ETV Bharat / state

ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಪ್ರಕ್ರಿಯೆ ಆರಂಭ: ಷರತ್ತುಗಳು ಅನ್ವಯ - yuvanidhi Scheme

ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಗೆ ಡಿ.21ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ.

Etv Bharat
Etv Bharat
author img

By ETV Bharat Karnataka Team

Published : Dec 12, 2023, 10:49 PM IST

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ 'ಯುವನಿಧಿ'ಗೆ ಇದೇ ಡಿಸೆಂಬರ್ 21ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ‌ ಸಂಬಂಧ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಎಕ್ಸ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದಿದ್ದಾರೆ.‌ ಈ ಸಂಬಂಧ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಯೋಜನೆಯ ಷರತ್ತು ಮತ್ತು ನಿಬಂಧನೆಗಳೇನು?:

  • ಈ ಯೋಜನೆಯು ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಅನ್ವಯವಾಗುತ್ತದೆ.
  • ಈ ಸೌಲಭ್ಯ ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.
  • ಈ ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
  • ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಾಗದೇ ಇರುವವರು ಯಾರು?:

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸುವ ಯುವಜನರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.
  • ಅಪ್ರೈಂಟೈಸ್ ವೇತನ ಪಡೆಯುತ್ತಿರುವವರಿಗೆ ಅನ್ವಯವಾಗುವುದಿಲ್ಲ
  • ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರಿಗೆ ಅನ್ವಯಿಸುವುದಿಲ್ಲ.
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕುಗಳಿಂದ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುತ್ತಿರುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ.

ರಾಜ್ಯ ಸರ್ಕಾರವು ತನ್ನ ಪಂಚಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ, ಮತ್ತು ಶಕ್ತಿಯೋಜನೆಯನ್ನು ಜಾರಿಗೊಳಿಸಿದೆ.

ಇದನ್ನೂ ಓದಿ : ಹಳೆ ವಾಹನಗಳ ನಂಬರ್ ಪ್ಲೇಟ್ ಬದಲಾಯಿಸಲು 2024 ಫೆಬ್ರವರಿವರೆಗೆ ಅವಕಾಶ: ಸಚಿವ ರಾಮಲಿಂಗಾ ರೆಡ್ಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.