ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸೆಪ್ಟೆಂಬರ್ 11ರಂದು ಒಕ್ಕಲಿಗರ ಸಂಘ ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗರ ಸಂಘದ ಪದಾಧಿಕಾರಿ ಮಲ್ಲಯ್ಯ, ವಿನಾಕರಣ ಒಕ್ಕಲಿಗರ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಒಕ್ಕಲಿಗ ಜನಾಂಗದ ನಾಯಕರನ್ನು ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸೆಪ್ಟೆಂಬರ್ 11 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ನಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದರು.