ETV Bharat / state

ಸ್ಯಾಂಟ್ರೋ ರವಿ ಷಡ್ಯಂತ್ರ ಬೆಂಬಲಿಸಿದ ಆರೋಪ: ಇನ್ಸ್​ಪೆಕ್ಟರ್​ ವಿರುದ್ಧ ಐಜಿಪಿಗೆ ವರದಿ - ಈಟಿವಿ ಭಾರತ ಕನ್ನಡ

ರಾಜಕೀಯ ಕೆಸರೆರಚಾಟಕ್ಕೆ ವಸ್ತುವಾಗಿರುವ ಸ್ಯಾಂಟ್ರೋ ರವಿ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಈ ಪ್ರಕರಣದಲ್ಲೀಗ ಪೊಲೀಸ್ ಇನ್ಸ್‌ಪೆಕ್ಟರ್‌ವೋರ್ವರ ಹೆಸರು ಥಳಕು ಹಾಕಿಕೊಂಡಿದೆ.

praveen
ಇನ್ಸ್​ಪೆಕ್ಟರ್​ ಪ್ರವೀಣ್
author img

By

Published : Jan 9, 2023, 2:23 PM IST

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಯಲ್ಲಿರುವ ಸ್ಯಾಂಟ್ರೋ ರವಿಯ ಪತ್ನಿ ವಿರುದ್ಧ ಮಾಡಿರುವ ಆರೋಪ ಇದೀಗ ಪೊಲೀಸ್ ಇನ್ಸ್​ಪೆಕ್ಟರ್ ಪ್ರವೀಣ್​ಗೆ ಉರುಳಾಗುವ ಸಾಧ್ಯತೆ ಕಂಡುಬಂದಿದೆ. ರವಿಯ ಷಡ್ಯಂತ್ರದಿಂದ ಕಾಟನ್‌ಪೇಟೆ ಠಾಣೆಯಲ್ಲಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು‌ ಮೈಸೂರಿನ ವಿಜಯನಗರ ಠಾಣೆಯಲ್ಲಿ ಆತನ ಪತ್ನಿ ರಶ್ಮಿ ದೂರು ನೀಡಿದ್ದರು. ಅದರನ್ವಯ ಅಂದಿನ ಕಾಟನ್ ಪೇಟೆ ಇನ್ಸ್​ಪೆಕ್ಟರ್ ಪ್ರವೀಣ್ ವಿರುದ್ಧ ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿಗೆ ಆದೇಶಿಸಲಾಗಿತ್ತು. ಸದ್ಯ ತನಿಖೆ ಪೂರ್ಣಗೊಂಡಿದ್ದು ವರದಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಕೈ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಪ್ರಕಾಶ್ ಎಂಬವರು ನೀಡಿದ್ದ ದೂರಿನನ್ವಯ ಕಾಟನ್ ಪೇಟೆ ಠಾಣೆಯಲ್ಲಿ ನವೆಂಬರ್ 24 ರಂದು ರಶ್ಮಿ, ನಯನ ಹಾಗೂ ಶೇಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. 'ನನ್ನಿಂದ ಮೂರು ತಿಂಗಳ ಅವಧಿಗೆ ಐದು ಲಕ್ಷ ರೂಪಾಯಿ ಪಡೆದಿದ್ದ ರಶ್ಮಿ, ನವೆಂಬರ್ 23 ರಂದು ಸಂಜೆ 6 ಗಂಟೆಗೆ ಹಿಂತಿರುಗಿಸುವುದಾಗಿ ಕಾಟನ್ ಪೇಟೆಯ ಖೋಡೆ ಸರ್ಕಲ್ ಬಳಿ ಕರೆಸಿಕೊಂಡಿದ್ದರು. ಈ ವೇಳೆ ರಶ್ಮಿಯವರ ಜೊತೆಗಿದ್ದ ಶೇಕ್ ಎಂಬಾತ ನನ್ನ ಎರಡೂ ಕೈಗಳನ್ನು ಹಿಂದಿನಿಂದ ಗಟ್ಟಿಯಾಗಿ ಹಿಡಿದುಕೊಂಡಿದ್ದು, ರಶ್ಮಿ ತಮ್ಮ ಬಳಿಯಿದ್ದ ಚಾಕುವನ್ನು ಕುತ್ತಿಗೆಯ ಮೇಲಿಟ್ಟು ಬೆದರಿಸಿದ್ದಾರೆ. ಅವರ ಜೊತೆಗಿದ್ದ ನಯನ ಎಂಬಾಕೆ ಕತ್ತಿನಲ್ಲಿದ್ದ ಸುಮಾರು 13 ಗ್ರಾಂ ತೂಕದ ಚಿನ್ನದ ಚೈನ್​ ಮತ್ತು ಪ್ಯಾಂಟ್ ಜೇಬಿನಲಿದ್ದ 9 ಸಾವಿರ ರೂಪಾಯಿಗಳನ್ನು ಕಿತ್ತುಕೊಂಡು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.' ಎಂದು ಪ್ರಕಾಶ್ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಸ್ಯಾಂಟ್ರನೋ ಹುಂಡೈಯೋ.. ಯಾವ ಬ್ರಾಂಡ್​ಗಳು ಎಲ್ಲಿಲ್ಲೆವೆಯೋ ನಂಗೆ ಗೊತ್ತಿಲ್ಲ: ಸಚಿವ ಅಶ್ವತ್ಥನಾರಾಯಣ

