ETV Bharat / state

ಹಿರಿಯ ನಾಗರಿಕರ ಸಂಚಾರಕ್ಕೆ ನಿರ್ಬಂಧ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್​​ - High Court Notice to Government

ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯುವ ಉದ್ದೇಶದಿಂದ ಹಾಗೂ ವೈರಸ್​ ಹಬ್ಬುವುದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಹಿರಿಯ ನಾಗರಿಕರ ಓಡಾಟಕ್ಕೆ ನಿರ್ಬಂಧ ಹೇರಿದೆ. ಇದನ್ನು ಪ್ರಶ್ನಿಸಿ ಬಿ.ಎನ್. ಜಯದೇವ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ರು. ವಾದ ಆಲಿಸಿದ ಕೋರ್ಟ್​ ಸರ್ಕಾರ ಸೇರಿ ಅರ್ಜಿಯಲ್ಲಿರುವ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 28, 2020, 11:20 PM IST

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸುವ ಕ್ರಮವಾಗಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗೆ ಪ್ರತಿಕ್ರಿಯಿಸಿದ ಹೈಕೋರ್ಟ್​, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಹಾಗೂ ವೈರಸ್ ಹಬ್ಬುವುದನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಲಾಕ್‌ಡೌನ್ ನಿಯಮಗಳಲ್ಲಿ ಹಿರಿಯ ನಾಗರಿಕರ ಓಡಾಟಕ್ಕೆ ನಿರ್ಬಂಧ ಹೇರಿದೆ. ಸರ್ಕಾರದ ಈ ಕ್ರಮ ಪ್ರಶ್ನಿಸಿ ಬಿ.ಎನ್. ಜಯದೇವ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಅರ್ಜಿಯಲ್ಲಿರುವ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ಜೂ.4ರೊಳಗೆ ಪ್ರತಿಕ್ರಿಯಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿ, ಕೊರೊನಾ ಸೋಂಕು ತಡೆಯುವ ಕ್ರಮವಾಗಿ 65 ವರ್ಷದ ದಾಟಿದವರಿಗೆ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಕ್ರಮ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಹಿರಿಯ ನಾಗರಿಕರಿಗೆ ಸಂಚಾರದ ಸ್ವಾತಂತ್ರ್ಯವಿದೆ. ಇತರೆ ನಾಗರಿಕರಂತೆ ಅವರಿಗೂ ಸಂಚಾರಕ್ಕೆ ಅವಕಾಶ ನೀಡಬೇಕು. ಮನೆಯಲ್ಲೇ ಇರಬೇಕೆಂಬ ನಿರ್ಬಂಧದಿಂದ ಹಿರಿಯ ನಾಗರಿಕರಿಗೆ ತೊಂದರೆಯಾಗಿದೆ. ಹೀಗಾಗಿ, ಸರ್ಕಾರದ ನಿರ್ಬಂಧ ರದ್ದುಗೊಳಿಸಬೇಕು ಎಂದು ಕೋರಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.