ETV Bharat / state

ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ ಶೇ.40 ರಿಂದ 50 ಕ್ಕೆ ಮೀಸಲಾತಿ ಹೆಚ್ಚಳ : ಕೃಷಿ ಸಚಿವ ಬಿ.ಸಿ.ಪಾಟೀಲ್ - ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಮೀಸಲಾತಿ ಹೆಚ್ಚಳ ಸುದ್ದಿ

ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ . 40 ರಿಂದ ಶೇ.50 ಕ್ಕೆ ಹೆಚ್ಚಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ್ದು, ಕೃಷಿ ಸಚಿವ ಬಿ. ಸಿ. ಪಾಟೀಲ್​ ಸಿಎಂ ಬಿ.ಎಸ್​​. ಯಡಿಯೂರಪ್ಪಗೆ ಧನ್ಯವಾದ ತಿಳಿಸಿದ್ದಾರೆ.

patil
patil
author img

By

Published : Jun 22, 2021, 3:59 PM IST

ಬೆಂಗಳೂರು : 2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ . 40 ರಿಂದ ಶೇ.50 ಕ್ಕೆ ಏರಿಸಲು ಸಂಪುಟ ಸಭೆ ಅಸ್ತು ಎಂದಿದ್ದು, ಈ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್​ ಸಂತಸ ವ್ಯಕ್ತಪಡಿಸಿದ್ದಾರೆ.

2014 ರಲ್ಲಿ ಬಿ.ಎಸ್ಸಿ ( ಎಜಿ )ಯಲ್ಲಿ ಮತ್ತು ಸಮಾನ ಪದವಿಗಳ ಪ್ರವೇಶಕ್ಕಾಗಿ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಾತಿಯನ್ನು ಶೇ. 40ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಇನ್ನಷ್ಟು ಮೀಸಲಾತಿ ಹೆಚ್ಚಿಸಿದಲ್ಲಿ ಕೃಷಿ ಪದವೀಧರರು ಗ್ರಾಮೀಣ ಭಾಗದಲ್ಲಿ ಸ್ವಯಂ ಉದ್ಯಮದಾರರಾಗಿ ಕೃಷಿಯಲ್ಲಿ ಯಶಸ್ವಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುತ್ತಾರೆ.

ಈ ಮೂಲಕ ಗ್ರಾಮೀಣ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದಿಮೆದಾರರಾಗುತ್ತಾರೆ ಎಂಬುದನ್ನು ಮನಗಂಡು ಸಚಿವ ಬಿ.ಸಿ. ಪಾಟೀಲ್​ ಮೀಸಲಾತಿಯನ್ನು ಶೇ. 10 ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿದ್ದರು. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯಗಳ ಜೊತೆಯೂ ಚರ್ಚಿಸಿದರು. ಕೆಲವು ದಿನಗಳ ಹಿಂದೆ ಸಚಿವ ಬಿ.ಸಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿಯ ಸಭೆ‌ ನಡೆಸಲಾಗಿತ್ತು.

ಸಭೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಸುದೀರ್ಘ ಹಾಗೂ ಸಮಗ್ರ ಚರ್ಚೆ ನಡೆಸಿದ್ದರು‌. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಿಟ್ಟಿರುವ ಸೀಟುಗಳ ಪ್ರಮಾಣವನ್ನು ಶೇ. 40 ರಿಂದ ಶೇ. 50 ರವರೆಗೆ ಹೆಚ್ಚಿಸಲು ನಿರ್ಧರಿಸಲಾಯಿತು. ಅಂತೆಯೇ ಬಿ.ಸಿ.ಪಾಟೀಲ್ ಅವರ ರೈತರ ಅಭಿವೃದ್ಧಿಯ ಉದ್ದೇಶಿತ ಪ್ರಸ್ತಾವವನ್ನು ಸಚಿವ ಸಂಪುಟದ ಸಭೆಯ ಮುಂದೆ ಇಟ್ಟಿದ್ದು, ನಿನ್ನೆ ಸಚಿವ ಸಂಪುಟ ಇದಕ್ಕೆ ಅಸ್ತು ಎಂದಿದೆ.

ಸಭೆ ಅಸ್ತು ಎಂದ ಹಿನ್ನೆಲೆ ರೈತರ ಅಭಿವೃದ್ಧಿಗೆ ಸಹಕರಿಸುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಧನ್ಯವಾದ ಅರ್ಪಿಸಿದ್ದಾರೆ. ಕೃಷಿ ಪದವಿ ವ್ಯಾಸಂಗ ಮಾಡಿದ ನಂತರ ರೈತರ ಮಕ್ಕಳು ಕೃಷಿ ವೈಜ್ಞಾನಿಕ ಪತಿ ಕೃಷಿ ಚಟುವಟಿಕೆಯನ್ನು ಮಾಡುವುದರ ಜೊತೆಗೆ ಹಲವು ವರ್ಗದ/ ಕ್ಷೇತ್ರದ ವಿಷಯಗಳಾದ ಅಗ್ರಾನಮಿ , ಮಣ್ಣು ವಿಜ್ಞಾನ ಪಾಂಟ್ ಜೆನೆಟಿಕ್ಸ್ ಹಾಗೂ ಇತರ ವಿಷಯಗಳ ಜ್ಞಾನ ಹೊಂದಿರುವುದರಿಂದ ತಂತ್ರಜ್ಞಾನವನ್ನು ಸಹ ಅಳವಡಿಸಿಕೊಳ್ಳುವ‌ ಜೊತೆಗೆ ಹಲವು ಕ್ಷೇತ್ರಗಳಲ್ಲಿಯೂ ಸಹ ಈ ವಿದ್ಯಾರ್ಥಿಗಳಿಗೆ ವೃತ್ತಿಯ ಆಯ್ಕೆಯ ಅವಕಾಶ ಹೆಚ್ಚಾಗಿರುತ್ತದೆ.

ಕೃಷಿ ಪದವೀಧರರು ಗ್ರಾಮೀಣ ಭಾಗದಲ್ಲಿ ಸ್ವಯಂ ಉದ್ದಿಮೆದಾರರಾಗಿ ಕೃಷಿಯಲ್ಲಿ ಯಶಸ್ಸಿ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ , ಗ್ರಾಮೀಣ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದಿಮೆದಾರರಾಗಲು ಕಲ್ಪಿಸಿದಂತಾಗುತ್ತದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.