ETV Bharat / state

ಪ್ರತ್ಯೇಕ ಸ್ಮಶಾನ ಭೂಮಿ ನೀಡುವಂತೆ ಗ್ರಾಮಗಳಿಂದ ಮನವಿ ಬಂದಿದೆ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ - High Court

ಸ್ಮಶಾನ ಜಾಗವಿಲ್ಲದ ಗ್ರಾಮಗಳ ಅಗತ್ಯ ಜಮೀನು ಕೋರುವಂತೆ ತಿಳಿಸಿ ಈ ಹಿಂದೆ ಸರ್ಕಾರ ಸಾರ್ವಜನಿಕ ಪ್ರಕಟಣೆ ನೀಡಲಾಗಿತ್ತು. ಅದರ ಪರಿಣಾಮ ಕೆಲ ಸ್ಥಳೀಯ ನಿವಾಸಿಗಳು ಸ್ಮಶಾನಕ್ಕೆ ಹೆಚ್ಚುವರಿ ಜಮೀನು ಒದಗಿಸುವಂತೆ ಕೋರಿದ್ದಾರೆ.

High Court
ಹೈಕೋರ್ಟ್
author img

By

Published : Jun 8, 2023, 10:47 PM IST

ಬೆಂಗಳೂರು: ರಾಜ್ಯದಲ್ಲಿ ಸ್ಮಶಾನ ಭೂಮಿ ಒದಗಿಸುವ ಸಂಬಂಧ ಹಲವು ಗ್ರಾಮಗಳಲ್ಲಿ ಹೆಚ್ಚುವರಿ ಸ್ಮಶಾನ ಭೂಮಿ ಮತ್ತು ತಮ್ಮ ತಮ್ಮ ಧರ್ಮಗಳಿಗೆ ಪ್ರತ್ಯೇಕ ಸ್ಮಶಾನ ಭೂಮಿ ಒದಗಿಸುವಂತೆ ಅರ್ಜಿಗಳು ಬಂದಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿದ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸಲ್ಲಿಸಿದ ಪ್ರಮಾಣ ಪತ್ರ ಸಲ್ಲಿಸಿದರು.

ಸ್ಮಶಾನ ಜಾಗವಿಲ್ಲದ ಗ್ರಾಮಗಳ ಅಗತ್ಯ ಜಮೀನು ಕೋರುವಂತೆ ತಿಳಿಸಿ ಈ ಹಿಂದೆ ಸರ್ಕಾರ ಸಾರ್ವಜನಿಕ ಪ್ರಕಟಣೆ ನೀಡಲಾಗಿತ್ತು. ಅದರ ಪರಿಣಾಮ ಕೆಲ ಸ್ಥಳೀಯ ನಿವಾಸಿಗಳು ಸ್ಮಶಾನಕ್ಕೆ ಹೆಚ್ಚುವರಿ ಜಮೀನು ಒದಗಿಸುವಂತೆ ಕೋರಿದ್ದಾರೆ. ಮತ್ತಷ್ಟು ಜನರು ತಮ್ಮ ಧರ್ಮದವರಿಗೆ ಪ್ರತ್ಯೇಕ ಸ್ಮಶಾನ ಸೌಲಭ್ಯ ಒದಗಿಸುವಂತೆ ತಿಳಿಸಿದ್ದಾರೆ. ಅವರ ಮನವಿಗಳನ್ನು ಕಾನೂನು ಪ್ರಕಾರ ಪರಿಶೀಲನೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

