ETV Bharat / state

ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆಯಾಗುವುದು ಶ್ಲಾಘನೀಯ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ - ನರೇಂದ್ರ ಮೋದಿ ಅವರಿಗೆ ಬರೆದಿದ್ದ ಪತ್ರ

ನೂತನ ಸಂಸತ್​ ಭವನದಲ್ಲಿ ನಡೆಯುವ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆ ಶ್ಲಾಘನೀಯ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಹೇಳಿದ್ದಾರೆ.

reservation-for-women-bill-is-commendable-says-former-prime-minister-hd-deve-gowda
ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆಯಾಗುವುದು ಶ್ಲಾಘನೀಯ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
author img

By ETV Bharat Karnataka Team

Published : Sep 19, 2023, 3:14 PM IST

ಬೆಂಗಳೂರು : ನೂತನ ಸಂಸತ್​ ಭವನದಲ್ಲಿ ನಡೆಯುವ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆಯಾಗಿರುವುದು ಶ್ಲಾಘನೀಯ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಹೇಳಿದ್ದಾರೆ. ಮಹಿಳಾ ಮೀಸಲಾತಿ ವಿಧೇಯಕವನ್ನು ಲೋಕಸಭೆಯಲ್ಲಿ ಮರು ಮಂಡಿಸಲು ಪರಿಗಣಿಸುವಂತೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿದ್ದ ಪತ್ರವನ್ನು ಎಕ್ಸ್​​ನಲ್ಲಿ ಪೋಸ್ಟ್ ಮಾಡಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ 1996ರಲ್ಲೇ ಮಹಿಳಾ ಮೀಸಲು ವಿಧೇಯಕ ಮಂಡನೆ ಮಾಡುವುದಕ್ಕೆ ಪ್ರಸ್ತಾಪಿಸಿದ್ದನ್ನು ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗವು ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯನ್ನು ಘೋಷಿಸಿ ರಾಜ್ಯದಲ್ಲಿ ಅರ್ಹ ಮಹಿಳಾ ಮತದಾರರ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಒಟ್ಟು ಮತದಾರರಲ್ಲಿ ಸುಮಾರು ಶೇ. 50ರಷ್ಟು ಮಹಿಳಾ ಮತದಾರರಿದ್ದರೆ ಆಶ್ಚರ್ಯವೇನಿಲ್ಲ. ಭಾರತದ ಇತರ ರಾಜ್ಯಗಳಲ್ಲಿನ ಅಂಕಿ-ಅಂಶಗಳು ಇದಕ್ಕಿಂತ ಭಿನ್ನವಾಗಿಲ್ಲ. ಇದು ಶಾಸಕಾಂಗ ಸಭೆಗಳು ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿಯ ಕಲ್ಪನೆಯನ್ನು ಮರು ಪರಿಶೀಲಿಸುವಂತೆ ಮಾಡಿದೆ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿತ್ತು.

ನಾನು 1996ರಲ್ಲಿ ಪ್ರಧಾನ ಮಂತ್ರಿಯಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿಗೆ ತಂದಿದ್ದರೂ ವಿಧೇಯಕ ಅಂಗೀಕಾರ ಪಡೆಯಲು ಯಶಸ್ವಿಯಾಗಿರಲಿಲ್ಲ. ನಾನು 1995ರಲ್ಲಿ ಪ್ರಧಾನ ಮಂತ್ರಿ ಪಿ ವಿ ನರಸಿಂಹರಾವ್ ಅವರಿಗೆ ಮುಖ್ಯಮಂತ್ರಿಯಾಗಿಯೂ ಮಹಿಳಾ ಮೀಸಲಾತಿಗೆ ಒತ್ತಾಯಿಸಿದ್ದೆ. ನಂತರ 2008ರಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಮಾಡಿದ ಪ್ರಯತ್ನಗಳು ಸಫಲವಾಗಲಿಲ್ಲ ಎಂದಿದ್ದಾರೆ.

ಎರಡೂ ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದಾಗ, ಸರ್ಕಾರಗಳು ಬಹುಮತವನ್ನು ಹೊಂದಿರಲಿಲ್ಲ. ಅಲ್ಲದೆ, ತಮ್ಮ ಸಮ್ಮಿಶ್ರ ಪಾಲುದಾರರ ಮೇಲೆ ಅವಲಂಬಿತವಾಗಿದ್ದವು. ನೀವು ಸಂಸತ್ತಿನಲ್ಲಿ ಬಹುಮತವನ್ನು ಹೊಂದಲು ಅದೃಷ್ಟವಂತರು ಮತ್ತು ಅದನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಗಬಹುದು ಎಂದು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ದೇವೇಗೌಡರು ತಿಳಿಸಿದ್ದರು.

2024ರಲ್ಲಿ ಲೋಕಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಪ್ರಧಾನಿ ಅವರನ್ನು ಒತ್ತಾಯಿಸಿದ್ದರು. 1996 ಮತ್ತು 2008ರಲ್ಲಿ ಮಂಡಿಸಲಾದ ಮಸೂದೆಯ ಕರಡುಗಳಿಗೆ ಸೂಕ್ತವಾದ ಮಾರ್ಪಾಡುಗಳನ್ನು ಮಾಡಬಹುದು. ಸಾಮಾಜಿಕ ನ್ಯಾಯದ ತತ್ವಗಳಿಗೆ ಬದ್ಧವಾಗಿರುವುದು ಲಿಂಗ ಸಮಾನ ನ್ಯಾಯಕ್ಕಾಗಿ ಈ ಮಹತ್ತರವಾದ ವಿಧೇಯಕದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಶಾಸನ ಸಭೆಗಳು ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಯನ್ನು ನೀಡುವ ಈ ಮಸೂದೆಯನ್ನು ತರುವುದು ಮತ್ತು ಅದನ್ನು ಅಂಗೀಕರಿಸುವುದು ಸಾಂಕೇತಿಕ ಸೂಚಕವಾಗಿದೆ. ನಾವು ಹೊಸ ಮತ್ತು ಅತ್ಯಂತ ಆಧುನಿಕ ಸಂಸತ್ತಿನ ಕಟ್ಟಡದಲ್ಲಿ ನಡೆಯುವ ಅವೇಶನದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಈ ಮೀಸಲಾತಿಗೆ ಅರ್ಹರು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಂಡಿಸಿದೆ.

ಇದನ್ನೂ ಓದಿ :ಮಹಿಳಾ ಮೀಸಲಾತಿ ಮಸೂದೆ 'ಅಪ್ನಾ ಹೈ': ಸೋನಿಯಾ ಗಾಂಧಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.