ETV Bharat / state

ನಿವೃತ್ತ ಡಿವೈಎಸ್ಪಿ ಹನುಮಂತಪ್ಪ ಸಾವು ಪ್ರಕರಣ: ಪೊಲೀಸರಿಂದ ತನಿಖೆ ಚುರುಕು

ಇತ್ತೀಚೆಗೆ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಿವೃತ್ತ ಡಿವೈಎಸ್​ಪಿ ಹನುಮಂತಪ್ಪ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿತ್ತು. ಇದೀಗ ಅವರ ಸಾವಿನ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Hanumanthappa
ನಿವೃತ್ತ ಡಿವೈಎಸ್ಪಿ ಹನುಮಂತಪ್ಪ
author img

By

Published : Dec 29, 2020, 12:47 PM IST

ಬೆಂಗಳೂರು: ನಿವೃತ್ತ ಡಿವೈಎಸ್ಪಿ ಹನುಮಂತಪ್ಪ ಸಾವು ಪ್ರಕರಣದ ಹಿಂದೆ ಇದೀಗ ಕೆಲವು ಅನುಮಾನಗಳು ಮೂಡಿವೆ. ಈ ಹಿಂದೆ ಹನುಮಂತಪ್ಪ ಅವರಿಗೆ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನೋಟಿಸ್​ಗೆ ಹೆದರಿ ‌ಸಾವನ್ನಪ್ಪಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ತ‌ನಿಖೆ ಮುಂದುವರೆಸಿದ್ದಾರೆ.

ಅ.28 ರಂದು ಶಿವನಸಮುದ್ರ ಬಳಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಈ ಪ್ರಕರಣ ಭೇದಿಸಿದ್ದ ಬೆಳಕವಾಡಿ ಪೊಲೀಸರು‌ ಹನುಮಂತಪ್ಪ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಹೇಳಲಾಗುತ್ತಿದೆ.

ಮಹಿಳೆಯನ್ನು ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಮೃತದೇಹದ ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ನಿಖರವಾದ ಕಾರಣ ಹುಡುಕುತ್ತಿದ್ದಾರೆ.

ಓದಿ: ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಡಿವೈಎಸ್​ಪಿ ಆತ್ಮಹತ್ಯೆ

ವಿಜಯನಗರ ಉಪವಿಭಾಗದಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸಿರುವ ಹನುಮಂತಪ್ಪ ವೀರಪ್ಪನ್ ವಿರುದ್ದದ ಕಾರ್ಯಚರಣೆಯಲ್ಲಿಯೂ ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ಗುಂಡೇಟು ತಗುಲಿತ್ತು. ಕೊನೆಯದಾಗಿ ಯಶವಂತಪುರ ಉಪವಿಭಾಗ ಎಸಿಪಿಯಾಗಿ ಕರ್ತವ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಹೊಂದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.