ETV Bharat / state

ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರದ ಸುಪರ್ದಿಗೆ ನೀಡುವಂತೆ ಕೇಂದ್ರದ ಬಳಿ ಕೋರಿಕೆ: ವಿ.ಸೋಮಣ್ಣ - ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಸೋಮಣ್ಣ

ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರದ ಸುಪರ್ದಿಗೆ ನೀಡುವಂತೆ ಕೇಂದ್ರಕ್ಕೆ ಕೋರಲಾಗಿದೆ. ಪ್ರಮುಖ ಜಲಾಶಯಗಳ ಮೇಲೆ ಕಿರು ವಿಮಾನ ನಿಲ್ದಾಣ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸಚಿವ ವಿ.ಸೋಮಣ್ಣ
ಸಚಿವ ವಿ.ಸೋಮಣ್ಣ
author img

By

Published : Jul 13, 2022, 5:56 PM IST

ಬೆಂಗಳೂರು: ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಂದ್ರವನ್ನು ರಾಜ್ಯ ಸರ್ಕಾರ ಕೋರಿದೆ. ಇದರ ಜೊತೆಗೆ ಕೆ.ಆರ್.ಎಸ್, ಆಲಮಟ್ಟಿ, ತುಂಗಭದ್ರಾ ಸೇರಿದಂತೆ ಪ್ರಮುಖ ಜಲಾಶಯಗಳ ಮೇಲೆ ಕಿರು ವಿಮಾನ ನಿಲ್ದಾಣಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ವಸತಿ ಮತ್ತು ಮೂಲಸೌಕರ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಭೂಮಿ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನೀಡುವವರು ನಾವು. ಆದರೆ ಹೀಗೆ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಿ ವಿಮಾನಯಾನ ಪ್ರಾಧಿಕಾರಕ್ಕೆ ನೀಡುತ್ತಿದ್ದೇವೆ. ವಿಮಾನ ನಿಲ್ದಾಣಗಳನ್ನು ವಿಮಾನ ಯಾನ ಪ್ರಾಧಿಕಾರ ಹೊಸತಾಗಿ ಮಾಡುವುದೇನಿಲ್ಲ.

ವಿಮಾನ ನಿಲ್ದಾಣಗಳ ಸುಪರ್ದಿಗೆ ಕೋರಿಕೆ: ವಿಮಾನಗಳ ಹಾರಾಟದ ವೇಳಾಪಟ್ಟಿ ಮಾಡುವುದು ಸೇರಿದಂತೆ ಕೆಲ ತಾಂತ್ರಿಕ ವಿಷಯಗಳನ್ನು ಹೊರತಪಡಿಸಿದರೆ ಹೆಚ್ಚು ಜವಾಬ್ದಾರಿ ಅವರಿಗೆ ಇರುವುದಿಲ್ಲ. ಆದರೆ ವಿಮಾನ ನಿಲ್ದಾಣ ಸ್ಥಾಪನೆಗೆ ಎಲ್ಲ ಸವಲತ್ತುಗಳನ್ನು ನೀಡುವವರು ನಾವು. ಹೀಗಾಗಿ ಇನ್ನು ಮುಂದೆ ರಾಜ್ಯದ ವಿಮಾನ ನಿಲ್ದಾಣಗಳನ್ನು ತಮಗೆ ವಹಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಸದ್ಯದ ನಿರ್ಧಾರ ಏನು?: ದೇಶದಲ್ಲಿ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಹೆಚ್ಚು ಬಂಡವಾಳ ಹೂಡುತ್ತಿರುವ ನಂಬರ್ ಒನ್ ರಾಜ್ಯ ಕರ್ನಾಟಕ. ನಮ್ಮಂತೆ ದೇಶದ ಬೇರೆ ಯಾವ ರಾಜ್ಯಗಳೂ ವಿಮಾನ ನಿಲ್ದಾಣಕ್ಕೆ ಬಂಡವಾಳ ಹೂಡುವುದಿಲ್ಲ. ಇವತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿನಿತ್ಯ 90 ಸಾವಿರ ಮಂದಿ ಪ್ರಯಾಣ ಮಾಡುತ್ತಾರೆ. ಅಂದರೆ ವರ್ಷಕ್ಕೆ ಸರಾಸರಿ ಮೂರು ಕೋಟಿ ಜನ ವಿಮಾನದಲ್ಲಿ ಪ್ರಯಾಣಿಸುತ್ತಾರೆ. ಇದೇ ರೀತಿ ರಾಜ್ಯದಲ್ಲಿರುವ ಉಳಿದ ವಿಮಾನ ನಿಲ್ದಾಣಗಳಲ್ಲಿ ದಿನವೊಂದಕ್ಕೆ ಸರಾಸರಿ ಎರಡು ಸಾವಿರ ಜನ ಪ್ರಯಾಣಿಸುತ್ತಾರೆ. ಒಂದು ಕಂಪನಿಯನ್ನು ಸ್ಥಾಪಿಸಿ ಎಲ್ಲ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರವೇ ವಹಿಸಿಕೊಳ್ಳುವುದು ಸದ್ಯದ ನಿರ್ಧಾರ ಎಂದರು.

ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ದದಿಂದ ಪಠ್ಯ ಪುಸ್ತಕದ ಹಂಚಿಕೆಯಲ್ಲಿ ಸಮಸ್ಯೆಯಾಗಿದೆ: ಶಿಕ್ಷಣ ಸಚಿವ ನಾಗೇಶ್

ರಾಜ್ಯದಲ್ಲಿ ಸದ್ಯಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿದ್ದು, ಮೈಸೂರು ಹಾಗೂ ವಿಜಯಪುರದ ವಿಮಾನ ನಿಲ್ದಾಣಗಳನ್ನು ಶೀಘ್ರದಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಿಂದ ಈಗ ದಿನವೊಂದಕ್ಕೆ ಏಳು ವಿಮಾನಗಳು ಹಾರಾಟ ನಡೆಸುತ್ತಿದ್ದು, ಹೆಚ್ಚುವರಿಯಾಗಿ ಮೂರು ವಿಮಾನಗಳ ಹಾರಾಟ ಆರಂಭವಾಗಲಿದೆ.

ಕಿರುವಿಮಾನ ನಿಲ್ದಾಣಗಳ ಸ್ಥಾಪನೆ: ಇದೇ ರೀತಿ ಬೀದರ್, ಕಲಬುರಗಿ ಸೇರಿದಂತೆ ಕೆಲ ವಿಮಾನ ನಿಲ್ದಾಣಗಳಲ್ಲಿ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದೆ. ಶಿವಮೊಗ್ಗ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳು ವರ್ಷಾಂತ್ಯದೊಳಗೆ ಕಾರ್ಯಾರಂಭ ಮಾಡಲಿವೆ ಎಂದು ಸ್ಪಷ್ಟಪಡಿಸಿದರು. ಪ್ರವಾಸೋದ್ಯಮಕ್ಕೆ, ಆ ಮೂಲಕ ರಾಜ್ಯದ ಆರ್ಥಿಕತೆಗೆ ಶಕ್ತಿ ತುಂಬಲು ಕೆ.ಆರ್.ಎಸ್, ಆಲಮಟ್ಟಿ, ತುಂಗಭದ್ರಾ, ಲಿಂಗನಮಕ್ಕಿ, ಕಾಳಿ, ಹಿಡ್ಕಲ್, ಮಲ್ಪೆ, ಮಂಗಳೂರು ಸೇರಿದಂತೆ ಪ್ರಮುಖ ಜಲಾಶಯಗಳ ಮೇಲೆ ನೌಕಾನೆಲೆಗಳ ಮಾದರಿಯಲ್ಲಿ ಕಿರುವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಹೆಲಿಪೋರ್ಟ್​ಗಳ ಸ್ಥಾಪನೆ: ತಲಾ 10 ಕೋಟಿ ರೂ.ಗಳ ವೆಚ್ಚದಲ್ಲಿ ಇಂತಹ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುವುದು ಎಂದ ಅವರು, ಮಲ್ಪೆ, ಚಿಕ್ಕಮಗಳೂರು, ಹಂಪಿ ಸೇರಿದಂತೆ ಹಲ ಪ್ರವಾಸೋದ್ಯಮ ಕೇಂದ್ರಗಳಲ್ಲಿ ಮತ್ತು ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಕಿರು ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುವುದು. ಕುಶಾಲನಗರ, ಹರಿಹರ ಸೇರಿದಂತೆ ಹಲವು ಕಡೆ ಹೆಲಿಪೋರ್ಟ್​ಗಳನ್ನು ಸ್ಥಾಪಿಸಲಾಗುವುದು. ಏರ್ ಆ್ಯಂಬುಲೆನ್ಸ್ ಸ್ಥಾಪಿಸಲು ಮೂರು ಕಂಪನಿಗಳು ಮುಂದೆ ಬಂದಿವೆ ಎಂದು ಹೇಳಿದರು.

ಜಲಾಶಯ, ಯಾತ್ರಾ ಸ್ಥಳ ಮತ್ತು ಪ್ರವಾಸೋದ್ಯಮ ಕೇಂದ್ರಗಳಲ್ಲಿ ಸ್ಥಾಪಿಸುವ ಇಂತಹ ವಿಮಾನ ನಿಲ್ದಾಣಗಳಿಗೆ ತಲಾ ಹತ್ತು ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಜಲಾಶಯದಲ್ಲಿ ಪಿಲ್ಲರ್ ಗಳನ್ನು ಎಬ್ಬಿಸಿ ಅದರ ಮೇಲೆ ಕಿರು ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.