ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಆಶಾ ಕಾರ್ಯಕರ್ತೆಯರಿಗೆ ಸಂಭಾವನೆ ಬಿಡುಗಡೆ ಮಾಡಲಾಗಿದೆ.
ಪರೀಕ್ಷಾ ಸುರಕ್ಷತಾ ದೃಷ್ಟಿಯಿಂದ ರಾಜ್ಯದ ಎಲ್ಲಾ 2,879 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಹೆಚ್ಚುವರಿಯಾಗಿ ರಚಿಸಿರುವ 3,30 ಉಪಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷರ ಬ್ಯಾಂಕ್ ಉಳಿತಾಯ ಖಾತೆಗೆ ನೆಪ್ಟ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ.
ಪ್ರತಿ ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಇಬ್ಬರು ಹಾಗೂ ಉಪ ಪರೀಕ್ಷಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಿದ್ದ ಒಬ್ಬ ಆಶಾ ಕಾರ್ಯಕರ್ತೆಯರಿಗೆ, ಒಬ್ಬರಿಗೆ ದಿನಕ್ಕೆ 100 ರೂಪಾಯಿಯಂತೆ ಒಟ್ಟು 6 ದಿನಕ್ಕೆ 600 ರೂಪಾಯಿ ನೀಡುವಂತೆ ಸೂಚಿಸಲಾಗಿದೆ.
ಇದಕ್ಕಾಗಿ ಈಗಾಗಲೇ ಮುಖ್ಯ ಪರೀಕ್ಷಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಒಟ್ಟು, 34,54,800 ರೂಪಾಯಿ, ಉಪಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ 1,98,000 ರೂ. ಎಲ್ಲಾ ಸೇರಿ ಒಟ್ಟು 36,52,800 ರೂ ಬಿಡುಗಡೆ ಮಾಡಲಾಗಿದೆ.