ಬೆಂಗಳೂರು: ಸಂಸದ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ ಸಮಾಜದ ಮುಖಂಡರು, ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕಕ್ಕೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಮನವಿ ಸಲ್ಲಿಸಿದರು.
ಭೋವಿ ಸಂಘದಿಂದ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ್ದೇವೆ. ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನ ಆಯ್ಕೆ ಮಾಡುವಂತೆ ಮನವಿ ಸಲ್ಲಿಸಿದ್ದೇವೆ ಎಂದು ರಾಷ್ಟ್ರೀಯ ಅಧ್ಯಕ್ಷ ಬಿ.ಎಂ.ಜಗನ್ನಾಥ್, ರಾಷ್ಟ್ರೀಯ ಉಪಾಧ್ಯಕ್ಷ ಒಬಡೆನಹಳ್ಳಿ ಕೆ. ಮುನಿಯಪ್ಪ ಮಾಹಿತಿ ನೀಡಿದರು.
ಸಚಿವ ಅರವಿಂದ ಲಿಂಬಾವಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈವರೆಗೂ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ. ಲಿಂಬಾವಳಿ ವಿರುದ್ಧ ಸಮುದಾಯದವರ ಅಸಮಾಧಾನವಿದೆ. ಸರ್ಕಾರ ಶೀಘ್ರದಲ್ಲೇ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಬೇಕು. ಇಲ್ಲದೇ ಹೋದಲ್ಲಿ ಲಿಂಬಾವಳಿ ಮನೆ ಮುಂದೆ ಧರಣಿ ಮಾಡಲು ಮುಂದಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.
ಮನವಿ ಪತ್ರದ ವಿವರ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ನೇಮಕ ಮಾಡಿ ನಮ್ಮ ಸಮುದಾಯವು ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲ ವರ್ಗವಾಗಿದೆ. ಆದ್ದರಿಂದ ಹಿಂದಿನ ಬಿಜೆಪಿ ಸರ್ಕಾರವು ಪ್ರಸ್ತುತ ಮುಖ್ಯಮಂತ್ರಿ ಬಿಎಸ್ವೈ ನಾಯಕತ್ವದದಲ್ಲಿ 2010ರಲ್ಲಿ ರಾಜ್ಯದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಯಿತು. 2008ರಲ್ಲಿ 3 ಸ್ವತಂತ್ರ ಶಾಸಕರು ಬೇಷರತ್ತಾದ ಬೆಂಬಲ ನೀಡಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರವನ್ನು ರಚಿಸಲು ಸಹಾಯ ಮಾಡಿದೆ.
ರಾಜ್ಯದಲ್ಲಿ ಎಸ್‌ಸಿ/ಎಸ್‌ಟಿ/ಒಬಿಸಿ/ಬ್ರಾಹ್ಮಣ/ ಅಲ್ಪಸಂಖ್ಯಾತರಂತಹ ಎಲ್ಲಾ ಸಮುದಾಯಗಳು ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವನ್ನು ಹೊರತುಪಡಿಸಿ ಲಿಂಗಾಯತ ಸಮುದಾಯ ಕಲ್ಯಾಣ ಮಂಡಳಿಗಳು ಹೊಂದಿವೆ. ಹಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡದ ಕಾರಣ ನಾವು ತುಂಬಾ ನಿರಾಶೆಗೊಂಡಿದ್ದೇವೆ. ನಮ್ಮ ಸಮುದಾಯವನ್ನು ಕತ್ತಲೆಯಲ್ಲಿ ಇರಿಸಲಾಗುತ್ತಿದೆ ಎಂದು ಪತ್ರದಲ್ಲಿ ದೂರಿದ್ದಾರೆ.