ETV Bharat / state

ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದ ವಿರುದ್ಧ ಆಧಾರ ರಹಿತ ಆರೋಪಕ್ಕೆ ನಿರ್ಬಂಧಕಾಜ್ಞೆ - ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ವಿರುದ್ಧ ಆಧಾರ ರಹಿತ ಆರೋಪ ಮಾಡದಂತೆ ನಿರ್ಬಂಧಕಾಜ್ಞೆ ಹೇರಲಾಗಿದೆ.

ಆಧಾರ ರಹಿತ ಆರೋಪಕ್ಕೆ ನಿರ್ಬಂಧಕಾಜ್ಞೆ
ಆಧಾರ ರಹಿತ ಆರೋಪಕ್ಕೆ ನಿರ್ಬಂಧಕಾಜ್ಞೆ
author img

By

Published : Jul 22, 2023, 6:57 AM IST

Updated : Jul 22, 2023, 10:32 AM IST

ಬೆಂಗಳೂರು: ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಸದಸ್ಯರು ಹಾಗೂ ಅವರ ನೇತೃತ್ವದ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಹಾಗೂ ಪ್ರಕಟಿಸದಂತೆ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಧರ್ಮಸ್ಥಳ ದೇವಾಲಯ, ದೇವಾಲಯದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಶೀನಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನಗರದ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.

ಅಲ್ಲದೆ, ಈ ಸಂಬಂಧ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ನೀಡಿದೆ.

ಜತೆಗೆ, ಒಂದು ವೇಳೆ ಈಗಾಗಲೇ ಟಿವಿ ಚಾನಲ್‌ಗಳು, ಫೇಸ್‌ಬುಕ್, ವಾಟ್ಸಾಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್‌ಗಳಲ್ಲಿ ಅವಹೇಳನಕಾರಿಯಾಗಿ ಪ್ರಸಾರವಾಗಿರುವ ಅಥವಾ ಹಂಚಿಕೊಂಡಿದ್ದಲ್ಲಿ ತಕ್ಷಣ ಅವುಗಳನ್ನು ತೆಗೆದು ಹಾಕುವಂತೆ ಆದೇಶ ಮಾಡಲಾಗಿರುತ್ತದೆ ಎಂದು ಶ್ರೀ ಕ್ಷೇತ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ 2012ರಲ್ಲಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳದಲ್ಲಿ ನಡೆದಿದ್ದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಆರೋಪಗಳನ್ನು ಮಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳಹೊಂಗಳ, ಸೋಮನಾಥ್ ನಾಯಕ್, ಬಿ ಎಂ ಭಟ್, ವಿಠಲ್ ಗೌಡ ಮತ್ತು ಮಾಧ್ಯಮ ಸಂಸ್ಥೆಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಧರ್ಮಸ್ಥಳ ಕ್ಷೇತ್ರದ ಅವಹೇಳನವೇಕೆ, ನಾನೇ ಸಿಬಿಐ ತನಿಖೆಗೆ ಪತ್ರ ಬರೆದಿದ್ದೆ-ವೀರೇಂದ್ರ ಹೆಗ್ಗಡೆ: ಇದೇ ವಿಚಾರದ ಕುರಿತಾಗಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಇತ್ತೀಚೆಗೆ ಪ್ರತಿಕ್ರಿಯಿಸಿದ್ದರು. ಧರ್ಮಸ್ಥಳ ಕ್ಷೇತ್ರದ ಸಾಧನೆಯನ್ನು ಕಂಡು ದ್ವೇಷ ಸಾಧಿಸುತ್ತಿರುವ ಕೆಲವರು ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಈ ಕುರಿತು ನಮಗೆ ಯಾವುದೇ ಭಯವಿಲ್ಲ. ನಾವು ನೈತಿಕವಾಗಿ ಗಟ್ಟಿಯಾಗಿದ್ದೇವೆ. ನಮಗೆ ಕೋಟ್ಯಂತರ ಅಭಿಮಾನಿಗಳ ಬಳಗವಿದೆ.

ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, "ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅಂದಿನ ಮುಖ್ಯಮಂತ್ರಿಯವರಿಗೆ ಕೋರಿದ್ದೇ ನಾನು. ತನಿಖೆ ಮಾಡುವಂತೆ ಸರ್ಕಾರಕ್ಕೆ ನಾನೇ ಮೊದಲು ಪತ್ರ ಬರೆದಿದ್ದೆ. ಸಿಬಿಐಸಹಿತ ಯಾವುದೇ ತನಿಖೆ ಮಾಡಿದರೂ ಅದನ್ನು ಸ್ವಾಗತಿಸುತ್ತೇವೆ. ಕೆಲವರು ದುರುದ್ದೇಶಪೂರ್ವಕವಾಗಿ ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ನೋವು ತಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ, ಅದರಿಂದ ನಮಗೆ ಯಾವುದೇ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯವನ್ನು ಯಾಕೆ ಮಧ್ಯೆ ಎಳೆಯುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ" ಎಂದಿದ್ದರು.

ಇದನ್ನೂ ಓದಿ: ಸಿಬಿಐ ತನಿಖೆಗೆ ನಾನೇ ಪತ್ರ ಬರೆದಿದ್ದೆ; ಧರ್ಮಸ್ಥಳ ಕ್ಷೇತ್ರದ ಅವಹೇಳನವೇಕೆ?: ವೀರೇಂದ್ರ ಹೆಗ್ಗಡೆ

Last Updated : Jul 22, 2023, 10:32 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.