ETV Bharat / state

ಪತಿ ನೀಡಿದ ರಾಜೀನಾಮೆ ಪತ್ನಿ ಹಿಂಪಡೆಯಲಾಗದು: ಹೈಕೋರ್ಟ್ - High Court on Resignation case

High Court: ಉದ್ಯೋಗಿ ರಾಜೀನಾಮೆ ಸಲ್ಲಿಸಿದ್ದರೆ, ಅದನ್ನು ವಾಪಸ್​ ಪಡೆಯುವ ಅವಕಾಶವು ಆತನ ಪತ್ನಿ ಹಾಗೂ ಮಕ್ಕಳಿಗೆ ಇಲ್ಲ. ರಾಜೀನಾಮೆ ಹಿಂಪಡೆಯುವ ಪ್ರಕಿಯೆಯು ಉದ್ಯೋಗಿಯಿಂದಲೇ ಆಗಬೇಕು ಎಂದು ಹೈಕೋರ್ಟ್​ ಹೇಳಿದೆ.

resignation-given-by-husband-cannot-be-withdrawn-by-wife-karnataka-high-court
ಪತಿ ನೀಡಿದ ರಾಜೀನಾಮೆ ಪತ್ನಿ ಹಿಂಪಡೆಯಲಾಗದು : ಹೈಕೋರ್ಟ್
author img

By ETV Bharat Karnataka Team

Published : Nov 6, 2023, 8:47 PM IST

ಬೆಂಗಳೂರು : ಉದ್ಯೋಗಿಯೊಬ್ಬರು ಉದ್ಯೋಗದಾತರಿಗೆ ಸಲ್ಲಿಸಿದ ರಾಜೀನಾಮೆ ಪತ್ರವನ್ನು ಆತನ ಪರವಾಗಿ ಪತ್ನಿ ಅಥವಾ ಮಕ್ಕಳು ಹಿಂಪಡೆಯಲು ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪತ್ನಿಯ ಮನವಿ ಮೇರೆಗೆ ತನ್ನ ರಾಜೀನಾಮೆ ಪತ್ರ ಅಂಗೀಕರಿಸದಿರಲು ಉದ್ಯೋಗದಾತ ಸಂಸ್ಥೆ ಕೈಗೊಂಡಿದ್ದ ನಿರ್ಣಯ ರದ್ದು ಮಾಡಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ, ಮಂಡ್ಯ ಜಿಲ್ಲೆಯ ಮದ್ದೂರಿನ ಡಿ ವೆಂಕಟೇಶ್‌ ಎಂಬುವರು ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.

ಸ್ವತಃ ನೌಕರನೇ ಉದ್ಯೋಗದಲ್ಲಿ ಇರಲು ಸಿದ್ಧರಿಲ್ಲದೇ ರಾಜೀನಾಮೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಆತನ ಪತ್ನಿ ಅಥವಾ ಮಕ್ಕಳು ಉದ್ಯೋಗಿ ಸೇವೆಯಲ್ಲಿ ಮುಂದುವರೆಯಲು ಹೇಗೆ ಕಾರಣವಾಗುತ್ತಾರೆ. ಇದು ಬಾಯಾರಿಕೆಯಿಲ್ಲದಿದ್ದರೂ ಇಷ್ಟವಿಲ್ಲದ ಕುದುರೆಯನ್ನು ನೀರು ಕುಡಿಯಲು ನದಿಗೆ ಎಳೆದಂತಾಗುತ್ತದೆ. ರಾಜೀನಾಮೆಯು ಉದ್ಯೋಗಿಯ ಸ್ವಯಂಪ್ರೇರಿತ ಕ್ರಿಯೆಯಾಗಿದೆ. ಅದನ್ನು ಸಲ್ಲಿಸುವ ಮೂಲಕ ಆತ ಸೇವೆಯನ್ನು ತೊರೆಯಲು ಪ್ರಯತ್ನಿಸುತ್ತಾನೆ. ಹೀಗಾಗಿ, ಉದ್ಯೋಗದಾತ ಸಂಸ್ಥೆಯು ಅಂಗೀಕರಿಸುವ ಮೊದಲೇ ರಾಜೀನಾಮೆಯನ್ನು ಸ್ವತಃ ಉದ್ಯೋಗಿ ಹಿಂಪಡೆಯಬೇಕು. ಅದನ್ನು ಹೊರತುಪಡಿಸಿ ಪತ್ನಿ ಮತ್ತು ಮಕ್ಕಳು ಉದ್ಯೋಗಿಯ ಪರವಾಗಿ ರಾಜೀನಾಮೆ ಹಿಂಪಡೆಯಲು ಅವಕಾಶವಿಲ್ಲ ಎಂದು ಪೀಠ ಹೇಳಿದೆ.