೨೮೨೭೬ ಗ್ರಾಮಗಳಿಗೆ ಸ್ಮಶಾನ ಭೂಮಿ: ರಾಜ್ಯದಲ್ಲಿ ಒಟ್ಟು ೩೦,೭೮೧ ಗ್ರಾಮಗಳಿವೆ. ಅವುಗಳಲ್ಲಿ ೨,೫೦೦ ಬೇಚರಕ್ (ಜನವಸತಿ ಇಲ್ಲದ) ಗ್ರಾಮಗಳಿವೆ. ಜನವಸತಿ ೨೮,೨೮೧ ಗ್ರಾಮಗಳನ್ನು ಗುರುತಿಸಲಾಗಿದೆ. ಅದರಲ್ಲಿ ಒಟ್ಟು ೨೮,೨೭೬ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ. ಉಳಿದಂತೆ ೫ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಬೇಕಿದೆ. ಉಡುಪಿಯಲ್ಲಿ ಎರಡು ಮತ್ತು ರಾಯಚೂರಿನಲ್ಲಿ ಮೂರು ಗ್ರಾಮಗಳಲ್ಲಿ ಸ್ಮಶಾನ ಭೂಮಿಗಾಗಿ ಖಾಸಗಿಯವರ ಭೂಮಿ ಗುರುತಿಸಲಾಗಿದೆ. ಸರ್ಕಾರಿ ಜಮೀನು ಲಭ್ಯವಿಲ್ಲದಿರುವುದೇ ಇದಕ್ಕೆ ಕಾರಣ. ರಾಜ್ಯದ ಒಟ್ಟಾರೆ ಗ್ರಾಮಗಳಲ್ಲಿ ಶೇ.೯೯.೮ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ ಎಂದು ಸರ್ಕಾರ ವಿವರಿಸಿದೆ.

ಅಲ್ಲದೆ, ಒತ್ತುವರಿ ಸೇರಿದಂತೆ ಭವಿಷ್ಯದಲ್ಲಿ ಉದ್ಭವಿಸುವ ಇತರೆ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಸ್ಮಶಾನ ಭೂಮಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಆ ಸಂಬಂಧ ಕಂದಾಯ ದಾಖಲೆಗಳ ನೋಂದಣಿ ಕಾರ್ಯಕ್ಕೂ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ೧೬ ಜಿಲ್ಲೆಗಳ ೬೦೬ ಗ್ರಾಮಗಳ ಜಮೀನನ್ನು ಶೀಘ್ರವೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದು ಹೈಕೋರ್ಟ್‌ಗೆ ಸರ್ಕಾರ ಭರವಸೆ ನೀಡಿದೆ.

ಜೂ.೨೨ಕ್ಕೆ ವಿಚಾರಣೆ ಮುಂದೂಡಿಕೆ: ಅದನ್ನು ತೀವ್ರವಾಗಿ ಆಕ್ಷೇಪಿಸಿದ ಅರ್ಜಿದಾರರಾದ ವಕೀಲ ಮೊಹಮ್ಮದ್ ಇಕ್ಬಾಲ್ ಅವರು, ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಿರುವ ವಿಚಾರದಲ್ಲಿ ಸರ್ಕಾರ ಈ ಹಿಂದೆ ತಿಳಿಸಿದ ಅಂಕಿ-ಅಂಗಳಿಗೂ, ಸದ್ಯ ಹೇಳುತ್ತಿರುವ ಅಂಕಿ-ಅಂಶಗಳ ನಡುವೆ ಸಾಕಷ್ಟು ವತ್ಯಾಸವಿದೆ. ಅನೇಕ ಗ್ರಾಮಗಳಲ್ಲಿ ಸ್ಮಶಾನ ಜಾಗ ಜಮೀನು ಮಂಜೂರು ಮಾಡಿದರೂ ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ನೀಡಿಲ್ಲ. ಬೇಚರಕ್ ಗ್ರಾಮಗಳ ಅಂಕಿ ಅಂಶದಲ್ಲೂ ವ್ಯಾತ್ಯಾಸವಿದೆ ಎಂದು ತಿಳಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಸರ್ಕಾರ ಮತ್ತು ಅರ್ಜಿದಾರ ನೀಡಿರುವ ಮಾಹಿತಿ ತಾಳೆಯಾಗುತ್ತಿಲ್ಲ. ನ್ಯಾಯಾಲಯವು ವಾಸ್ತವ ಅಂಶ ತಿಳಿಯಬೇಕಿದ್ದು, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಜೂ.೨೨ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: 10 ಸಾವಿರ ವರ್ಷದ ಹಳೆಯ ತ್ರಿಶೂಲ, 3 ಸಾವಿರ ವರ್ಷದ ವಜ್ರಾಯುಧ ಪತ್ತೆ: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅನಾವರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.