ಈ ಬಗ್ಗೆ ತನಿಖೆ ನಡೆಸಿರುವ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ, 'ಕೃತ್ಯ ನಡೆದ ಸ್ಥಳದಲ್ಲಿ ರಶ್ಮಿ ಹಾಗೂ ನಯನ ಇರಲಿಲ್ಲ. ಆದರೆ ಇರುವಂತೆ ಸಾಬೀತುಪಡಿಸಲು ಸ್ಯಾಂಟ್ರೋ ರವಿಯೇ ತನ್ನ ಕೆಲಸಗಾರ ಶೇಕ್ ಜೊತೆಯಲ್ಲಿ ರಶ್ಮಿ ಹಾಗೂ ನಯನಾಳ ಮೊಬೈಲ್ ಕೊಟ್ಟು ಕಳುಹಿಸಿದ್ದ. ಸೂಕ್ತ ತನಿಖೆ ನಡೆಸದೇ ಕಾಟನ್ ಪೇಟೆ ಇನ್ಸ್​ಪೆಕ್ಟರ್ ಪ್ರವೀಣ್ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ' ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ಗೆ ವರದಿ ನೀಡಿದ್ದಾರೆ. ಪ್ರಕರಣದಲ್ಲಿ ಸ್ಯಾಂಟ್ರೋ ರವಿಯ ಷಡ್ಯಂತ್ರದ ಜೊತೆಗೆ ಇನ್ಸ್​ಪೆಕ್ಟರ್​ ಪ್ರವೀಣ್​ರ ಕರ್ತವ್ಯ ಲೋಪ ಎದ್ದು ಕಾಣುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿಯಲ್ಲಿ ತಿಳಿಸಲಾಗಿದೆ.

ರಾಜಕೀಯದಲ್ಲಿ ಅಲೆ ಎಬ್ಬಿಸಿದ ಸ್ಯಾಂಟ್ರೋ ರವಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸ್ಯಾಂಟ್ರೋ ರವಿಯದ್ದೇ ಹೆಚ್ಚು ಸುದ್ದಿಯಾಗುತ್ತಿದ್ದು, ರಾಜಕೀಯದಲ್ಲಿ ಅಲೆ ಎಬ್ಬಿಸಿದ್ದಾನೆ. ಯುವತಿಯೊಬ್ಬಳಿಗೆ ಕೆಲಸ ನೀಡುವ ಭರವಸೆ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಬಲವಂತವಾಗಿ ವಿವಾಹವಾಗಿ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವತಃ ಸಂತ್ರಸ್ತೆಯೇ ಆತನ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ವಿಷಯವಾಗಿ ಎಚ್​ಡಿ ಕುಮಾರಸ್ವಾಮಿ, 'ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರಿಗೆ ಸಂಬಂಧವಿದೆ' ಎಂಬ ಹೇಳಿಕೆಯನ್ನು ನೀಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿದೆ. ಸ್ಯಾಂಟ್ರೋ ರವಿ ಬಂಧನದ ಬಳಿಕವಷ್ಟೇ ಈ ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ಸಿಗಲಿದೆ.

ಇದನ್ನೂ ಓದಿ: ಸ್ಯಾಂಟ್ರೋ ರವಿ ಮೇಲಿನ ಆರೋಪಕ್ಕೆ ಹೆಚ್​ಡಿಕೆ ಪೂರಕ ಸಾಕ್ಷ್ಯ ನೀಡಲಿ: ಬ್ರಿಜೇಶ್‌ ಕಾಳಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.