ETV Bharat / state

ಹಿರಿಯ ನಾಗರಿಕರು ಸರ್ಕಾರಿ ಕಚೇರಿಗೆ ಬಂದಾಗ ಗೌರವದಿಂದ ವರ್ತಿಸಿ: ಇಲಾಖೆ ಎಚ್ಚರಿಕೆ

ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ, ಅವರ ಜೊತೆ ಗೌರವದಿಂದ ವರ್ತಿಸಬೇಕು. ಒಂದು ವೇಳೆ ಹಾಗೆ ವರ್ತಿಸದಿದ್ದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ.

Warning from Department of Personnel and Administrative Reforms
ವಿಧಾನಸೌಧ
author img

By

Published : Jun 7, 2022, 7:40 PM IST

ಬೆಂಗಳೂರು: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸದೇ ಇದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ.

ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಆಸನದ ವ್ಯವಸ್ಥೆ ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಕಳೆದ ಜೂನ್ 21ಕ್ಕೆ ಸುತ್ತೋಲೆ ಹೊರಡಿಸಲಾಗಿತ್ತು.

ಆದರೆ, ಸರ್ಕಾರದ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಕುರಿತು ಹಿರಿಯ ನಾಗರಿಕರುಗಳಿಂದ ದೂರುಗಳು ಸ್ವೀಕೃತವಾಗುತ್ತಿದೆ. ಈ ಹಿನ್ನೆಲೆ ಕಳೆದ ಜೂನ್ ನಲ್ಲಿ ಹೊರಡಿಸಲಾದ ಸುತ್ತೋಲೆಯನ್ನು ಅಕ್ಷರಶಃ ಪಾಲಿಸುವಂತೆ ಸಚಿವಾಲಯದ ಎಲ್ಲ ಇಲಾಖೆಗಳು ತಮ್ಮ ಅಧೀನದ ಕಚೇರಿಗಳಿಗೆ ಸ್ಪಷ್ಟ ಸೂಚನೆ ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಚಡ್ಡಿ ಮಾನವ ಕುಲದ‌ ಗೌರವ ಕಾಪಾಡುವ ಸಂಕೇತ: ಛಲವಾದಿ ನಾರಾಯಣ ಸ್ವಾಮಿ

ಇನ್ನು ಮುಂದೆ ಈ ಬಗ್ಗೆ ನಿರ್ದಿಷ್ಟ ದೂರುಗಳು ಸ್ವೀಕೃತವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು. ಈ ನಿಟ್ಟಿನಲ್ಲಿ ಇಲಾಖಾ ಮುಖ್ಯಸ್ಥರು ತಮ್ಮ ಅಧೀನ ಇಲಾಖೆಗಳಿಗೆ ಮತ್ತು ಸಿಬ್ಬಂದಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.