ETV Bharat / state

ನಿಗಮ ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲು : ಸರ್ಕಾರಕ್ಕೆ ಕಡೆಯ ಅವಕಾಶ ನೀಡಿದ ಹೈಕೋರ್ಟ್ - ಸರ್ಕಾರಕ್ಕೆ ಕಡೆಯ ಅವಕಾಶ ನೀಡಿದ ಹೈಕೋರ್ಟ್

ವಾದ ಪರಿಗಣಿಸಿದ ಪೀಠ, 2021ರ ಆ.18ರಂದು ನ್ಯಾಯಾಲಯ ಹೊರಡಿಸಿರುವ ನಿರ್ದೇಶನವನ್ನು ಪಾಲಿಸಲು ರಾಜ್ಯ ಸರ್ಕಾರಕ್ಕೆ ಕೊನೆಯದಾಗಿ ನಾಲ್ಕು ವಾರ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿತು..

ಹೈಕೋರ್ಟ್
ಹೈಕೋರ್ಟ್
author img

By

Published : Sep 22, 2021, 7:48 PM IST

ಬೆಂಗಳೂರು : ಸರ್ಕಾರದ ಪ್ರಾಧಿಕಾರಗಳು ಹಾಗೂ ನಿಗಮ ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಅಗತ್ಯ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯದಾಗಿ 4 ವಾರ ಕಾಲಾವಕಾಶ ನೀಡಿದೆ.

ಈ ಕುರಿತು ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲಾ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಪ್ರಕಟಿಸಿದೆ.

ಸರ್ಕಾರದ ಈ ತಿದ್ದುಪಡಿ ನಿಯಮ ಕೇವಲ ಸರ್ಕಾರಿ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸರ್ಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕೆಂಬುದು ನಮ್ಮ ಮನವಿ.

ಈ ನಿಟ್ಟಿನಲ್ಲಿ ಸರ್ಕಾರಿ ಪ್ರಾಧಿಕಾರ, ನಿಗಮ-ಮಂಡಳಿಗಳಿಗೆ ಸಲಹೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಆ.18ರಂದು ನಿರ್ದೇಶಿಸಿತ್ತು. ಆದರೆ, ಆದೇಶ ಪಾಲನೆಯಾಗಿಲ್ಲ ಎಂದು ಪೀಠದ ಗಮನಕ್ಕೆ ತಂದರು.

ವಾದ ಪರಿಗಣಿಸಿದ ಪೀಠ, 2021ರ ಆ.18ರಂದು ನ್ಯಾಯಾಲಯ ಹೊರಡಿಸಿರುವ ನಿರ್ದೇಶನವನ್ನು ಪಾಲಿಸಲು ರಾಜ್ಯ ಸರ್ಕಾರಕ್ಕೆ ಕೊನೆಯದಾಗಿ ನಾಲ್ಕು ವಾರ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.