ಬೆಂಗಳೂರು: ರಾಜ್ಯದಲ್ಲಿ ಇಂದು 2,362 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,51,212ಕ್ಕೆ ಏರಿಕೆ ಆಗಿದೆ.
ಇನ್ನು ಸೋಂಕಿಗೆ 20 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 11,430ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. ಇತ್ತ 4,215 ಮಂದಿ ಡಿಸ್ಜಾರ್ಜ್ ಆಗಿದ್ದು 8,08,700 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಸದ್ಯ ಸಕ್ರಿಯ ಪ್ರಕರಣಗಳು 31,063 ಇದ್ದು, 869 ಸೋಂಕಿತರು ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 7 ದಿನಗಳಲ್ಲಿ 48,384 ಮಂದಿ ಹೋಂ ಕ್ವಾರೆಂಟೈನ್ನಲ್ಲಿ ಇದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ 2,21,977 ಮಂದಿ ದ್ವಿತೀಯ ಸಂಪರ್ಕದಲ್ಲಿ 2,31,301 ಜನರು ಸೋಂಕಿತರ ಸಂಪರ್ಕದಲ್ಲಿ ಇದ್ದಾರೆ.
ಸಿಲಿಕಾನ್ ಸಿಟಿಯಲ್ಲಿ 1176 ಕೋವಿಡ್ ಪಾಸಿಟಿವ್ ಪ್ರಕರಣ: 8 ಮಂದಿ ಬಲಿ
ನಗರದಲ್ಲಿಂದು 1176 ಮಂದಿಯಲ್ಲಿ ಕೋವಿಡ್ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ. 525 ಮಂದಿ ಇಂದು ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 35,1481 ಕ್ಕೆ ಏರಿಕೆಯಾಗಿದ್ದು, ಈವರೆಗೆ 3,30,205 ಮಂದಿ ಬಿಡುಗಡೆಯಾಗಿದ್ದಾರೆ.
17,306 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಮೃತಟ್ಟವರ ಸಂಖ್ಯೆ 3,969 ಕ್ಕೆ ಏರಿಕೆಯಾಗಿದೆ. 465 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.