ಅಲ್ಲದೇ, ಉದ್ಯೋಗಿಯೇ ರಾಜೀನಾಮೆ ಪತ್ರ ಹಿಂಪಡೆಯಬೇಕು. ಹಿಂಪಡೆಯುವ ಮನವಿಯು ಉದ್ಯೋಗಿಯಿಂದಲೇ ಸಲ್ಲಿಕೆಯಾಗಬೇಕು. ಈ ಪ್ರಕರಣದಲ್ಲಿ ನೌಕರನ ರಾಜೀನಾಮೆಯನ್ನು ಹಿಂತೆಗೆದುಕೊಳ್ಳಲು ಆತನ ಪತ್ನಿ ಕೋರಿದ್ದಾರೆ. ಉದ್ಯೋಗಿಯ ಪತ್ನಿಯ ಅಂತಹ ಹಕ್ಕು ಹೊಂದಿರುವುದನ್ನು ದೃಢಿಕರಿಸುವ ಯಾವುದೇ ನಿಯಮವನ್ನು ನ್ಯಾಯಾಲಯದ ಗಮನಕ್ಕೆ ತಂದಿಲ್ಲ. ಇಂತಹ ಪರಿಕಲ್ಪನೆಯು ಸೇವಾ ಕಾನೂನಿಗೆ ವಿರುದ್ಧವಾಗಿದೆ ಎಂದು ಆದೇಶಿಸಿ, ಏಕಸದಸ್ಯ ಪೀಠದ ತೀರ್ಪನ್ನು ಪುರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ: ಮಂಡ್ಯದ ಮದ್ದೂರಿನ ಡಿ ವೆಂಕಟೇಶ್ ಎಂಬುವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ ಉದ್ಯೋಗಿಯಾಗಿದ್ದರು. ಅವರು 2021ರ ನವೆಂಬರ್​​ 11ರಂದು ತಮ್ಮ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕರಿಸುವ ನಿರ್ಣಯವನ್ನು ಸಂಘವು ಕೈಗೊಂಡಿತ್ತು. ಬಳಿಕ ಉದ್ಯೋಗಿಯ ಪತ್ನಿಯು ರಾಜೀನಾಮೆ ಪತ್ರ ಹಿಂಪಡೆಯಲು ಅನುಮತಿ ಕೋರಿ ಉದ್ಯೋಗ ಸಂಸ್ಥೆಗೆ ಪತ್ರ ಸಲ್ಲಿಸಿದ್ದರು. ಅದನ್ನು ಆಧರಿಸಿ ರಾಜೀನಾಮೆ ಅಂಗೀಕರಿಸದಿರಲು ಸಂಘವು ನಿರ್ಣಯ ತೆಗೆದುಕೊಂಡಿತ್ತು.

ಈ ಕ್ರಮವನ್ನು ಪ್ರಶ್ನಿಸಿ ಸಂಘದ ಮತ್ತೋರ್ವ ಉದ್ಯೋಗಿ ಹೈಕೋರ್ಟ್‌ಗೆ ತರಕಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ವೆಂಕಟೇಶ್‌ ಅವರ ರಾಜೀನಾಮೆ ಅಂಗೀಕರಿಸದಿರಲು ಸಂಘ ಕೈಗೊಂಡಿದ್ದ ನಿರ್ಣಯವನ್ನು ರದ್ದುಪಡಿಸಿ, 2022ರ ಅಕ್ಟೋಬರ್​​ 13ರಂದು ಆದೇಶಿಸಿತ್ತು. ಆ ಆದೇಶ ರದ್ದು ಮಾಡುವಂತೆ ಕೋರಿ ವೆಂಕಟೇಶ್‌ ವಿಭಾಗೀಯ ಪೀಠದ ಮೊರೆ ಹೋಗಿದ್ದರು.

ಇದನ್ನೂ ಓದಿ: ಸಾರ್ವಜನಿಕ ಹಿತಾಸಕ್ತಿಯ ಕುಟುಕು ಕಾರ್ಯಾಚರಣೆಗೆ ಹೈಕೋರ್ಟ್ ಸಮ್ಮತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.