ETV Bharat / state

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಎಫ್‌ಐಆರ್ ರದ್ದು ಕೋರಿದ ಕಂಪ್ಲಿ ಗಣೇಶ್

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಬಿಡದಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಪಡಿಸುವಂತೆ ಕೋರಿ ಕಂಪ್ಲಿ ಶಾಸಕ ಗಣೇಶ್ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕಂಪ್ಲಿ ಗಣೇಶ್
Comply Ganesh
author img

By

Published : Jan 16, 2020, 11:09 PM IST

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಬಿಡದಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಪಡಿಸುವಂತೆ ಕೋರಿ ಕಂಪ್ಲಿ ಶಾಸಕ ಗಣೇಶ್ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ದೂರುದಾರ ಆನಂದ್ ಸಿಂಗ್ ಆರೋಪಿಸಿರುವಂತೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿಲ್ಲ. ಕೊಲೆ ಯತ್ನವೂ ನಡೆದಿಲ್ಲ. ಗಲಾಟೆ ಸಂದರ್ಭದಲ್ಲಿ ಆತ್ಮರಕ್ಷಣೆಗಷ್ಟೇ ಯತ್ನಿಸಿದ್ದೇನೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪೊಲೀಸರ ಬಳಿ ಯಾವುದೇ ಸಾಕ್ಷಾಧಾರಗಳಿಲ್ಲ. ಆದ್ದರಿಂದ ಬಿಡದಿ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ಈ ಸಂಬಂಧ ಅಧೀನ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದು ಪಡಿಸಬೇಕೆಂದು ಗಣೇಶ್ ಮನವಿ ಮಾಡಿದ್ದಾರೆ.

ಈಗಲ್‌ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದ ಬಿಡದಿ ಪೊಲೀಸರು, ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Intro:Body:
ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ : ಎಫ್‌ಐಆರ್ ರದ್ದು ಕೋರಿದ ಕಂಪ್ಲಿ ಗಣೇಶ್
ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಬಿಡದಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕಂಪ್ಲಿ ಶಾಸಕ ಗಣೇಶ್ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.
ದೂರುದಾರ ಆನಂದ್ ಸಿಂಗ್ ಆರೋಪಿಸಿರುವಂತೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿಲ್ಲ. ಕೊಲೆ ಯತ್ನವೂ ನಡೆದಿಲ್ಲ. ಗಲಾಟೆ ಸಂದರ್ಭದಲ್ಲಿ ಆತ್ಮರಕ್ಷಣೆಗಷ್ಟೇ ಯತ್ನಿಸಿದ್ದೇನೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪೊಲೀಸರ ಬಳಿ ಯಾವುದೇ ಸಾಕ್ಷಾೃಧಾರಗಳಿಲ್ಲ. ಆದ್ದರಿಂದ, ಬಿಡದಿ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗು ಈ ಸಂಬಂಧ ಅಧೀನ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಗಣೇಶ್ ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ.
ಈಗಲ್‌ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ವಿರುದ್ದ ಪ್ರಕರಣ ದಾಖಲಿಸಿದ್ದ ಬಿಡದಿ ಪೊಲೀಸರು, ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.