ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾರೂ ಕೂಡ ಬದಲಾವಣೆಗಾಗಿ ಪ್ರಯತ್ನ ಮಾಡ್ತಿಲ್ಲ ಎಂದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಅಮಿತ್ ಶಾ ಭೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷ ಸಂಘಟನೆ, ಬಿಜೆಪಿಯನ್ನು ಅಧಿಕಾರಕ್ಕೆ ತರುವ ಪ್ರಯತ್ನಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸಿಎಂ ಬದಲಾವಣೆ ಎಲ್ಲಾ ಊಹಾಪೋಹ ಎಂದರು.
ಕ್ಯಾಬಿನೆಟ್ ರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ರಾಷ್ಟ್ರೀಯ ನಾಯಕರು ಹಾಗೂ ಸಿಎಂ ಒಟ್ಟಾಗಿ ತೀರ್ಮಾನ ಮಾಡ್ತಾರೆ. 16,17 ರಂದು ನಡೆಯುವ ಕಾರ್ಯಕಾರಿಣಿ ಸಭೆ ಬಳಿಕ ಏನು ತೀರ್ಮಾನ ಮಾಡ್ತಾರೋ ಅದು ಅವರ ಪರಮಾಧಿಕಾರ. ಕಾರ್ಯಕಾರಿಣಿ ಬಳಿಕ ಸಿಹಿ ಸುದ್ದಿ ಸಿಗಬಹುದು ಎಂದು ಹೇಳಿದರು.
ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಬಂದಿದ್ದು ಹುಸಿ ಬಾಂಬ್ ಬೆದರಿಕೆ: ಪೋಷಕರ ನಿಟ್ಟುಸಿರು