ETV Bharat / state

ಸಲಿಂಗ ವಿವಾಹಕ್ಕೆ ಮಾನ್ಯತೆ, ಲೈಂಗಿಕ ಅಲ್ಪಸಂಖ್ಯಾತರ ರಕ್ಷಣೆ ವಿಚಾರ: ರಾಷ್ಟ್ರಪತಿಗೆ ಪತ್ರ ಬರೆದ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ

ಅಂತಾರಾಷ್ಟ್ರೀಯ ಲಿಂಗತ್ವ ವಿರುದ್ಧ ದೌರ್ಜನ್ಯ, ಲೈಂಗಿಕ ಅಲ್ಪಸಂಖ್ಯಾತರ ವಿರೋಧಿ ದಿನದ ನಿಮಿತ್ತ ದ್ರೌಪದಿ ಮುರ್ಮು ಅವರಿಗೆ ಅಕ್ಕೈ ಪದ್ಮಶಾಲಿ ಪತ್ರ ಬರೆದಿದ್ದಾರೆ.

ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ
ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ
author img

By

Published : May 18, 2023, 3:14 PM IST

ಬೆಂಗಳೂರು : ಸಲಿಂಗ ವಿವಾಹಕ್ಕೆ ಮ್ಯಾನತೆ, ಲೈಂಗಿಕ ಅಲ್ಪಸಂಖ್ಯಾತರು ದಿನ ನಿತ್ಯ ತಮ್ಮ ಬದುಕಿನಲ್ಲಿ ಸಮಸ್ಯೆಗಳ ಎದುರಿಸುತ್ತಿದೆ. ಈ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲು ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ತಮಗೆ ಸಮುದಾಯಕ್ಕೆ ಸೂಕ್ತ ಸ್ಥಾನ ಒದಗಿಸಬೇಕು ಎಂದು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರು ಆಗ್ರಹಿಸಿದ್ದಾರೆ. ಜೊತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಅಂತಾರಾಷ್ಟ್ರೀಯ ಲಿಂಗತ್ವ ವಿರುದ್ಧ ದೌರ್ಜನ್ಯ, ಲೈಂಗಿಕ ಅಲ್ಪಸಂಖ್ಯಾತರ ವಿರೋಧಿ ದಿನ(ಎಲ್‌ಜಿಬಿಟಿಕ್ಯೂಐಎ) ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿರುವ ಅವರು, ಸಲಿಂಗ ವಿವಾಹವನ್ನು ಕಾನೂನು ಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿ ರಚನೆ ಸೇರಿದಂತೆ ಇನ್ನಿತರ ಬೆಳವಣಿಗೆಗಳ ಕುರಿತು ಸದನದಲ್ಲಿ ಚರ್ಚಿಸಲು ಲೈಂಗಿಕ ಅಲ್ಪಸಂಖ್ಯಾತರಿಗೂ ಅವಕಾಶ ನೀಡಬೇಕು. ಅದು ಅಲ್ಲದೇ, ತಮ್ಮದೇ ಸಮಸ್ಯೆಗಳ ಕುರಿತು ಮಾತನಾಡಲು ನಮಗೆ ಅವಕಾಶ ಇಲ್ಲದಿರುವುದು ಖಂಡನೀಯ ಎಂದಿದ್ದಾರೆ.

ಈ ಬಾರಿ ಸಲಿಂಗ ವಿವಾಹ ಕುರಿತು ಚರ್ಚೆ ನಡೆಸುವ ಸಲುವಾಗಿ ಸದನಕ್ಕೆ ತೆರಳಲು ನಮಗೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಆಯಾ ರಾಜ್ಯಗಳಲ್ಲಿಯೂ ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಪೊಲೀಸರು ಮತ್ತಿತರರ ವಿರುದ್ಧ ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.

ಕಠಿಣ ಕಾನೂನು ಅಗತ್ಯ : ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆಯಾದರೂ ಅವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಾಜದಲ್ಲಿ ಗೌರವ, ಸ್ವಾಭಿಮಾನದಿಂದ ಬದುಕುವಂತಾಗಬೇಕು. ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ ಎಂದೂ ಅಕ್ಕೈ ಪದ್ಮಶಾಲಿ ನುಡಿದಿದ್ದಾರೆ.

ದೇಶವ್ಯಾಪ್ತಿ ಸಲಿಂಗ ವಿವಾಹಕ್ಕೆ ವಿರೋಧ : ಈಗಾಗಲೇ ಸುಪ್ರೀಂಕೋರ್ಟ್​ನಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ ನೇತೃತ್ವದ ನ್ಯಾಯಾಧೀಶರ ತಂಡ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಸಲಿಂಗ ವಿವಾಹ ಭಾರತದ ಸಂಸ್ಕೃತಿಗೆ ವಿರುದ್ಧವಾದದ್ದು, ಇದಕ್ಕೆ ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಬಳಿಕ ಈ ಅರ್ಜಿಗಳನ್ನು ಸಾಂವಿಧಾನಿಕ ಪೀಠದ ಮುಂದೆ ವಿಸ್ತೃತ ಚರ್ಚೆ ನಡೆಸಲು ವರ್ಗಾಯಿಸಲಾಗಿತ್ತು.

ಇದರ ಜೊತೆಗೆ ಬಾರ್​ ಕೌನ್ಸಿಲ್​ ಆಫ್​ ಇಂಡಿಯಾ (ಬಿಸಿಐ) ರಾಜ್ಯ ಬಾರ್​ ಕೌನ್ಸಿಲ್​ಗಳ ಜೊತೆ ಜಂಟಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಸಲಿಂಗ ವಿವಾಹದ ಕುರಿತು ತನ್ನ ಕಳವಳ ವ್ಯಕ್ತಪಡಿಸಿದೆ. "ಸಲಿಂಗ ವಿವಾಹ ಅತಿ ಸೂಕ್ಷ್ಮ ವಿಷಯ ಆಗಿರುವುದರಿಂದ ಸಾಮಾಜಿಕ ಧಾರ್ಮಿಕ ವಿಷಯಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕಾಂಗವನ್ನೊಳಗೊಂಡ ಸಾಮಾಜಿಕ, ಧಾರ್ಮಿಕ ಗುಂಪುಗಳ ವಿಸ್ತೃತ ಸಮಾಲೋಚನೆ ನಂತರ ಈ ಜಂಟಿ ಸಭೆಯು ಸರ್ವಾನುಮತದ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತದೆ ಎಂದು ಬಾರ್ ಕೌನ್ಸಿಲ್​ ಆಫ್​ ಇಂಡಿಯಾ ಹೇಳಿತ್ತು.

ಇದನ್ನೂ ಓದಿ : ಬಿಜೆಪಿಯನ್ನು ವಿರೋಧಿಸಲೇಬೇಕು ಎಂದು ಒಂದು ಕೋಮಿನವರು ನಮಗೆ ಮತ ಹಾಕಲಿಲ್ಲ: ಸಿ ಪಿ ಯೋಗೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.