ETV Bharat / state

ಮಿನಿಸ್ಟರ್ ಅಂದ್ರೆ ದೇವಲೋಕದಿಂದ ಇಳಿದು ಬಂದವರಾ?: ಸ್ವಪಕ್ಷದವರ ವಿರುದ್ಧ ರೇಣುಕಾಚಾರ್ಯ ಕಿಡಿ - BJP Party Ministers

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಲವು ಸಚಿವರು ಕೈಗೇನೇ ಸಿಗಲ್ಲ. ಅವರ ಪಿ.ಎ ಗಳು, ಪಿ.ಎಸ್ ಗಳು ಫೋನೇ ರಿಸೀವ್ ಮಾಡಲ್ಲ. ಕಾಂಗ್ರೆಸ್ ಜೆಡಿಎಸ್ ನಿಂದ ಬಂದ ಎಲ್ಲ ಸಚಿವರು ಅಂತ ನಾನು ಹೇಳಲ್ಲ. ಕೆಲವರು ಮಾತ್ರ ನಮಗೆ ಕೈಗೆ ಸಿಗಲ್ಲ. ನಾನು ಹತ್ತಾರು ಬಾರಿ ಭೇಟಿ ಆಗಿದ್ದೇನೆ. ಪತ್ರ ಬರೆದಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.

Renukacharya spark against own BJP Party Ministers
ಸ್ವಪಕ್ಷದವರ ವಿರುದ್ಧ ರೇಣುಕಾಚಾರ್ಯ ಕಿಡಿ
author img

By

Published : Feb 26, 2021, 2:26 PM IST

ಬೆಂಗಳೂರು: ಮಿನಿಸ್ಟರ್ ಅಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಲವು ಸಚಿವರು ಕೈಗೇನೇ ಸಿಗಲ್ಲ. ಅವರ ಪಿ.ಎ ಗಳು, ಪಿ.ಎಸ್ ಗಳು ಫೋನೇ ರಿಸೀವ್ ಮಾಡಲ್ಲ. ಕಾಂಗ್ರೆಸ್ ಜೆಡಿಎಸ್​​ನಿಂದ ಬಂದ ಎಲ್ಲ ಸಚಿವರು ಅಂತ ನಾನು ಹೇಳಲ್ಲ. ಕೆಲವರು ಮಾತ್ರ ನಮಗೆ ಕೈಗೆ ಸಿಗಲ್ಲ. ನಾನು ಹತ್ತಾರು ಬಾರಿ ಭೇಟಿ ಆಗಿದ್ದೇನೆ. ಪತ್ರ ಬರೆದಿದ್ದೇನೆ, ಏನೂ ಪ್ರಯೋಜನ ಆಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸ್ವಪಕ್ಷದವರ ವಿರುದ್ಧ ರೇಣುಕಾಚಾರ್ಯ ಕಿಡಿ

ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜೀ ಆಗೋ ಮಾತೇ ಇಲ್ಲ. ನಾನು ಧರಣಿ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ನಿನ್ನೆ ಅವರ ಪಿ.ಎಸ್ ಫೋನ್ ಮಾಡಿದ್ರು. ಕೆಲವು ಕೆಲಸ ಆಗಿದೆ. ನನ್ನ ಕೆಲಸ ಆದ ಮಾತ್ರಕ್ಕೆ ನಾನು ಸುಮ್ಮನಿರಲ್ಲ. ಪಾಪ ಅನೇಕ ನಮ್ಮ ಶಾಸಕರು ಬಾಯಿ ಇಲ್ಲದ ಶಾಸಕರಿದ್ದಾರೆ. ಅವರ ಕೆಲಸಗಳೂ ಆಗಬೇಕು. ಐದಾರು ಸಚಿವರು ಕೈಗೆ ಸಿಗಲ್ಲ. ನಾನು ಮೂರು ಬಾರಿ ಶಾಸಕನಾಗಿ ನನ್ನ ಕ್ಷೇತ್ರದಲ್ಲಿ ಆಯ್ಕೆ ಆಗಿದ್ದೇನೆ. ನಾವೇನು ಬಿಟ್ಟಿ ಬಿದ್ದಿದ್ದೀವಾ? ಎಂದು ಅಕ್ರೋಶ ಹೊರಹಾಕಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.