ETV Bharat / state

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಪ್ರಶ್ನೋತ್ತರ ವೇಳೆ ಕಾಂಗ್ರೆಸ್‍ ಸದಸ್ಯ ವಿ. ಮುನಿಯಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಸ್​. ಈಶ್ವರಪ್ಪ ನಾವು ಯಾವ ಕ್ಷೇತ್ರವನ್ನೂ ಕಡೆಗಣಿಸಿಲ್ಲ. 224 ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಿದ್ದೇವೆ. ಯಾವ ಕ್ಷೇತ್ರಗಳಿಗೂ ತಾರತಮ್ಯ ಮಾಡಿಲ್ಲ. ಸದಸ್ಯರ ಈ ಆರೋಪವನ್ನು ನಾನು ಒಪ್ಪುವುದಿಲ್ಲ ಎಂದಿದ್ದಾರೆ.

Minister K.S. Ishwarappa
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ
author img

By

Published : Feb 3, 2021, 5:40 PM IST

Updated : Feb 3, 2021, 7:50 PM IST

ಬೆಂಗಳೂರು: ಯಾವುದೇ ಕ್ಷೇತ್ರಗಳಿಗೂ ತಾರತಮ್ಯ ಮಾಡದೇ, ಪ್ರತಿ ಕ್ಷೇತ್ರಗಳಿಗೂ ಸಮಾನವಾಗಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಪ್ರಶ್ನೋತ್ತರ ವೇಳೆ ಕಾಂಗ್ರೆಸ್‍ ಸದಸ್ಯ ವಿ. ಮುನಿಯಪ್ಪ ಅವರು ನಮ್ಮ ಕ್ಷೇತ್ರಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡದೇ ತಾರತಮ್ಯ ಮಾಡುತ್ತಿದೆ. ಸರ್ಕಾರ ಎಂದ ಮೇಲೆ ಎಲ್ಲ ಕ್ಷೇತ್ರಗಳನ್ನು ಸಮಾನಾಗಿ ಕಾಣಬೇಕು. ಹೀಗಾದರೆ ಇದೇ ಸರಿಯೇ ಎಂದು ಪ್ರಶ್ನಿಸಿದರು. ಸದಸ್ಯರ ಈ ಆರೋಪವನ್ನು ಅಲ್ಲಗೆಳೆದ ಈಶ್ವರಪ್ಪನವರು, ನಾವು ಯಾವ ಕ್ಷೇತ್ರವನ್ನೂ ಕಡೆಗಣಿಸಿಲ್ಲ. 224 ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಿದ್ದೇವೆ. ಯಾವ ಕ್ಷೇತ್ರಗಳಿಗೂ ತಾರತಮ್ಯ ಮಾಡಿಲ್ಲ. ಸದಸ್ಯರ ಈ ಆರೋಪವನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ

ಕೋವಿಡ್ ಕಾರಣದಿಂದ ಕೆಲವು ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲದಿರಬಹುದು. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಕ್ಕೆ ಕಳೆದ 3 ವರ್ಷಗಳ ಅವಧಿಯಲ್ಲಿ 1715.74 ಲಕ್ಷ ಮೊತ್ತಕ್ಕೆ ಮಂಜೂರಾತಿ ನೀಡಿದ್ದೇವೆ. ಈವರೆಗೂ 894.05 ಲಕ್ಷ ರೂ.ಗಳನ್ನು ಬಿಡಗುಡೆ ಮಾಡಿದೆ ಎಂದು ಮಾಹಿತಿ ನೀಡಿದರು.

ಬೇಸರ ವ್ಯಕ್ತಪಡಿಸಿದ ಬಿಜೆಪಿ ಶಾಸಕ: ಭಾರೀ ಪ್ರವಾಹದಿಂದಾಗಿ ದುರಸ್ತಿಯಾಗಿರುವ ರಸ್ತೆಗಳನ್ನು ರಿಪೇರಿ ಮಾಡದ ಕಾರಣ ಕ್ಷೇತ್ರದಲ್ಲಿ ಜನರಿಗೆ ಮುಖ ತೋರಿಸಲು ಆಗದಂತಹ ಪರಿಸ್ಥಿತಿ ಬಂದಿದೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ವಿಧಾನಸಭಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಕಳೆದ ವರ್ಷ ನಮ್ಮ ಕ್ಷೇತ್ರದಲ್ಲಿ ಭಾರೀ ಪ್ರವಾಹ ಉಂಟಾದ ಪರಿಣಾಮ ಕ್ಷೇತ್ರದ ಇಡೀ ರಸ್ತೆಗಳು ಹಾಳಾಗಿಹೋಗಿವೆ. ನಾವು ಕ್ಷೇತ್ರಕ್ಕೆ ಹೋದರೆ ಯಾವಾಗ ರಸ್ತೆ ರಿಪೇರಿಯಾಗುತ್ತದೆ ಎಂದು ಕೇಳುತ್ತಾರೆ. ನಮಗೆ ಉತ್ತರ ಕೊಟ್ಟು ಕೊಟ್ಟು ಸಾಕಾಗಿದೆ. ಕ್ಷೇತ್ರದಲ್ಲಿ ಜನರಿಗೆ ಮುಖ ತೋರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಓದಿ: ಜಾಮೀನಿನ ಮೇಲೆ ಹೊರಗಿರುವ ಯಡಿಯೂರಪ್ಪ ಸಿಎಂ ಹುದ್ದೆಯಲ್ಲಿ ಮುಂದುವರೆಯುವುದು ಸರಿಯೇ: ಸಿದ್ದರಾಮಯ್ಯ ಪ್ರಶ್ನೆ

ಕಳೆದ ವರ್ಷ ಎನ್‍ಡಿಆರ್​​ಎಫ್​​​​ ಅಡಿ 1.89 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. ಆದರೆ, ಈವರೆಗೂ ಆ ಹಣ ಬಂದಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿ ವರ್ಷ ಪ್ರವಾಹ ಬರುವುದರಿಂದ ಮೂಡಿಗೆರೆಯನ್ನು ಶಾಶ್ವತ ಪ್ರವಾಹ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು. ಇದರಿಂದ ನಮ್ಮ ಕ್ಷೇತ್ರಕ್ಕೆ ಅನುದಾನ ಸಿಗುತ್ತದೆ ಎಂದು ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಸಾಗರ ಶಾಸಕ ಹರತಾಳು ಹಾಲಪ್ಪ, ನನ್ನ ಕ್ಷೇತ್ರದಲ್ಲೂ ಕೂಡ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹ ಬಂದು ಅನೇಕ ಕಡೆ ರಸ್ತೆಗಳು, ಕಟ್ಟಡಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಕುಸಿದುಬಿದ್ದಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, 105 ವರ್ಷಗಳ ಇತಿಹಾಸದಲ್ಲಿ ಎಂದೂ ಬಾರದ ಪ್ರವಾಹ ಉಂಟಾಗಿ ಆರ್ಥಿಕ ಪರಿಸ್ಥಿತಿ ಅಯೋಮಯವಾಗಿದೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಆದಷ್ಟು ಬೇಗ ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದರು.

Last Updated : Feb 3, 2021, 7:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.