ಬೆಂಗಳೂರು: ಲಾಕ್‌ಡೌನ್ ನಿಂದ ರಾಜ್ಯಾದ್ಯಂತ ಮಸೀದಿಗಳು ಬಾಗಿಲು ಮುಚ್ಚಿದ್ದವು. ಜೂನ್ 8 ರ ಬಳಿಕ ಮಸೀದಿಗಳ ಬಾಗಿಲು ತೆರೆಯಲಿದ್ದು, ರಾಜ್ಯ ಅಲ್ಪಸಂಖ್ಯಾತರ ಆಯೋಗ ಮುಂಜಾಗ್ರತಾ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.
ಮಸೀದಿ ಆಡಳಿತ ಮಂಡಳಿ, ದರ್ಗಾ, ಸಾಮಾಜಿಕ ಕಾರ್ಯಕರ್ತರು, ಧರ್ಮ ಗುರುಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ ಮಸೀದಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಮಾರ್ಗಸೂಚಿಯಲ್ಲಿ ಏನಿದೆ?
- ಮುಸ್ಲಿಂ ಬಾಂಧವರು ಸಾಧ್ಯವಾದಷ್ಟು ಮನೆಗಳಲ್ಲೇ ಕೈ-ಕಾಲು ಶುಚಿಗೊಳಿಸಿ ಮಸೀದಿಗೆ ಬರಬೇಕು
- ಮಸೀದಿಗಳಲ್ಲಿ ಕೈ-ಕಾಲು ಶುಚಿಗೊಳಿಸುವ ಕೊಳವನ್ನು ಮುಚ್ಚಬೇಕು
- ಅದರ ಬದಲು ಟ್ಯಾಪ್ ಬಳಸಬೇಕು
- ಮಸೀದಿಗಳಲ್ಲಿ ಒಂದೇ ಆಗಮನ, ನಿರ್ಗಮನ ದ್ವಾರ ಇರಬೇಕು
- ಪ್ರತಿ ಪ್ರಾರ್ಥನೆ ಮುನ್ನ ಹಾಲ್ ಅನ್ನು ಶುಚಿಗೊಳಿಸಬೇಕು
- ಮಸೀದಿಗೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು
- ಪ್ರಾರ್ಥನೆ ವೇಳೆ 1-2 ಮೀಟರ್ ಅಂತರ ಕಾಯಬೇಕು
- ಪ್ರತಿ ವ್ಯಕ್ತಿ ತನ್ನ ಸ್ವಂತ ಪ್ರಾರ್ಥನಾ ಚಾಪೆಯನ್ನು ತರಬೇಕು
- ಫರ್ಜ್ ನಮಾಜ್ನ್ನು 10-15 ನಿಮಿಷಕ್ಕೆ ಸೀಮಿತಗೊಳಿಸಬೇಕು
- ನಮಾಜ್ ಮಾಡಲು ಅತಿ ಹೆಚ್ಚು ಜನರಿದ್ದರೆ, ಎರಡು ಜಮಾತ್ ಗೆ ವ್ಯವಸ್ಥೆ ಕಲ್ಪಿಸಬೇಕು
- ಸುನ್ನತ್ ಮತ್ತು ನಫೀಸ್ ಪ್ರಾರ್ಥನೆಯನ್ನು ಮನೆಯಲ್ಲೇ ಮಾಡಬೇಕು
- ಶುಕ್ರವಾರದ ಪ್ರಾರ್ಥನೆ 15-20 ನಿಮಿಷಕ್ಕೆ ಸೀಮಿತವಾಗಿರಬೇಕು
- ಮಸೀದಿ, ದರ್ಗಾಗಳ ಬಳಿ ಭಿಕ್ಷಾಟನೆಗೆ ನಿಷೇಧ
- ಮಸೀದಿ ಬಳಿ ಪ್ರಸಾದ ಹಂಚುವುದಕ್ಕೆ ನಿರ್ಬಂಧ
- ದರ್ಗಾದಲ್ಲಿನ ಸಮಾಧಿಗಳಲ್ಲಿ ಕೂತು ಪ್ರಾರ್ಥನೆ ಮಾಡಬಾರದು
- ಆಲಿಂಗನ, ಹಸ್ತ ಲಾಘವಕ್ಕೆ ನಿರ್ಬಂಧ