ETV Bharat / state

ಏಪ್ರಿಲ್ 1ರ ವೇಳೆಗೆ ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟ : ಹೈಕೋರ್ಟ್‌ಗೆ ಸರ್ಕಾರದ ಭರವಸೆ

author img

By

Published : Mar 2, 2023, 1:34 PM IST

Updated : Mar 2, 2023, 6:45 PM IST

ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಶೀಘ್ರದಲ್ಲೇ ಮೀಸಲಾತಿ ಪಟ್ಟಿ ಪ್ರಕಟಣೆ ಮಾಡುವುದಾಗಿ ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

reservation-for-zp-elections-announced-soon-govt-informs-to-high-court
ಏಪ್ರಿಲ್ 1ರ ವೇಳೆಗೆ ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟ : ಹೈಕೋರ್ಟ್‌ಗೆ ಸರ್ಕಾರದ ಭರವಸೆ

ಬೆಂಗಳೂರು : ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಕುರಿತು ಏಪ್ರಿಲ್ 1ರ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು 'ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ'ಗೆ ಸರ್ಕಾರ ತಿದ್ದುಪಡಿ ತಂದಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಮಾಹಿತಿ ನೀಡಿದರು. ಅಲ್ಲದೆ, ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್ 1ರಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಜೊತೆಗೆ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 1ರವರೆಗೆ ಕಾಲಾವಕಾಶ ನೀಡಿದೆ. ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಿ, ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿತು.

ಬುಧವಾರ (ನಿನ್ನೆ) ನಡೆದಿದ್ದ ವಿಚಾರಣೆ ವೇಳೆ ಸರ್ಕಾರದ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಜ್ 1ರಂದು ಅಧಿಸೂಚನೆ ಹೊರಡಿಸಿರುವುದಾಗಿ ಸರ್ಕಾರ ಮಾಹಿತಿ ನೀಡಿತ್ತು. ಅಲ್ಲದೆ. ಈ ಹಿಂದೆ ನಡೆದ ವಿಚಾರಣೆ ವೇಳಗೆ ನಿಗದಿತ ಸಮಯಕ್ಕೆ ಚುನಾವಣೆ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ 5 ಲಕ್ಷ ದಂಡ ವಿಧಿಸಿತ್ತು. ಈ ಮೊತ್ತವನ್ನು ಪಾವತಿಸಿರುವುದಾಗಿ ನ್ಯಾಯಪೀಠಕ್ಕೆ ವಿವರಿಸಿದರು. ಅಲ್ಲದೆ, ಅರ್ಜಿದಾರರ ಪರ ಹಾಜರಿದ್ದ ವಕೀಲರು, ಹಿರಿಯ ವಕೀಲ ಕೆ.ಎನ್. ಫಣೀಂದ್ರ ಮತ್ತೊಂದು ನ್ಯಾಯಪೀಠದ ಮುಂದೆ ವಾದ ಮಂಡಿಸುತ್ತಿದ್ದ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಇಂದಿಗೆ (ಫೆ.2ಕ್ಕೆ) ಮುಂದೂಡಿತ್ತು.

ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧ: ಫೆಬ್ರವರಿ 14ರಂದು ನಡೆದಿದ್ದ ವಿಚಾರಣೆ ವೇಳೆ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಕ್ಷೇತ್ರ ಪುನರ್ ವಿಂಗಡಣೆ ಕುರಿತಂತೆ ಸರ್ಕಾರ ಸಮಿತಿ ರಚನೆ ಮಾಡಿದ್ದು, ಈ ಸಮಿತಿ 2022ರ ಜನವರಿ 30ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯ ಆಧಾರದಲ್ಲಿ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧವಿದೆ. ಮುಂದಿನ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಅಲ್ಲದೆ, ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳು ಮತ್ತು ಎಸ್​ಸಿ - ಎಸ್​​ಟಿ ಜನಾಂಗಕ್ಕೆ ಮೀಸಲಾತಿ ನೀಡುವ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಈ ಸಮಿತಿ ಏಪ್ರಿಲ್ 1ರಂದು ಮೀಸಲಾತಿ ಪಟ್ಟಿ ಸಲ್ಲಿಸಲಿದೆ. ಈ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಜೊತೆಗೆ, ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ ಸ್ವೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಈ ವೇಳೆಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿ ಅಧಿಸೂಚನೆ ಹೊರಡಿಸುವುದಾಗಿ ನ್ಯಾಯಪೀಠಕ್ಕೆ ಅಡ್ವೋಕೇಟ್ ಜನರಲ್ ವಿವರಿಸಿದ್ದರು.

ಇದನ್ನೂ ಓದಿ: ಚೀನಾ ಕಂಪನಿಯೊಂದಿಗೆ ಒಪ್ಪಂದ ಆರೋಪ: ಮೆ.ಇಂಡಿಟ್ರೇಡ್ ಫಿನ್‌ಕಾರ್ಪ್ ಅರ್ಜಿ ವಜಾ

Last Updated : Mar 2, 2023, 6:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.