ಬೆಂಗಳೂರು: ವಿಪ್ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ತಂಡ ಸ್ಪೀಕರ್ಗೆ ಮನವಿ ಮಾಡಿದೆ.
ಸೋಮವಾರ ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಕೆಪಿಸಿಸಿ ಮುಖ್ಯಸ್ಥ ಗುಂಡೂರಾವ್, ಕೃಷ್ಣ ಭೈರೇಗೌಡ ಐವಾನ್ ಡಿಸೋಜಾ, ಸಿಎಲ್ಪಿ ಕಾರ್ಯದರ್ಶಿ ಪಿ ಆರ್ ರಮೇಶ್ ಅವರು ಸ್ಪೀಕರ್ ರಮೇಶ್ ಕುಮಾರ್ಗೆ ಮನವಿ ನೀಡಿದರು.
ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ರಮೇಶ್ ಜಾರಕಿಹೊಳಿ, ನಾಗೇಂದ್ರ, ಉಮೇಶ್ ಜಾದವ್ ಮಹೇಶ್ ಕುಮುಟಳ್ಳಿ ಅವರನ್ನು ಅನರ್ಹಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.