ಬೆಂಗಳೂರು: ದೇಶದ ಅಖಂಡತೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ ಮತ್ತು “ಕರ್ನಾಟಕದ ಕೇಸರಿ” ಎಂದೇ ಪ್ರಖ್ಯಾತರಾಗಿದ್ದ ಭಾರತೀಯ ಜನಸಂಘದ ಸಂಸ್ಥಾಪಕ ಸದಸ್ಯ ಜಗನ್ನಾಥರಾವ್ ಜೋಷಿ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಈ ಇಬ್ಬರು ಗಣ್ಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ದೇಶಕ್ಕೆ ಹಾಗು ಪಕ್ಷಕ್ಕೆ ಮುಖರ್ಜಿ ಹಾಗು ಜೋಷಿ ಕೊಡುಗೆಯನ್ನು ಮುಖಂಡರು ಸ್ಮರಿಸಿದರು.
ಇಂದಿನಿಂದ ಜುಲೈ 6ರವರೆ ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸಿ ಮುಖರ್ಜಿ ಅವರ ಚಿಂತನೆಗಳು, ಜೀವನಸ್ಪೂರ್ತಿ ಬಗ್ಗೆ ವಿಡಿಯೋ ಸಂವಾದದ ಮೂಲಕ ವಿಚಾರ ಸಂಕಿರಣಗಳನ್ನು ನಡೆಸಿ ಅರ್ಥಪೂರ್ಣವಾಗಿ ಇಬ್ಭರ ನಾಯಕರ ಸ್ಮರಣೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಯ್ಯದ್ ಸಲಾಂ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.