ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಲಬುರಗಿ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಗೆ, ಕಲಬುರಗಿಯ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ನಿಯೋಗ ಭೇಟಿ ನೀಡಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಮಾತುಕತೆ ನಡೆಸಿದರು.
ಈ ವೇಳೆ, ವೀರಶೈವ ಲಿಂಗಾಯತ ಸಮುದಾಯದ ಸಮಗ್ರ ಏಳಿಗೆಗಾಗಿ ವೀರಶೈವ - ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎನ್ನುವ ಒತ್ತಾಯವನ್ನು ಮಾಡಲಾಯಿತು. ನಿಯೋಗದ ಮನವಿಗೆ ಮುಖ್ಯಮಂತ್ರಿಗಳು ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.