ಬೆಂಗಳೂರು: ಖಾಸಗಿ ಸುದ್ದಿ ವಾಹಿನಿಗಳ ಕಾರ್ಯಕ್ರಮಗಳ ಮೇಲೆ ನಿಯಂತ್ರಣ ಸಂಬಂಧ ಆರು ತಿಂಗಳಲ್ಲಿ ಜಿಲ್ಲಾ ಕೇಂದ್ರ ಮತ್ತು ರಾಜ್ಯದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಇತರೆ ವಾಹಿನಿಗಳ ಕಾರ್ಯಕ್ರಮಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈವರೆಗೆ ಮೇಲ್ವಿಚಾರಣಾ ಸಮಿತಿ ರಚಿಸಿಲ್ಲ. ಕೇಂದ್ರ ಸರ್ಕಾರದ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾಯ್ದೆ-1995ರ ಅನುಸಾರ ಜಿಲ್ಲಾ ಕೇಂದ್ರ ಮತ್ತು ರಾಜ್ಯದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ಮೇಲ್ವಿಚಾರಣಾ ಸಮಿತಿ ರಚಿಸಿ ಆರು ತಿಂಗಳಿನಲ್ಲಿ ಮಾಹಿತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.