ಬೆಂಗಳೂರು: ಶೇಕಡಾ 7.5 ರಷ್ಟು ಮೀಸಲಾತಿ ಕೊಡಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ.
ವಿಧಾನಸೌಧಕ್ಕೆ ಕಾಲ್ನಡಿಗೆ ಮೂಲಕ ಆಗಮಿಸಿದ್ದ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು, ಮೀಸಲಾತಿ ವಿಚಾರವಾಗಿ ಸಿಎಂಗೆ ಮನವಿ ಸಲ್ಲಿಸಲು ಕೇಂದ್ರ ಹಣಕಾಸು ಆಯೋಗದ ಸಭೆ ನಡೆಯುತ್ತಿರುವ ಖಾಸಗಿ ಹೋಟೆಲ್ಗೆ ಆಗಮಿಸಿದ್ದು, ತಮ್ಮ ಮನವಿಯನ್ನು ಸಿಎಂಗೆ ಸಲ್ಲಿಸಲಿದ್ದಾರೆ.
ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸಚಿವ ತುಕಾರಾಂ, ಶಾಸಕರಾದ ಕಂಪ್ಲಿ ಗಣೇಶ್, ನಾಗೇಂದ್ರ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು, ತಮ್ಮ ಮನವಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಲ್ಲಿಸಲಿದ್ದಾರೆ.