಚಾರದಲ್ಲಿ ಬಾಯಿಗೆ ಬೀಗ ಹಾಕಿಕೊಂಡಿರುವುದು ಏಕೆ? ಅವರ ಮೌನದ ಮೂಲಕ ಮೋದಿ ಸರ್ಕಾರ ಎಫ್‌ಸಿಐ ಗೆ ಅಕ್ಕಿ ನೀಡದಂತೆ ನಿರ್ದೇಶನ ನೀಡಲು ಒತ್ತಡ ಏರಿದ್ದು ಇವರೇ ಎಂದು ಸಾಬೀತುಪಡಿಸುತ್ತಿದೆಯೆ?
8. ಮೋದಿ ಸರ್ಕಾರದ ಕರ್ನಾಟಕ ಹಾಗೂ ಬಡವರ ವಿರೋಧಿ ನೀತಿ ಬಗ್ಗೆ ಬಿಜೆಪಿಯ ಬಿ ಟೀಮ್ ಆಗಿರುವ ಜೆಡಿಎಸ್ ಯಾಕೆ ಮೌನವಾಗಿದೆ?
ಬಿಜೆಪಿ ಸರ್ಕಾರ ಎಷ್ಟೇ ಅಡ್ಡಿಪಡಿಸಿದರೂ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿ ಮಾಡಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಬಡ ಕುಟುಂಬಗಳ ವಿರೋಧಿ ನೀತಿ ಹಾಗೂ ದ್ವೇಷವನ್ನು ಕನ್ನಡಿಗರು ಕ್ಷಮಿಸುವುದಿಲ್ಲ ಎಂದು ಸುರ್ಜೇವಾಲ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Guarantee scheme: ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.