ETV Bharat / state

ಆಡಳಿತ ಪಕ್ಷ, ಪ್ರತಿಪಕ್ಷ ಎಂಬುದನ್ನು ಲೆಕ್ಕಿಸದೇ ಸಿಡಿಯ ಅಸಲಿ ಸತ್ಯ ಹೊರತರಬೇಕು: ಜೆಡಿಎಸ್ ಆಗ್ರಹ - the truth must come out

ಸಿಡಿ ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು ಎಂದು ಟ್ವೀಟ್​ನಲ್ಲಿ ಜೆಡಿಎಸ್ ಒತ್ತಾಯಿಸಿದೆ.

ಜೆಡಿಎಸ್ ಆಗ್ರಹ
ಜೆಡಿಎಸ್ ಆಗ್ರಹ
author img

By

Published : Mar 27, 2021, 4:30 PM IST

ಬೆಂಗಳೂರು: ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌ ಶಿವಕುಮಾರ್ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ 'ಹನಿಟ್ರ್ಯಾಪ್‌' ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಪ್ರಾದೇಶಿಕ ಪಕ್ಷ ಜೆಡಿಎಸ್ ದೂರಿದೆ.

ರಾತ್ರಿ ಒಂದು ಆಡಿಯೋ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೋ ಬಿಡುಗಡೆಯಾಗುವುದು. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತದೆ ಎಂದಿದೆ.

  • ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.
    4/5

    — Janata Dal Secular (@JanataDal_S) March 27, 2021 " class="align-text-top noRightClick twitterSection" data=" ">

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು ಎಂದು ಟ್ವೀಟ್​ನಲ್ಲಿ ಜೆಡಿಎಸ್ ಆಗ್ರಹಿಸಿದೆ.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ಪ್ರತಿಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ ಎಂದು ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.