ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4ಕ್ಕೆ ಏರಿದೆ. ಇನ್ನು ಸೋಂಕಿತರಿಗೆ ಯಲಹಂಕ ಬಳಿಯ ಬಿಎಸ್ಎಫ್ ಕ್ಯಾಂಪಸ್ನಲ್ಲಿ 300 ಹಾಸಿಗೆಯುಳ್ಳ ಪುನರ್ವಸತಿ ಕೇಂದ್ರ ನಿರ್ಮಿಸಲಾಗಿದೆ.
ಯಲಹಂಕ ಬಳಿ ಇರುವ ಬಿಎಸ್ಎಫ್ ಕ್ಯಾಂಪಸ್ನ ಒಂದೇ ಕಟ್ಟಡದಲ್ಲಿ 6 ಜವಾನ್ ಬ್ಯಾರೇಜ್ ನಿರ್ಮಿಸಲಾಗಿದ್ದು, ಪುನರ್ವಸತಿ ಕೇಂದ್ರದಲ್ಲಿನ ಒಂದು ಬ್ಯಾರೇಜ್ನಲ್ಲಿ 4 ಶೌಚಾಲಯ, ಅಡುಗೆ ಕೋಣೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ.
ಸಿಎಂ ಜಂಟಿ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಜಂಟಿ ಆಯುಕ್ತ ಎಂ.ಕೆ.ಶ್ರೀರಂಗಯ್ಯ ಅಧ್ಯಕ್ಷತೆಯಲ್ಲಿ ಪುನರ್ವಸತಿ ಕೇಂದ್ರದ ನಿರ್ವಹಣೆ ಹಾಗೂ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೆಂ. ನಗರ ಜಿಲ್ಲಾಧಿಕಾರಿ ಶಿವಮೂರ್ತಿ, ಯಲಹಂಕ ತಹಶಿಲ್ದಾರ್ ಎನ್.ರಘುಮೂರ್ತಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪ್ರತಿ ವಾರ್ಡ್ಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.
ಇನ್ನು ಪುನರ್ವಸತಿ ಕೇಂದ್ರಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯಗಳನ್ನು ರಾಜ್ಯ ಸರ್ಕಾರವೇ ಕಲ್ಪಿಸಲಿದ್ದು, ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿ ಕೊರೊನಾ ಪೀಡಿತರ ಆರೈಕೆ ಮಾಡುವ 500 ಜನ ಸಿಬ್ಬಂದಿಗೆ ರೋಗ ನಿರೋಧಕ ಜಾಕೆಟ್ ನೀಡಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.